BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೊದಲ ಡೋಸ್ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವವರೆಲ್ಲರಿಗೂ ಲಸಿಕೆ
Trending

ಮೊದಲ ಡೋಸ್ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವವರೆಲ್ಲರಿಗೂ ಲಸಿಕೆ

By News Desk BenkiyabaleUpdated:June 18, 2021 7:05 pm

ತುಮಕೂರು :

      ಕೋವಿಡ್ ಮೊದಲನೇ ಲಸಿಕೆ ಪಡೆದು 84 ದಿನ ಪೂರೈಸಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವ ಸಾರ್ವಜನಿಕರು ಸೇರಿದಂತೆ 21592 ಫ್ರಂಟ್‍ಲೈನ್ ಹಾಗೂ ಹೆಲ್ತ್ ಕೇರ್ ವರ್ಕರ್ಸ್‍ಗಳಿಗೆ ಆದ್ಯತೆ ಮೇರೆಗೆ ಶನಿವಾರ ಮತ್ತು ಭಾನುವಾರದಂದು ಹತ್ತಿರದ ಲಸಿಕಾ ಕೇಂದ್ರದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ತಹಸೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದಿಂದ ಲಸಿಕೆ ಪೂರೈಕೆಯಾಗಲಿದ್ದು, ಶನಿವಾರದಿಂದ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲಾ ಲಸಿಕಾ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಲಸಿಕೆ ಲಭ್ಯವಾಗಲಿದೆ. ಹಾಗಾಗಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 574781 ಮೊದಲ ಡೋಸ್, 123577 ಎರಡನೇ ಡೋಸ್ ಸೇರಿ ಸುಮಾರು 7 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಇದರಲ್ಲಿ ಹೆಲ್ತ್‍ಕೇರ್ ವರ್ಕರ್ಸ್‍ಗಳಿಗೆ 22222 ಮೊದಲ ಡೋಸ್, 17000 ಎರಡನೇ ಡೋಸ್; ಫ್ರಂಟ್ ಲೈನ್ ವರ್ಕರ್ಸ್‍ಗೆ 19431 ಮೊದಲನೇ ಡೋಸ್, 8560 ಎರಡನೇ ಡೋಸ್; 18 ರಿಂದ 44 ವರ್ಷದೊಳಗಿನವರಿಗೆ 84032 ಮೊದಲನೇ ಡೋಸ್ ನೀಡಲಾಗಿದ್ದು, ಎರಡನೇ ಡೋಸ್ ಇನ್ನೂ ಯಾರಿಗೂ ನೀಡಿಲ್ಲ. ಉಳಿದಂತೆ 45 ವರ್ಷದಿಂದ 60 ವರ್ಷದೊಳಗಿನವರಿಗೆ 251318 ಮೊದಲ ಡೋಸ್, 38472 ಎರಡನೇ ಡೋಸ್ ಹಾಗೂ 60 ವರ್ಷ ಮೇಲ್ಪಟ್ಟವರಿಗೆ 198778 ಮೊದಲನೇ ಡೋಸ್, 59545 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮೊದಲ ಮತ್ತು ಎರಡನೇ ಡೋಸ್ ಎರಡೂ ಸೇರಿ ಚಿಕ್ಕನಾಯನಕಹಳ್ಳಿಯಲ್ಲಿ 53732, ಗುಬ್ಬಿ-65824, ಕೊರಟಗೆರೆ-41745, ಕುಣಿಗಲ್-54730, ಮಧುಗಿರಿ-60296, ಪಾವಗಡ-48636, ಶಿರಾ-69541, ತಿಪಟೂರು-64269, ತುಮಕೂರು189364, ತುರುವೇರೆಕೆರೆಯಲ್ಲಿ 50222 ಡೋಸ್ ಲಸಿಕೆ ವಿತರಿಸಲಾಗಿದ್ದು, 45 ವರ್ಷ ಮೇಲ್ಪಟ್ಟವರಿಗೆ ಶೇ.57ರಷ್ಟು ಹಾಗೂ 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪುಗಳಿಗೆ ಶೇ.7ರಷ್ಟು ಲಸಿಕಾಕರಣ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ನಗರಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿಯೇ ಹೆಚ್ಚು ಲಸಿಕಾಕರಣ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಭಾಗದ ಜನರು ಲಸಿಕೆ ಪಡೆಯಲು ಮುಂದೆ ಬರುತ್ತಿದ್ದಾರೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ರೀತಿಯಲ್ಲಿಯೇ ಲಸಿಕೆ ಪಡೆಯಲು ಹತ್ತಿರದ ಪಿಎಚ್‍ಸಿಗಳಲ್ಲಿ ವ್ಯವಸ್ಥೆ ಮಾಡಿರುವುದರಿಂದ ಹೆಚ್ಚಾಗಿ ಲಸಿಕಾಕರಣ ಕಾರ್ಯ ಗ್ರಾಮೀಣ ಭಾಗದಲ್ಲಿಯೂ ನಡೆಯುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಚಿಕ್ಕನಾಯಕನಹಳ್ಳಿಯಲ್ಲಿ1384, ಗುಬ್ಬಿ-2668, ಕೊರಟಗೆರೆ-1440, ಕುಣಿಗಲ್-1684, ಮಧುಗಿರಿ-1950, ಪಾವಗಡ-1561, ಶಿರಾ- 2346, ತಿಪಟೂರು-2009, ತುಮಕೂರು-5263 ಹಾಗೂ ತುರುವೇಕೆರೆಯಲ್ಲಿ 1323 ಸೇರಿ ಒಟ್ಟು 21592 ಮಂದಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿದ್ದಾರೆ. ಇವರೆಲ್ಲರಿಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಲಸಿಕೆ ನೀಡಬೇಕು ಎಂದು ನಿರ್ದೇಶಿಸಿದರು.

ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವ ಫಲಾನುಭವಿಗಳ ಗ್ರಾಮವಾರು ಪಟ್ಟಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಬೇಕು ಮತ್ತು ಸಾಕಾಗುವಷ್ಟು ಸರ್ಕಾರದಿಂದ ಸರಬರಾಗಲಿರುವ ಲಸಿಕೆಯನ್ನು ಒದಗಿಸಬೇಕು. ತಾಲೂಕು ಮಟ್ಟದಲ್ಲಿ ತಂಡ ರಚಿಸಿ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಅರಿವು ಮೂಡಿಸಿ ಲಸಿಕೆ ತೆಗೆದುಕೊಳ್ಳಲು ಮನವೊಲಿಸಬೇಕು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಫಲಾನುಭವಿಗಳನ್ನು ಲಸಿಕಾಕರಣಕ್ಕೆ ಸಜ್ಜುಗೊಳಿಸಬೇಕು. ಎರಡನೇ ಡೋಸ್ ಪಡೆಯಬೇಕಿರುವ ಎಲ್ಲಾ ಅರ್ಹರಿಗೆ ಜಿಲ್ಲಾ ಮಟ್ಟದಿಂದ ಮಾಹಿತಿ ಸಂದೇಶ ಹಾಗೂ ದೂರವಾಣಿ ಮೂಲಕ ಮಾಹಿತಿ ನೀಡಿ ಲಸಿಕಾಕರಣ ಯಶಸ್ವಿ ಗೊಳಿಸಬೇಕು. ಹೆಚ್ಚುವರಿಯಾಗಿ ಆಪ್ತಮಿತ್ರ ಸಿಬ್ಬಂದಿಗಳನ್ನು ಬಳಸಿಕೊಳ್ಳಬಹುದು. ಆಪ್ತಮಿತ್ರ ಸಿಬ್ಬಂದಿಗಳು ಆರ್‍ಸಿಹೆಚ್ ಅಧಿಕಾರಿಗಳಿಂದ ಯಾವ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಯಾವ ಲಸಿಕೆಯ ಎಷ್ಟು ಡೋಸ್‍ಗಳು ಲಭ್ಯವಿದೆ ಎಂಬ ಮಾಹಿತಿ ಪಡೆದು ಫಲಾನುಭವಿಗಳಿಗೆ ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಹೆಚ್ಚಿನ ರೈತರು ಬೆಳೆ ಯೋಜನೆ ಲಾಭ ಪಡೆದುಕೊಳ್ಳಬೇಕು. ಬೀಜ ಮತ್ತು ಗೊಬ್ಬರವನ್ನು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಿಲ್ಲ. ಹೆಚ್ಚಿನ ದರದಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮವಹಿಸಲಾಗುವುದು. ರೈತರು ಸೌಲಭ್ಯ ಪಡೆಯುವ ವೇಳೆ ಕೋವಿಡ್ ನಿಯಮಾವಳಿ ಮರೆಯಬಾರದು. ಬಿತ್ತನ ಬೀಜ ವಿತರಣೆಯಲ್ಲಿ ಕಳಪೆ ಗುಣಮಟ್ಟದ ಬೀಜವೆಂದು ಸಂಶಯ ಬಂದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಿದರು.
ಪರವಾನಗಿ ಇಲ್ಲದೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವಂತಿಲ್ಲ. ಇದಲ್ಲದೆ, ಲೂಸ್(ಪ್ಯಾಕೇಟ್ ಓಪನ್ ಮಾಡಿ ಮಾರಾಟ ಮಾಡುವುದು) ಬಿತ್ತನೆ ಬೀಜ ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತಸಂಪರ್ಕ ಕೇಂದ್ರ, ಬಿತ್ತನೆ ಬೀಜ ವಿತರಣಾ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ರೈತರು ಈ ವೇಳೆ ಕೋವಿಡ್ ನಿಯಮಾವಳಿಗಳಾದ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ. ಪೂರ್ವ ಮುಂಗಾರು ಕಾರ್ಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭವಾಗುತ್ತಿದೆ. ಬೆಳೆ ಸಮೀಕ್ಷೆ ಆಪ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಕೆಕಿಸಾನ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿಕೊಳ್ಳದಿದ್ದರೆ ನೋಂದಣಿ ಮಾಡಿಸಿಕೊಂಡು ಫ್ರೂಟ್ ಐಡಿ ಪಡೆಯಬೇಕು. ಇದರಿಂದ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯ ಪಡೆಯಲು ಅನುವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಧಿಕಾರಿ ಅಜಯ್ ಸ್ಭೆರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

(Visited 45 times, 1 visits today)
Previous Articleಕೊರಟಗೆರೆ ಕ್ಷೇತ್ರಕ್ಕೆ ಕೇರಳ ಭೂ ಮಾಫಿಯಾ ಲಗ್ಗೆ
Next Article ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಸಿಗುವಂತಾಗಬೇಕು : ಶಾಸಕ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.