BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ
  • ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ
  • ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ
  • ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ
  • ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ
  • ನಗರದ ಘೋಷಿತ ಕೊಳಚೆ ಪ್ರದೇಶಗಳನ್ನು ಪುನರ್ ಪರಿಶೀಲಿಸಿ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
  • ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ: ಮಾನವೀಯತೆ ಮೆರೆದ ಯುವಕರು
  • ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಿಗಧಿತ ಕಾಲಾವಧಿಯೊಳಗೆ ಬಿಲ್ಲು ಸಲ್ಲಿಸಲು ಇಂಜಿನಿಯರುಗಳಿಗೆ ಸೂಚನೆ
Trending

ನಿಗಧಿತ ಕಾಲಾವಧಿಯೊಳಗೆ ಬಿಲ್ಲು ಸಲ್ಲಿಸಲು ಇಂಜಿನಿಯರುಗಳಿಗೆ ಸೂಚನೆ

By News Desk BenkiyabaleUpdated:February 03, 2021 7:13 pm

 ತುಮಕೂರು :

      ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿವಿಧ ಇಲಾಖೆಗಳು ಕೈಗೊಂಡು ಪೂರ್ಣಗೊಳಿಸಿರುವ ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ಪಾವತಿಗಾಗಿ ಕೂಡಲೇ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಇಂಜಿನಿಯರುಗಳಿಗೆ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪೂರ್ಣಗೊಂಡ ಕಾಮಗಾರಿಗಳ ಬಿಲ್ಲುಗಳನ್ನು ಸಕಾಲದಲ್ಲಿ ಸಲ್ಲಿಸದ್ದಿದ್ದರೆ ಅನುದಾನ ರದ್ದಾಗುತ್ತದೆ. ಅನುದಾನ ರದ್ದಾದರೆ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

      ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳ ವಿವಿಧ ಲೆಕ್ಕ ಶೀರ್ಷಿಕೆ/ಯೋಜನೆಗಳಡಿ ಅನುಮೋದಿತ ಕಾಮಗಾರಿಗಳನ್ನು ಬದಲಾವಣೆಗಾಗಿ ಸೂಕ್ತ ಕಾರಣ ನೀಡಿದಾಗ ಮಾತ್ರ ಬದಲಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಲಾಗುವುದೆಂದರು.

     ಅನುದಾನ ಕೊರತೆ, ನ್ಯಾಯಾಲಯದ ದಾವೆ, ಏಜೆನ್ಸಿ ಬದಲಾವಣೆ ಮತ್ತಿತರ ಕಾರಣಗಳಿಂದ ಬದಲಿ ಕಾಮಗಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದಾಗ, ಸಭೆಯ ಸರ್ವಸದಸ್ಯರೆಲ್ಲ ಬದಲಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ನಂತರ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಬದಲಿ ಕಾಮಗಾರಿಗಳನ್ನು ಶೀಘ್ರವೇ ಕೈಗೊಂಡು ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಪೂರ್ಣಗೊಂಡ ಕಾಮಗಾರಿಗೆ ಮಾತ್ರ ಬಿಲ್ಲುಗಳನ್ನು ಸಲ್ಲಿಸಬೇಕು. ಕಾಮಗಾರಿ ಪೂರ್ಣಗೊಳ್ಳದಿದ್ದರೆ ಬಿಲ್ಲನ್ನು ಸಲ್ಲಿಸುವಂತಿಲ್ಲವೆಂದು ನಿರ್ದೇಶನ ನೀಡಿದರು.

      ಜಿಲ್ಲಾ ಪಂಚಾಯತ್ ಸದಸ್ಯೆ ಗಾಯಿತ್ರಿ ಬಾಯಿ ಮಾತನಾಡಿ, ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ನಿಯೋಜಿತ ಏಜೆನ್ಸಿಗಳೇ ನಿರ್ವಹಣೆ ಮಾಡುತ್ತಿಲ್ಲ. ಕಾಮಗಾರಿ ವಿವರಗಳನ್ನು ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡುತ್ತಿಲ್ಲವೆಂದು ಆರೋಪಿಸಿದಾಗ, ಪ್ರತಿಕ್ರಿಯಿಸಿದ ಸಿಇಒ ಒಂದು ವಾರದೊಳಗಾಗಿ ಸಂಬಂಧಿಸಿದ ಇಂಜಿನಿಯರುಗಳು ಅನುಸರಣೆ ಮಾಡಿ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದರು.

