BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
  • ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು
  • ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ
  • ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
  • ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ
  • ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ
  • 2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ
  • ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home »  ತುಮಕೂರು : ಪಾರದರ್ಶಕ ಮತದಾನಕ್ಕೆ ಆದ್ಯತೆ ನೀಡಿ: ಡಿಸಿ
Trending

 ತುಮಕೂರು : ಪಾರದರ್ಶಕ ಮತದಾನಕ್ಕೆ ಆದ್ಯತೆ ನೀಡಿ: ಡಿಸಿ

By News Desk BenkiyabaleUpdated:December 01, 2021 4:45 pm

 ತುಮಕೂರು : 

      ಜಿಲ್ಲೆಯ ಸ್ಥಳೀಯ ಸಂಸ್ಥಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ, ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

      ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿಂದು ಜರುಗಿದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಸಂಬಂಧ ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ತರಬೇತಿ ಪಡೆದು ಯಾವುದೇ ಲೋಪದೋಷಗಳಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ಮಾಡಿಕೊಡದಂತೆ ಚುನಾವಣೆಯನ್ನು ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಸಬೇಕು ಎಂದು ಜಿಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‍ಗಳಿಗೆ ಸೂಚನೆ ನೀಡಿದರು.

      ಈ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಒಟ್ಟು 5559 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಎಂದಿನಂತೆ ನಡೆಯುವ ಸಾರ್ವತ್ರಿಕ ಚುನಾವಣೆ ವಿಧಾನಕ್ಕಿಂತ ವಿಧಾನ ಪರಿಷತ್ ಚುನಾವಣಾ ವಿಧಾನ ಭಿನ್ನವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ಚುನಾವಣೆಯ ದಿನ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಪೂರ್ಣ ಸಮಯದವರೆಗೆ ಮತ ಕೇಂದ್ರಗಳಲ್ಲಿ ಹಾಜರಿದ್ದು, ಕಾರ್ಯ ನಿರ್ವಹಿಸಬೇಕು ಎಂದರು.

      ಚುನಾವಣೆಯಲ್ಲಿ ಗ್ರಾ.ಪಂ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಪಾಲಿಕೆಯ ಚುನಾಯಿತ ಸದಸ್ಯರುಗಳು ಮತದಾರರಾಗಿದ್ದು, ಪಾಲಿಕೆ ಸೇರಿದಂತೆ ಸರ್ಕಾರಿ ಕಚೇರಿಗಳು ಮತಕೇಂದ್ರಗಳಾಗಿರುತ್ತವೆ. ಪ್ರತೀ ಮತ ಕೇಂದ್ರಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ವೈಯಕ್ತಿಕ ಆಸಕ್ತಿಗಳಿಗೆ ಎಡೆ ಮಾಡಿಕೊಡದೆ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ಪ್ರಿಸೈಡಿಂಗ್ ಅಧಿಕಾರಿ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಲ್ಲಿನ ಪಿಡಿಒ ಅಥವಾ ಕಾರ್ಯದರ್ಶಿಗಳು ಮತದಾರರನ್ನು ಗುರುತಿಸುವ ಅಧಿಕಾರ ಹೊಂದಿರುತ್ತಾರೆ. ಚುನಾವಣಾ ಸಮಿತಿಯ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಅಂಥವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.
ನಂತರ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಪೂರ್ವ ಹಾಗೂ ಮತದಾನ ನಂತರದ ಮತಗಟ್ಟೆಗಳ ಸಿದ್ಧತೆ, ನಮೂನೆಗಳ ಸಿದ್ಧಪಡಿಕೆ, ಸಹಿ-ಮೊಹರು, ಮತಪೆಟ್ಟಿಗೆಗಳ ಸೀಲಿಂಗ್, ಸಿಂಧು ಮತ್ತು ಅಸಿಂಧು ಮತಗಳು, ಮತದಾರರೊಂದಿಗೆ ಬರುವ ಅನುಮತಿಸಿದ ವ್ಯಕ್ತಿಗಳ ಹಕ್ಕುಗಳು, ಪಿಆರ್‍ಒ ಹಾಗೂ ಎಪಿಆರ್‍ಒ ಅಧಿಕಾರಿಗಳ ಜವಾಬ್ದಾರಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಲಾಯಿತು.

      ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಡಯಟ್ ಪ್ರಿನ್ಸಿಪಲ್ ಮಂಜುನಾಥ್, ಮಾಸ್ಟರ್ ಟ್ರೈನರ್ ರಂಗಧಾಮಯ್ಯ, ಎಲ್ಲಾ ತಾಲೂಕಿನ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಪೋಲಿಂಗ್ ಅಧಿಕಾರಿಗಳು, ಶಿಕ್ಷಕರು ಸೇರಿದಂತೆ ಮತ್ತಿತರರು ಹಾಜರಿದ್ದರು.

 

 

 

(Visited 15 times, 1 visits today)
Previous Articleವಿಧಾನಪರಿಷತ್ ಚುನಾವಣೆ : ಆರ್.ರಾಜೇಂದ್ರ ಪರ ಪ್ರಚಾರ ಸಭೆ
Next Article ತುಮಕೂರು : ಕಾಂಗ್ರೆಸ್ ಸೋಲಿಗೆ ಗೌಡರ ರಣತಂತ್ರ ; ಬಿಜೆಪಿಗೆ ಗೆಲುವಿನ ಮಂತ್ರ!
News Desk Benkiyabale

Related Posts

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm news
ತಾಜಾ ಸುದ್ಧಿಗಳು
news

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm
news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm
news

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm
news

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
news

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
Our Youtube Channel
Our Picks

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

By News Desk BenkiyabaleNovember 02, 2026 5:35 pm

ಹುಳಿಯಾರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್‍ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹುಳಿಯಾರು ಪಟ್ಟಣ…

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.