BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
Trending

ಗ್ರಾಮಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

By News Desk BenkiyabaleUpdated:May 22, 2021 6:37 pm

ತುಮಕೂರು :

      ಗ್ರಾಮಗಳು ಕೊರೋನಾ ಬಾಧಿತ ಪ್ರದೇಶಗಳಾಗದಂತೆ ಸೋಂಕಿನ ಸಂಪೂರ್ಣ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗಿರುವ ಗ್ರಾಮಗಳಲ್ಲಿ ಸೋಂಕಿನ ನಿಯಂತ್ರಣಕ್ಕೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ನಿರ್ದೇಶಿಸಿದರು.

      ಸೋಂಕಿತರನ್ನು ಕಡ್ಡಾಯವಾಗಿ ಕೊರೋನಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಕೊರೋನಾ ಆರೈಕೆ ಕೇಂದ್ರಕ್ಕೆ ಬರಲು ಹಿಂದೇಟು ಹಾಕುವ ಸೋಂಕಿತರಿಗೆ ಆಯಾ ಸ್ಥಳೀಯ ಜನಪ್ರತಿನಿಧಿಗಳು ಅವರಿಗೆ ಮನವರಿಕೆ ಮಾಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲು ಹೆಚ್ಚು ಜವಾಬ್ದಾರಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

      ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಮಾಡಿ, ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಈಗಾಗಲೇ ನಿಗಧಿಯಾಗಿರುವ ಮದುವೆಗಳು ನಡೆಯಲು ಅನುಮತಿ ನೀಡಿ, ಹೊಸ ಮದುವೆಗಳು ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

      ಅಂಗನವಾಡಿ, ಆಶಾ ಕಾರ್ಯಕರ್ತೆರನ್ನು ಬಳಸಿಕೊಂಡು ಈಗಾಗಲೇ ಸೋಂಕಿಗೆ ಒಳಗಾಗಿ ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರ ಆರೈಕೆಗೆ ಹೆಚ್ಚು ಆದ್ಯತೆ ಕೊಡಬೇಕು. ಸೋಂಕು ದೃಢಪಟ್ಟ ಸೋಂಕಿತರಿಗೆ ಆರಂಭದ ದಿನದಿಂದಲೇ ಚಿಕಿತ್ಸೆ ನೀಡುವ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು ಎಂದು ತಿಳಿಸಿದರು.

      ಪ್ರತಿ ಕೊರೋನಾ ಆರೈಕೆ ಕೇಂದ್ರಗಳಲ್ಲಿಯೂ ಗುಣಮಟ್ಟದ ಆಹಾರ ವಿತರಣೆ ಮಾಡುವುದರ ಜೊತೆಗೆ ಉತ್ತಮ ನಿರ್ವಹಣೆ ಮಾಡಬೇಕು. ಸೋಂಕಿತರಿಂದ ದೂರುಗಳು ಕೇಳಿಬರದಂತೆ ಆರೈಕೆ ಕೇಂದ್ರಗಳನ್ನು ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

      ಹಲವು ಹೋಬಳಿ, ಗ್ರಾಮಗಳಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ಹೆಚ್ಚಿದ್ದು, ಅದರಲ್ಲೂ ಮುಖ್ಯವಾಗಿ ಜೂಜಾಟದ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವುದಕ್ಕೆ ಪೊಲೀಸ್ ಇಲಾಖೆ ತಕ್ಷಣವೇ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಎಲ್ಲಿಯೂ ಸೋಂಕಿತರಿಗೆ ಔಷಧದ ಕೊರತೆಯಾಗಬಾರದು. ಚಿಕಿತ್ಸಾ ಆರೈಕೆಯಲ್ಲೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಈಗಾಗಲೇ ಆದೇಶಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ತಾಲೂಕುವಾರು ನಿಗಧಿಪಡಿಸಿದ ಕೋವಿಡ್ ಪರೀಕ್ಷೆಗಳನ್ನು ಮಾಡುವುದರ ಜೊತೆಗೆ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಅವರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಕಾರ್ಯವೂ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚಿಸಿದರು.

      ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಆಯಾ ತಾಲೂಕಿನ, ಗ್ರಾಮದ ಜನಪ್ರತಿನಿಧಿಗಳೊಂದಿಗೆ ಕೊರೋನಾ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ,ಮಾಹಿತಿ ಪಡೆದರು. ಅಗತ್ಯವಿದ್ದರೆ ಕೊರೋನಾ ಆರೈಕೆ ಕೇಂದ್ರಗಳನ್ನು ತೆರೆಯಬೇಕು. ಹಳ್ಳಿಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಆಹಾರ ಪಡಿತರಕ್ಕೆ ಹೆಬ್ಬೆಟ್ಟು ಕಡ್ಡಾಯವಲ್ಲ. ತಂಬಿಂಗ್ ನಿಂದ ಸೋಂಕು ಹರಡುವ ಸಾಧ್ಯತೆಯಿದೆ. ಹಾಗಾಗಿ ದಿನಕ್ಕೆ 20-30 ಪಡಿತರದಾರರಿಗೆ ಕೂಪನ್ ನೀಡಿ ಪಡಿತರ ವಿತರಣೆಗೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚನೆ ನೀಡಿದರು.

      ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರನ್ನು ಸಿ.ಸಿ. ಕೇಂದ್ರಕ್ಕೆ ಸ್ಥಳಾಂತರಿಸಲು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಶಾ/ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಜನರು ಸಹಕಾರ ನೀಡದೆ ಬೆದರಿಕೆ ಹಾಕುತ್ತಿದ್ದಾರೆ. ಇದನ್ನು ತಪ್ಪಿಸಲು ಸ್ಥಳೀಯ ಕಾರ್ಯಪಡೆ ನೆರವಿನೊಂದಿಗೆ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಸಿಬ್ಬಂದಿ ಕೊರತೆ ಇದ್ದರೆ ಮೀಸಲು ಪಡೆಯನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

      ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ ಪಲ್ಸ್ ಆಕ್ಸಿಮೀಟರ್, ಸ್ಯಾನಿಟೈಸರ್, ಮಾಸ್ಕ್, ಮಾತ್ರೆ ಸೇರಿದಂತೆ ಮತ್ತಿತರ ಕೋವಿಡ್ ನಿರ್ವಹಣೆಗಾಗಿ ದಾನಿಗಳಿಂದ ನೆರವು ಬಂದಿದ್ದು. ಕೋವಿಡ್ ನಿರ್ವಹಣೆಗಾಗಿ ಪ್ರತಿ ಪಂಚಾಯತಿಗೆ ಸರ್ಕಾರ ನೀಡಿರುವ ತಲಾ 50000 ರೂ.ಗಳನ್ನು ಕುಡಿಯುವ ನೀರು ನಿರ್ವಹಣೆಗೆ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, , ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್ ಬಾಬು ಸೇರಿದಂತೆ ಇತರರಿದ್ದರು.

 

(Visited 2 times, 1 visits today)
Previous Articleಅರ್ಧಕ್ಕೆ ನಿಂತ ಒಳಚರಂಡಿ ಕಾಮಗಾರಿ ; ಹೆಚ್ಚಾದ ದುರ್ವಾಸನೆ
Next Article ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ
News Desk Benkiyabale

Related Posts

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm news

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm news
ತಾಜಾ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleJune 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು…

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.