BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಮಂಡಿಪೇಟೆ ವೃತ್ತದಲ್ಲಿ ಭೂ ಕುಸಿತ
Trending

ತುಮಕೂರು : ಮಂಡಿಪೇಟೆ ವೃತ್ತದಲ್ಲಿ ಭೂ ಕುಸಿತ

By News Desk BenkiyabaleUpdated:February 15, 2022 7:28 pm

ತುಮಕೂರು :

       ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಮಂಡಿಪೇಟೆ ವೃತ್ತದಲ್ಲಿ ಒಳಚರಂಡಿಯ ಪೈಪ್‍ಲೈನ್ ಒಡೆದು ಹೋಗಿರುವ ಪರಿಣಾಮ ಭೂಕುಸಿತ ಉಂಟಾಗಿರುವ ಘಟನೆ ನಡೆದಿದೆ.

ಮಂಡಿಪೇಟೆ ವೃತ್ತದಲ್ಲಿ ಉಂಟಾಗಿರುವ ಭೂಕುಸಿತದಿಂದಾಗಿ ಈ ಭಾಗದ ವರ್ತಕರು, ಹಮಾಲರು ಹಾಗೂ ಗ್ರಾಹಕರು ಸುಗಮ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗಿದೆ. ಪ್ರಮುಖ ವ್ಯಾಪಾರ ಕೇಂದ್ರವಾಗಿರುವ ಮಂಡಿಪೇಟೆಗೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಈಗ ಈ ವಾಹನಗಳ ಸಂಚಾರಕ್ಕೂ ತೀವ್ರ ಅಡಚಣೆಯಾಗಿದೆ.
ರಸ್ತೆ ಬದಿಯಲ್ಲೆ ಭೂಕುಸಿತ ಉಂಟಾಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅದೃಷ್ಟವಶಾತ್ ಯಾವುದೇ ಅಪಘಾತಗಳು ಸಂಭವಿಸಿಲ್ಲ.
ಮಂಡಿಪೇಟೆ ರಸ್ತೆಯಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆ ಗುಣಮಟ್ಟದಿಂದಾಗಿ ಈ ಭೂಕುಸಿತ ಉಂಟಾಗಿದೆ ಎಂಬುದು ಈ ಭಾಗದ ಸಾರ್ವಜನಿಕರ ಆರೋಪವಾಗಿದೆ.
ಶಾಸಕರ ಭೇಟಿ
ಮಂಡಿಪೇಟೆ ಸರ್ಕಲ್‍ನಲ್ಲಿ ಭೂಕುಸಿತ ಉಂಟಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಬೆಳ್ಳಂಬೆಳಿಗ್ಗೆಯೇ ಶಾಸಕ ಜ್ಯೋತಿಗಣೇಶ್ ಪಾಲಿಕೆ ಮತ್ತು ಇಂಜಿನಿಯರ್‍ಗಳು, ಪಾಲಿಕೆ ಸದಸ್ಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಗುಣಮಟ್ಟದಿಂದ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಮಂಡಿಪೇಟೆ ಸರ್ಕಲ್ ನಲ್ಲಿ ಭೂಕುಸಿತವಾಗಿರುವ ಸ್ಥಳ ಹಳೇ ಎಪಿಎಂಸಿ ಇದ್ದಂತಹ ಜಾಗ. ಕಳೆದ 26 ವರ್ಷಗಳ ಹಿಂದೆ ಮೊದಲ ಹಂತವಾಗಿ ಆಗಿದ್ದಂತಹ ಯುಜಿಡಿ ಕಾಮಗಾರಿಯ ಪೈಪ್‍ಲೈನ್‍ಗಳನ್ನು 15-16 ಅಡಿ ಕೆಳಗೆ ಹಾಕಲಾಗಿದ್ದು, ಈ ಪೈಪುಗಳು ಒಡೆದು ಹೋಗಿ ಈ ಭೂ ಕುಸಿತ ಉಂಟಾಗಿದೆ ಎಂದರು.
ಇತ್ತೀಚೆಗಷ್ಟೆ ಸ್ಮಾರ್ಟ್‍ಸಿಟಿ ವತಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಆದರೆ ಈ ಭಾಗದಲ್ಲಿ ಪೈಪ್ ಒಡೆದು ಹೋಗಿರುವ ಬಗ್ಗೆ ಯಾವುದೇ ಸೂಚನೆ ಗೊತ್ತಾಗಿಲ್ಲ. 25 ವರ್ಷ ಆದ ಮೇಲೆ ಯುಜಿಡಿ ಪೈಪ್ ಡ್ಯಾಮೇಜ್ ಆಗಿ ಭೂ ಕುಸಿತವಾಗಿದೆ. ಆಗ ಮಾಡಿದ್ದ ಕಾಮಗಾರಿಯಲ್ಲಿ ಸಿಮೆಂಟ್ ಪೈಪ್‍ಗಳನ್ನು ಹಾಕಲಾಗಿದ್ದು, ಈ ಸಿಮೆಂಟ್ ಮಣ್ಣಿನಲ್ಲಿ ಕರಗಿ ಹೋಗಿ ದೊಡ್ಡ ಗುಂಡಿ ಬಿದ್ದಿದೆ ಎಂದು ಹೇಳಿದರು.ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ದುರಸ್ಥಿಗಾಗಿ ಕಾರ್ಯೋನ್ಮುಖರಾಗಿದ್ದಾರೆ.
