BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ
  • ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ
  • ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ
  • ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು
  • ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್
  • ಕನಿಷ್ಠ ಕೂಲಿ ಜಾರಿಗೇಕೆ ನ್ಯಾಯಾಂಗ ಅಡ್ಡಿ
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ 59 ರಸ್ತೆ ಬ್ಲ್ಯಾಕ್‍ಸ್ಪಾಟ್: ಅಗತ್ಯ ಕ್ರಮ ವಹಿಸಲು ಸೂಚನೆ: ನಾರಾಯಣಸ್ವಾಮಿ
Trending

ಜಿಲ್ಲೆಯಲ್ಲಿ 59 ರಸ್ತೆ ಬ್ಲ್ಯಾಕ್‍ಸ್ಪಾಟ್: ಅಗತ್ಯ ಕ್ರಮ ವಹಿಸಲು ಸೂಚನೆ: ನಾರಾಯಣಸ್ವಾಮಿ

By News Desk BenkiyabaleUpdated:March 29, 2022 5:41 pm

ತುಮಕೂರು :

ಜಿಲ್ಲೆಯಲ್ಲಿ ಗುರುತಿಸಿರುವ 59 ರಸ್ತೆ ಬ್ಲ್ಯಾಕ್‍ಸ್ಪಾಟ್ಸ್‍ಗಳಲ್ಲಿ ಪದೇ ಪದೇ ಅಪಘಾತಗಳಾಗುತ್ತಿದ್ದು, ಅಪಘಾತಗಳು ಮತ್ತೊಮ್ಮೆ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಪಾವಗಡ ತಾಲ್ಲೂಕು ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 7ಕ್ಕೆ ಏರಿದ್ದು, ಅಪಘಾತದಲ್ಲಿ ಸಾವನ್ನಪ್ಪಿರುವ ಹಾಗೂ ಗಾಯಗೊಂಡವರ ಕುಟುಂಬಗಳು ಕೇಳುವ ಪ್ರಶ್ನೆಗೆ ಉತ್ತರಿಸಲಾಗುತ್ತಿಲ್ಲ. ಅಪಘಾತದಲ್ಲಿ ಸತ್ತವರಿಗೆ ಪರಿಹಾರ ನೀಡುವುದಕ್ಕಿಂತ ಅಪಘಾತಗಳು ನಡೆಯದಂತೆ ಕ್ರಮ ಕೈಗೊಳ್ಳವುದೊಂದೇ ನಮಗಿರುವ ಮಾರ್ಗವೆಂದು ತಿಳಿಸಿದರು.

ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಗುರುತಿಸಿರುವ ಬ್ಲ್ಯಾಕ್‍ಸ್ಪಾಟ್‍ಗಳಲ್ಲಿ ರಸ್ತೆ ಅಗಲೀಕರಣ, ರಸ್ತೆ ತಿರುವು, ಅಗಲೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ, ಸೈನ್ ಬೋರ್ಡ್ ಅಳವಡಿಕೆ, ಸ್ಕೈವಾಕ್ ಅಳವಡಿಕೆ ಸಮಸ್ಯೆಗಳಿದ್ದಲ್ಲಿ ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದ ಅವರು, ಅಪಘಾತಕ್ಕೆ ಕಾರಣವೆನ್ನಲಾದ ಪಳವಳ್ಳಿ ಬಳಿಯಿರುವ ರಸ್ತೆ ತಿರುವನ್ನು ಇನ್ನೊಂದು ವಾರದೊಳಗೆ ಸರಿಪಡಿಸಿ ವರದಿ ನೀಡಬೇಕು ಹಾಗೂ ಬ್ಲ್ಯಾಕ್‍ಸ್ಪಾಟ್‍ಗಳಿಗೆ ಸಂಬಂಧಿಸಿದಂತೆ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಛಾಯಾಚಿತ್ರ ಸಹಿತ ವರದಿಯನ್ನು ಅಧಿಕಾರಿಗಳು ಸಮಿತಿಗೆ ಒದಗಿಸಬೇಕೆಂದು ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪೀಕ್ ಟೈಮ್‍ನಲ್ಲಿ ಬಸ್ಸುಗಳ ಸಂಚಾರಕ್ಕೆ ವ್ಯವಸ್ಥೆ ಹಾಗೂ ಬಸ್ಸಿನ ಟಾಪ್ ಮೇಲೆ ಪ್ರಯಾಣಿಕರು ಕುಳಿತು ಪ್ರಯಾಣಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗ ಹಾಗೂ ತುಮಕೂರು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.

ಸುಪ್ರೀಂಕೋರ್ಟ್ ನಿರ್ದೇಶನದನ್ವಯ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಬರುವ ಏಪ್ರಿಲ್ 8ರ ನಂತರ ಮತ್ತೊಮ್ಮೆ ಸಭೆ ಕರೆಯಲಾಗುವುದು. ಈ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಹಾಜರಾಗದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‍ವಾಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ವೀರಭದ್ರಯ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಖಾಸಗಿ ಬಸ್ ಮಾಲೀಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 8 times, 1 visits today)
A.narayanaswamy tumkur
Previous Articleತಿಗಳರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸಿದ್ದ: ಬಿ.ಎಸ್.ಯಡಿಯೂರಪ್ಪ
Next Article ಅಲೆಮಾರಿ ಜನಾಂಗದವರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಸೂಚನೆ
News Desk Benkiyabale

Related Posts

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm news

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm news
ತಾಜಾ ಸುದ್ಧಿಗಳು
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm
news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm
news

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm
news

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
news

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

October 30, 2026 5:38 pm
news

ಕನಿಷ್ಠ ಕೂಲಿ ಜಾರಿಗೇಕೆ ನ್ಯಾಯಾಂಗ ಅಡ್ಡಿ

October 30, 2026 5:36 pm
Our Youtube Channel
Our Picks

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

October 30, 2026 5:38 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

By News Desk BenkiyabaleOctober 30, 2026 5:44 pm

ಹುಳಿಯಾರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಬೆಳಗುಲಿ ಗ್ರಾಮ ಪಂಚಾಯಿತಿ…

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.