BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಅಭಿವೃದ್ಧಿಗೆ ಶ್ರಮಿಸುವೆ : ಸಚಿವ ಅರಗ ಜ್ಞಾನೇಂದ್ರ
Trending

ತುಮಕೂರು ಅಭಿವೃದ್ಧಿಗೆ ಶ್ರಮಿಸುವೆ : ಸಚಿವ ಅರಗ ಜ್ಞಾನೇಂದ್ರ

By News Desk BenkiyabaleUpdated:January 26, 2022 6:28 pm

ತುಮಕೂರು : 

     ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

      ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಸ್ವಾತಂತ್ರ್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಸಂವಿಧಾನ ರಚನಾ ಸಮಿತಿಯು 2 ವರ್ಷಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ನಂತರ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ 1949ರ ನವೆಂಬರ್ 26ರಂದು ಸಂವಿಧಾನವನ್ನು . ವಿಧಿಗಳು, ಅನುಸೂಚಿಗಳು ಹಾಗೂ ಅಧ್ಯಾಯಗಳನ್ನೊಳಗೊಂಡ ಭಾರತ ಸಂವಿಧಾನವು 1950ರ ಜನವರಿ 26ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪದ್ಮಭೂಷಣ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿ 3 ವರ್ಷ ಸಂದಿದ್ದು, ಪೂಜ್ಯ ಸ್ವಾಮೀಜಿಯವರು ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ರಾಜ್ಯ ಸರ್ಕಾರವು ದಾಸೋಹ ದಿನವೆಂದು ಘೋಷಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಅನ್ನ, ಅಕ್ಷರ ಹಾಗೂ ಆಶ್ರಯ ಪರಿಕಲ್ಪನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆಯಲ್ಲದೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶ್ರೀಗಳ ಭಾವಚಿತ್ರವನ್ನು ಅಳವಡಿಸಲು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಯವರ ಮಂದಸ್ಮಿತ ಭಾವಚಿತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

      ಪ್ರಪಂಚದ ಹಲವಾರು ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿ ದೇಶಕ್ಕೆ ಅರ್ಪಣೆ ಮಾಡಿದ ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ಅವರ ಕಾರ್ಯ ಚಿರಸ್ಮರಣೀಯ. ಸಂವಿಧಾನ ರಚನಾಕಾರರಲ್ಲಿ ಒಬ್ಬರಾದ ಕರ್ನಾಟಕದ ಹೆಮ್ಮೆಯ ಪುತ್ರ ಬೆನಗಲ್ ನರಸಿಂಹರಾವ್ ಅವರೂ ಕೂಡ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನಕ್ಕೆ ಸೇರಿಸಿದ್ದಾರೆ. ವಿವಿಧತೆಯಲ್ಲಿ ಏಕತೆ, ವೈವಿಧ್ಯಮಯ ಸಂಸ್ಕøತಿ, ಶ್ರೀಮಂತ ಇತಿಹಾಸವು ಸಮಗ್ರ ಭಾರತದ ಪರಿಕಲ್ಪನೆಯ ಅಡಿಪಾಯಗಳಾಗಿದ್ದು, ಶಾಂತಿ, ಅಹಿಂಸೆ, ಸಮಾನತೆ, ಸಹಬಾಳ್ವೆ ಮತ್ತು ಸರ್ವಧರ್ಮ ಸಹಿಷ್ಣುತೆ ನಮ್ಮ ಗಣತಂತ್ರ ವ್ಯವಸ್ಥೆಯ ಮೂಲ ಆಶಯವಾಗಿದೆ ಎಂದರು.

      ಮಾನ್ಯ ಮುಖ್ಯಮಂತ್ರಿ ಅವರು 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳುಳ್ಳ “ಪೆರಿಫೆರಲ್ ಕ್ಯಾನ್ಸರ್ ಕೇಂದ್ರ”, 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳುಳ್ಳ “ತಾಯಿ-ಮಕ್ಕಳ ಆಸ್ಪತ್ರೆ” ಹಾಗೂ 50ಲಕ್ಷ ರೂ. ವೆಚ್ಚದಲ್ಲಿ 10 ಹಾಸಿಗೆಗಳುಳ್ಳ “ಪೌಷ್ಟಿಕ ಪುನಃಶ್ಚೇತನ ಕೇಂದ್ರ”ಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಈಗಾಗಲೇ ನೆರವೇರಿಸಿದ್ದು, ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

      ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ಹೆಚ್ಚಾಗಿದ್ದರೂ ಶೇ.1 ರಿಂದ 3ರಷ್ಟು ಮಾತ್ರ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಉಳಿದಂತೆ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮೇಯರ್ ಬಿ.ಜಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಜಿ. ಮೋಹನ್ ಕುಮಾರ್ ಸೇರಿದಂತೆ ವಿವಿಧ ಅಧಿಕಾರಿ/ ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

(Visited 11 times, 1 visits today)
Previous Articleಕೊರಟಗೆರೆ : ಗಣರಾಜ್ಯೋತ್ಸವ ಉದ್ಘಾಟನೆಗೆ ಕಾಂಗ್ರೆಸ್ ಮುಖಂಡನಿಂದ ತಡೆ
Next Article ಮೂಡನಂಬಿಕೆ, ಕಂದಾಚಾರ ಬಿಟ್ಟು ಬದುಕು ನಡೆಸಿ
News Desk Benkiyabale

Related Posts

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm news
ತಾಜಾ ಸುದ್ಧಿಗಳು
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
Our Youtube Channel
Our Picks

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

By News Desk BenkiyabaleAugust 21, 2026 7:05 pm

ತುಮಕೂರು: ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣದಲ್ಲಿ ಸಿಲುಕಿದ್ದ ತುರುವೇಕೆರೆ ತಾಲೂಕಿನ ಮಾಯಸಂದ್ರ ನಾಡಕಚೇರಿ ವ್ಯಾಪ್ತಿಯ ತುಯಲಹಳ್ಳಿ ವೃತ್ತದ ಗ್ರಾಮ ಸಹಾಯಕ…

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.