ಆದರೆ ರಸ್ತೆ ಕಾಮಗಾರಿಯಾದ ಮೇಲೆ ಈ ರೀತಿಯಾಗಿರುವುದು ಬೇಸರ ತಂದಿದೆ ಎಂದರು.ನಗರದ ವಿವೇಕಾನಂದ ರಸ್ತೆಯಲ್ಲೂ ಇದೇ ರೀತಿಯಾಗಿತ್ತು. ಹಾಗಾಗಿ ಆ ರಸ್ತೆಯಲ್ಲಿ ಯುಜಿಡಿ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸುವವರೆಗೂ ರಸ್ತೆ ಕಾಮಗಾರಿಗೆ ಅವಕಾಶ ನೀಡಿರಲಿಲ್ಲ ಎಂದ ಅವರು ವಿವೇಕಾನಂದ ರಸ್ತೆಯಲ್ಲಿ 5 ಬಾರಿ ಭೂಕುಸಿತವಾಗಿತ್ತು. ರಾಜ್ಯಮಟ್ಟದಿಂದ ಐದಾರು ಮಂದಿ ತಜ್ಞರನ್ನು ಕರೆಸಿ ಸಲಹೆ ಸೂಚನೆ ಪಡೆದು ಈಗ ಕಾಮಗಾರಿ ಮಾಡಲಾಗಿದೆ ಎಂದರು.ಮಂಡಿಪೇಟೆ ರಸ್ತೆಯ ಕಾಮಗಾರಿ ಕೈಗೊಂಡ ಸಂದರ್ಭದಲ್ಲಿ ಚರ್ಚ್ ಸರ್ಕಲ್ ಬಳಿ ಭೂ ಕುಸಿತವಾಗಿತ್ತು. ಆಗ ಪೈಪ್‍ಲೈನ್ ಬದಲಾವಣೆ ಮಾಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆದರೆ ಈ ಜಾಗದಲ್ಲಿ ಪೈಪ್ ಡ್ಯಾಮೇಜ್ ಆಗಿರುವುದು ಯಾರಿಗೂ ಗೊತ್ತಾಗಿಲ್ಲ ಎಂದರು. ಮಂಡಿಪೇಟೆ ಪ್ರಮುಖ ವ್ಯಾಪಾರ ಕೇಂದ್ರವಾಗಿದೆ. ಸದಾ ವಾಹನ ದಟ್ಟಣೆ ಇರುತ್ತದೆ. ಹಾಗಾಗಿ ಮುಂದಿನ 15-20 ದಿನದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.
ಮಂಡಿಪೇಟೆಯ ವ್ಯಾಪಾರಸ್ಥರು ತಾಳ್ಮೆಯಿಂದ ವರ್ತಿಸುವುದರ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ. ಅವರು ಇವರ ಮೇಲೆ ಹೇಳೋದು, ಇವರು ಅವರ ಮೇಲೆ ಹೇಳುತ್ತಾ ಅಧಿಕಾರಿಗಳ ಮೇಲೆ ದೂರಿದರೆ ಏನೂ ಪ್ರಯೋಜನವಾಗುವುದಿಲ್ಲ. ಹೊಸ ಪೈಪ್‍ಲೈನ್ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಲ್ಲಿಯವರೆಗೆ ಜನತೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.ಪಾಲಿಕೆಯ ಕಾರ್ಯಪಾಲಕ ಅಭಿಯಂತರರಾದ ಆಶಾ ಮಾತನಾಡಿ, ಈ ಯುಜಿಡಿ ಲೈನ್ ಪ್ರಮುಖವಾದ ಲೈನ್ ಆಗಿದ್ದು, ಇಲ್ಲಿ ಹಾಕಲಾಗಿರುವ ಪೈಪ್ ಮಣ್ಣಲ್ಲಿ ನೆನೆದು ಕರಗಿ ಹೋಗಿ ಈ ರೀತಿಯಾಗಿದೆ. ಶೀಘ್ರದಲ್ಲೇ ಕೆಲಸ ಆರಂಭಿಸಿ 15 ರಿಂದ 20 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ದೀಪಶ್ರೀ ಮಹೇಶ್, ಮನೋಹರಗೌಡ ಮತ್ತಿತರರು ಪಾಲ್ಗೊಂಡಿದ್ದರು.

(Visited 5 times, 1 visits today)
Previous Articleಕೊರಟಗೆರೆಯ ಚಿನ್ನದ ಅಂಗಡಿಗಳಲ್ಲಿ ಜಿಎಸ್‍ಟಿ ರಸೀದಿಯೇ ಕೊಡಲ್ವಂತೆ !!?
Next Article ಗುಬ್ಬಿ-ಕೊರಟಗೆರೆ-ಚಿ.ನಾ.ಹಳ್ಳಿಯಲ್ಲಿ KSRTC ಘಟಕ ಪ್ರಾರಂಭಕ್ಕೆ ಒತ್ತಾಯ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.