      ಮತ್ತೋರ್ವ ಸದಸ್ಯರಾದ ಕೆಂಚಮಾರಯ್ಯ ಮಾತನಾಡಿ, ನರೇಗಾ ಕಾಮಗಾರಿ ಅನುಷ್ಠಾನ ಮಾಡುವ ಇಂಜಿನಿಯರುಗಳನ್ನು ಪದೇ ಪದೇ ವರ್ಗಾವಣೆ ಮಾಡಬೇಡಿ, ಇದರಿಂದ ಕಾಮಗಾರಿ ಪ್ರಗತಿ ಕುಂಠಿತವಾಗುತ್ತದೆ ಎಂದು ಸಲಹೆ ನೀಡಿದರು.

      ನಂತರ ಜಿಲ್ಲಾ ಪಂಚಾಯತಿಯ ಪ್ರತಿದಿನದ ಖರ್ಚು-ವೆಚ್ಚ, ಅನುದಾನ ಕೊರತೆ ಮತ್ತಿತರ ಹಣಕಾಸು ವ್ಯವಹಾರಗಳ ಬಗ್ಗೆ ಮಾಹಿತಿ ಅಪ್‍ಡೇಟ್ ಇರಬೇಕು. ವಾಕ್ ಶ್ರವಣದೋಷವುಳ್ಳ ಅಂಧರು ಸೇರಿದಂತೆ ವಿಕಲಚೇತನರಿಗೆ ಮೀಸಲಿರುವ ಅನುದಾನ ಸಮರ್ಪಕವಾಗಿ ಸದ್ಬಳಕೆಯಾಗುತ್ತಿಲ್ಲ ಎಂದು ಸದಸ್ಯರಾದ ವೈ.ಹೆಚ್.ಹುಚ್ಚಯ್ಯ ಅವರು ತಿಳಿಸಿದಾಗ, ಸಿಇಒ ಶುಭಾ ಕಲ್ಯಾಣ್ ಪ್ರತಿಕ್ರಿಯಿಸಿ ವಿಕಲಚೇತನರ ಅನುದಾನಕ್ಕೆ ಸಂಬಂಧಿಸಿದಂತೆ ತುಮಕೂರು ಹಾಗೂ ತಿಪಟೂರು ತಾಲೂಕಿನ ಕ್ರಿಯಾ ಯೋಜನೆ ತಯಾರಿಕೆ ಬಾಕಿಯಿದ್ದು, ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲು ವಿಕಲಚೇತನ ಕಲ್ಯಾಣಾಧಿಕಾರಿ ರಮೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಎಸ್.ನಟರಾಜ್ ಅವರಿಗೆ ನಿರ್ದೇಶನ ನೀಡಿದರು.

     ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳು 2019-20, 2020-21ನೇ ಸಾಲಿನಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಯಾವುದೇ ಕೊಳವೆ ಬಾವಿ ಕೊರೆಯದೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಕಳೆದ 2018-19ನೇ ಸಾಲಿನಲ್ಲಿ ಕೊರೆಯಲಾದ ಕೊಳವೆ ಬಾವಿಗಳಿಗೆ ಪಂಪುಸೆಟ್ ಅಳವಡಿಸದೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಲ್ಲವೆಂದು ಸದಸ್ಯ ಕೆಂಚಮಾರಯ್ಯ ಸಭೆಯ ಗಮನಕ್ಕೆ ತಂದಾಗ ಕೊಳವೆ ಬಾವಿ ಕೊರೆಸಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮತ್ತೋರ್ವ ಸದಸ್ಯ ಚನ್ನಮಲ್ಲಪ್ಪ ಮಾತನಾಡಿ, ಹಾಲು ಉತ್ಪಾದಕ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ಹೊರತುಪಡಿಸಿ ಉಳಿದ ವಾಣಿಜ್ಯ ಬ್ಯಾಂಕುಗಳು ಸಾಲ ಸೌಲಭ್ಯ ನೀಡದೇ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧ್ಯಕ್ಷರ ಗಮನ ಸೆಳೆದಾಗ ಸ್ಪಂದಿಸಿದ ಲತಾ ರವಿಕುಮಾರ್ ಸಾಲ ಸೌಲಭ್ಯ ನೀಡದಿರುವ ಬ್ಯಾಂಕುಗಳಿಗೆ ಮನವರಿಕೆ ಮಾಡಿ ಅರ್ಹ ಫಲಾನುಭವಿಗಳಿಗೆ ಸಾಲ ಒದಗಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಲೀಡ್‍ಬ್ಯಾಂಕ್ ಮ್ಯಾನೇಜರ್‍ಗೆ ನಿರ್ದೇಶನ ನೀಡಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಾಲರಾಜ್ ಮಾತನಾಡಿ, 2021-22ನೇ ಸಾಲಿನ 182166.56 ಲಕ್ಷ ರೂ.ಗಳ ಕರಡು ವಾರ್ಷಿಕ ಆಯವ್ಯಯವನ್ನು ಸಿದ್ಧಪಡಿಸಿದ್ದು, ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಕರಡು ಆಯವ್ಯಯದಲ್ಲಿ ಲೋಕೊಪಯೋಗಿ ಇಲಾಖೆಗೆ 674 ಲಕ್ಷ ರೂ., ಸಾಮಾನ್ಯ ಶಿಕ್ಷಣಕ್ಕಾಗಿ 118419 ಲಕ್ಷ ರೂ., ಕ್ರೀಡೆ ಮತ್ತು ಯುವಜನ ಸೇವೆಗಾಗಿ 230 ಲಕ್ಷ ರೂ., ವೈದ್ಯಕೀಯ ಮತ್ತು ಜನಾರೋಗ್ಯ-6918 ಲಕ್ಷ ರೂ., ಕುಟುಂಬ ಕಲ್ಯಾಣಕ್ಕಾಗಿ 3551 ಲಕ್ಷ ರೂ., ನೀರು ಸರಬರಾಜು ಮತ್ತು ನೈರ್ಮಲ್ಯಕ್ಕಾಗಿ 131 ಲಕ್ಷ ರೂ., ಪ.ಜಾತಿ/ಪ.ಪಂಗಡ/ಇತರೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 16372 ಲಕ್ಷ ರೂ., ಕಾರ್ಮಿಕ ಮತ್ತು ಉದ್ಯೋಗಕ್ಕಾಗಿ 104 ಲಕ್ಷ ರೂ., ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣಕ್ಕಾಗಿ 10614 ಲಕ್ಷ ರೂ., ಪೌಷ್ಠಿಕ ಆಹಾರಕ್ಕಾಗಿ 7632 ಲಕ್ಷ ರೂ., ಸಸ್ಯ ಸಂಗೋಪನೆಗಾಗಿ 3143 ಲಕ್ಷ ರೂ., ಜಲಸಂರಕ್ಷಣೆ-176 ಲಕ್ಷ ರೂ., ಪಶುಸಂಗೋಪನೆ-4492 ಲಕ್ಷ ರೂ., ಅರಣ್ಯ-1002 ಲಕ್ಷ ರೂ., ಮೀನುಗಾರಿಕೆ-236 ಲಕ್ಷ ರೂ., ಗ್ರಾಮೀಣಾಭಿವೃದ್ಧಿ-6144 ಲಕ್ಷ ರೂ., ಸಣ್ಣ ನೀರಾವರಿ-279 ಲಕ್ಷ ರೂ., ಗ್ರಾಮೀಣ ಮತ್ತು ಸಣ್ಣ ಉದ್ಯಮಗಳಿಗಾಗಿ 806 ಲಕ್ಷ ರೂ., ರಸ್ತೆ ಮತ್ತು ಸೇತುವೆಗಾಗಿ 1050 ಲಕ್ಷ ರೂ., ಸೇರಿದಂತೆ ಒಟ್ಟು 182166.56 ಲಕ್ಷ ರೂ.ಗಳಿಗೆ ಕರಡು ಆಯವ್ಯಯವನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರಲ್ಲದೇ, ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಪ್ರಗತಿ ಮಾಹಿತಿ ನೀಡುತ್ತಾ, ಹೊಸದಾಗಿ 281 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 575.91 ಲಕ್ಷ ರೂ.ಗಳ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಗೆ ಗೈರು ಹಾಜರಾಗಿದ್ದ ವಿವಿಧ ನಿಗಮದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಶುಭಾ ಕಲ್ಯಾಣ್ ಮುಖ್ಯ ಯೋಜನಾಧಿಕಾರಿಗೆ ನಿರ್ದೇಶನ ನೀಡಿದರಲ್ಲದೇ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳು ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದರಿಂದ ಅನುದಾನ ಖರ್ಚಾಗದೇ ಬಾಕಿ ಉಳಿದಿದ್ದು, ಉಳಿದಿರುವ ಹಣವಿದ್ದಲ್ಲಿ ವಿದ್ಯಾರ್ಥಿನಿಲಯಕ್ಕೆ ಅಗತ್ಯವಿರುವ ಹಾಸಿಗೆ ಖರೀದಿಸಲು ಅನುಮತಿ ನೀಡಬೇಕೆಂದು ಸದಸ್ಯರ ಅನುಮತಿ ಕೋರಿದಾಗ, ಹಣ ದುರ್ಬಳಕೆಯಾಗದಂತೆ ಸ್ಥಾಯಿ ಸಮಿತಿ ಅನುಮೋದನೆ ಪಡೆದು ಸದ್ವಿನಿಯೋಗ ಮಾಡಲು ಸರ್ವಸದಸ್ಯರು ಒಪ್ಪಿಗೆ ಸೂಚಿಸಿದರು.

