BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
  • ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮದ ಸಮಗ್ರ ಅಭಿವೃದ್ಧಿಯೇ ಸಂಸದರ ಆದರ್ಶ ಗ್ರಾಮ ಯೋಜನೆಯ ಉದ್ದೇಶ
Trending

ಗ್ರಾಮದ ಸಮಗ್ರ ಅಭಿವೃದ್ಧಿಯೇ ಸಂಸದರ ಆದರ್ಶ ಗ್ರಾಮ ಯೋಜನೆಯ ಉದ್ದೇಶ

By News Desk BenkiyabaleUpdated:February 28, 2022 7:25 pm

 ತುಮಕೂರು :

       ಗ್ರಾಮದ ಸಮಗ್ರ ಅಭಿವೃದ್ಧಿಯೇ ಆದರ್ಶ ಗ್ರಾಮ ಯೋಜನೆಯ ಉದ್ದೇಶವಾಗಿದೆ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗುಬ್ಬಿ ತಾಲ್ಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಧುಗಿರಿ ತಾಲ್ಲೂಕಿನ ಗಂಜಲಗುಂಟೆ, ಕೊರಟಗೆರೆ ತಾಲ್ಲೂಕಿನ ಕುರಂಕೋಟೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಮತ್ತು ತಿಪಟೂರು ತಾಲ್ಲೂಕಿನ ಅರಳಗುಪ್ಪೆ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ನೀರಿನ ಮೂಲಗಳು ಮತ್ತು ಅವುಗಳ ಸಮರ್ಪಕ ಬಳಕೆ, ಸ್ವಚ್ಛತೆ ಮತ್ತು ನೈರ್ಮಲ್ಯ, ಜೀವನಮಟ್ಟ, ಶಾಲೆ ಸೇರಿದಂತೆ ಹಳ್ಳಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳು ಆದರ್ಶ ಗ್ರಾಮಗಳ ಅಭಿವೃದ್ಧಿಗಾಗಿ ಸಹಕಾರ ಮನೋಭಾವದಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕು. ಸರ್ಕಾರದ ಯೋಜನೆ ಕುರಿತಾದ ಪರಿಕಲ್ಪನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಆದರ್ಶ ಗ್ರಾಮ ಯೋಜನೆಯನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು. ಈ ಯೋಜನೆಯ ಅನುಷ್ಠಾನದಿಂದ ರೈತರು ವಲಸೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾ ಕುಮಾರಿ ಮಾತನಾಡಿ, ಗ್ರಾಮಸ್ಥರಲ್ಲಿ ನಿರ್ಧಿಷ್ಟ ಮೌಲ್ಯ ಅಳವಡಿಸುವುದು, ಅಭಿವೃದ್ಧಿ ಕಾಮಗಾರಿಗಳಲ್ಲಿ ಜನರ ಸಹಭಾಗಿತ್ವ, ಸಮುದಾಯ ಸೇವೆ, ಪ್ರಕೃತಿಯೊಂದಿಗೆ ಜೀವಿಸುವುದು, ಶಾಂತಿ-ಸುವ್ಯವಸ್ಥೆ, ಸ್ವ-ಆಡಳಿತ ರೂಪಿಸುವುದು ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿ ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಗೊಂಡಿರುವ ತಿಪಟೂರು ತಾಲ್ಲೂಕಿನ ಅರಳಗುಪ್ಪೆ ಗ್ರಾಮದಲ್ಲಿ ಮಾರ್ಚ್ 5ರಂದು, ಕೊರಟಗೆರೆ ತಾಲ್ಲೂಕಿನ ಕುರಂಕೋಟೆಯಲ್ಲಿ ಮಾ. 7ರಂದು, ಮಧುಗಿರಿ ತಾಲ್ಲೂಕಿನ ಗಂಜಲಗುಂಟೆ ಗ್ರಾಮದಲ್ಲಿ ಮಾ. 8ರಂದು ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗ್ರಾಮದಲ್ಲಿ ಮಾರ್ಚ್ 10ರಂದು ಗ್ರಾಮಸಭೆ ನಡೆಯಲಿದ್ದು, ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಯೋಜನೆಯಡಿ ಆಯ್ಕೆಗೊಂಡ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು, ಮತ್ತಿತರರು ಹಾಜರಿದ್ದರು.

(Visited 21 times, 1 visits today)
Previous Articleತುಮಕೂರು : ಸಿದ್ದಗಂಗಾ ಮಠ ವಸ್ತು ಪ್ರದರ್ಶನಕ್ಕೆ ರಾಜ್ಯದಲ್ಲೇ ಮೊದಲ ಸ್ಥಾನ
Next Article ವೈಭವದ ಹೆತ್ತೇನಹಳ್ಳಿಯಮ್ಮ ರಥೋತ್ಸವ
News Desk Benkiyabale

Related Posts

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm news
ತಾಜಾ ಸುದ್ಧಿಗಳು
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm
news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
news

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
Our Youtube Channel
Our Picks

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

By News Desk BenkiyabaleAugust 24, 2026 5:49 pm

ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ – ಶಿಸ್ತು ಅಗತ್ಯ. ಕೆಲಸ ಮಾಡುವಾಗ ಸಣ್ಣಪುಟ್ಟ ತಪುö್ಪಗಳು ಆಗುವುದು ಸಹಜ. ಆದರೆ,…

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.