     ಸಭೆಯಲ್ಲಿ ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ, ವಿವಿಧ ಸ್ಥಾಯಿ ಸಮಿತಿಗಳ ಚೌಡಪ್ಪ, ರಾಮಚಂದ್ರಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸದಸ್ಯರು, ಜನಪ್ರತಿನಿಧಿಗಳು ಹಾಜರಿದ್ದರು.

(Visited 16 times, 1 visits today)
Previous Articleಲಿಕ್ಕರ್ ಮಾರಾಟ ಮಾಡುವವರಿಗೆ ಪೊಲೀಸ್ ಇಲಾಖೆಯಿಂದ ಕಿರುಕುಳ
Next Article ಗುಬ್ಬಿ ; ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾಡಿಗೆರೆ ಗ್ರಾಮಸ್ಥರ ಶಾಪ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ

January 12, 2026 3:05 pm
ಇತರೆ ಸುದ್ಧಿಗಳು

ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ

January 12, 2026 3:04 pm
ಇತರೆ ಸುದ್ಧಿಗಳು

ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

January 12, 2026 3:02 pm
ಇತರೆ ಸುದ್ಧಿಗಳು

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ

January 12, 2026 3:01 pm
ಇತರೆ ಸುದ್ಧಿಗಳು

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ

January 12, 2026 3:00 pm
ಇತರೆ ಸುದ್ಧಿಗಳು

ನಗರದ ಘೋಷಿತ ಕೊಳಚೆ ಪ್ರದೇಶಗಳನ್ನು ಪುನರ್ ಪರಿಶೀಲಿಸಿ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

January 12, 2026 2:58 pm
Our Youtube Channel
Our Picks

ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ

January 12, 2026 3:05 pm

ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ

January 12, 2026 3:04 pm

ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

January 12, 2026 3:02 pm

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ

January 12, 2026 3:01 pm

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ

January 12, 2026 3:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ

By News Desk BenkiyabaleJanuary 12, 2026 3:05 pm

ಕೊರಟಗೆರೆ: ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿ ಎಂಬ ಸದಾಶಯದೊಂದಿಗೆ, ಸರ್ವಧರ್ಮ ಗುರುಗಳ ನೇತೃತ್ವದಲ್ಲಿ…

ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ

January 12, 2026 3:04 pm

ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

January 12, 2026 3:02 pm

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ

January 12, 2026 3:01 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.