BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಸತಿ ವಂಚಿತರ ಧರಣಿಗೆ ಆರ್.ರಾಜೇಂದ್ರ ಬೆಂಬಲ
Trending

ವಸತಿ ವಂಚಿತರ ಧರಣಿಗೆ ಆರ್.ರಾಜೇಂದ್ರ ಬೆಂಬಲ

By News Desk BenkiyabaleUpdated:April 06, 2022 5:15 pm

ತುಮಕೂರು:

ಭೂಮಿ ಮತ್ತು ವಸತಿ ವಂಚಿತ ಸಮುದಾಯ ಹಾಗೂ ಭ್ರಷ್ಟಾಚಾರ ನಿಮೂರ್ಲನ ವೇದಿಕೆಯ ವತಿಯಿಂದ ಭೂಮಿ ಮತ್ತು ವಸತಿ ಹಕ್ಕಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಆಹೋರಾತ್ರಿ ಧರಣಿ 17ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಆಲಿಸಿದರು.
ಕಳೆದ 17ನೇ ದಿನದಿಂದ ಜಿಲ್ಲೆಯ ವಿವಿಧೆಡೆ ವಸತಿ ಮತ್ತು ಭೂಮಿ ರಹಿತ ಹೋರಾಟಗಾರರು ಒಂದೆಡೆ ಸೇರಿ,ಬಗರ್ ಹುಕಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಕೂಡಲೇ ಸಾಗುವಳಿ ಚೀಟಿ ಬಿಡುಗಡೆ ಮಾಡಬೇಕು ಹಾಗು ದಲಿತ ವಿರೋಧಿ ಧೋರಣೆ ಹೊಂದಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ ಹಂದ್ರಾಳು ನಾಗಭೂಷಣ್ ಅವರ ನೇತೃತ್ವದಲ್ಲಿ ಮಾರ್ಚ್ 21 ರಿಂದ ತಮ್ಮ ಕುಟುಂಬದ ಸದಸ್ಯರು,ಕುರಿ,ಮೇಕೆಗಳೊಂದಿಗೆ ಸ್ಥಳದಲ್ಲಿಯೇ ಅಡುಗೆ ತಯಾರಿಸಿ,ಊಟೋಪಚಾರ ಮಾಡುವ ಮೂಲಕ ಹೋರಾಟ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ವಿಧಾನಪರಿಷತ್ ಸದಸ್ಯರಿಗೆ,ತಮ್ಮ ಬೇಡಿಕೆಗಳನ್ನು ಮನವರಿಕೆ ಮಾಡಿಕೊಟ್ಟ ಹೋರಾಟಗಾರರು,ಚಿಕ್ಕನಾಯಕನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯ ಜನರಿಗೆ ಸರಕಾರ ಜಾಗ ನೀಡಿದ್ದರು, ತಾಲೂಕು ಆಡಳಿತ ಇದುವರೆಗೂ ಹಕ್ಕುಪತ್ರ ವಿತರಿಸಿಲ್ಲ.ಕೇಳಲು ಹೋದ ಕುಟುಂಬಗಳ ವಿರುದ್ದ ಅಲ್ಲಿನ ತಹಶೀಲ್ದಾರ್ ಅವಾಚ್ಚ ಶಬ್ದಗಳಿಂದ ನಿಂದಿಸಿದ್ದಾರೆ.ಈ ಸಂಬಂಧ ಆಟ್ರಾಸಿಟಿ ದೂರ ದಾಖಲಾಗಿ, ಎಫ್‍ಐಆರ್ ಆದರೂ ಇದುವರೆಗೂ ತಹಶೀಲ್ದಾರರ ವಿರುದ್ದ ಯಾವುದೇ ಕಾನೂನು ಕ್ರಮ ಜರುಗಿಲ್ಲ.ಹಾಗೆಯೇ ಚೇಳೂರು ತಾಲೂಕು ಅಮ್ಮನಘಟ್ಟ ಗ್ರಾಮದ ದಲಿತ ಕುಟುಂಬಕ್ಕೆ ಅರಣ್ಯ ಇಲಾಖೆಯವರು ಇನ್ನಿಲ್ಲದ ತೊಂದರೆ ನೀಡುತ್ತಿದ್ದಾರೆ.ರೈತರು ಜಮೀನಿನಲ್ಲಿ ಬೆಳೆಸಿದ್ದ ತೆಂಗು,ಅಡಿಕೆ,ಬೇವು ಇನ್ನಿತರ ಫಲ ನೀಡುವ ಸಸಿಗಳನ್ನು ಕಿತ್ತು ದೌರ್ಜನ್ಯ ಎಸಗಿದ್ದಾರೆ. ಪ್ರಶ್ನಿಸಿದರೆ, ಬಂಧಿಸುವ ಬೆದರಿಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಕುತ್ತಿದ್ದಾರೆ ಎಂದು ದೂರಿದರು.
ಇದೇ ಅಲ್ಲದೆ ತುಮಕೂರು ಜಿಲ್ಲೆಯ ಹಲವು ಭಾಗಗಳಲ್ಲಿ ಬಗರ್ ಹುಕ್ಕಂ ಕಮಿಟಿ ಸಭೆಗಳೇ ನಡೆದಿಲ್ಲ.ಮೂರ್ನಾಲ್ಕು ತಲೆಮಾರುಗಳಿಂದ ಸರಕಾರಿ ಜಮೀನು ಉಳುಮೆ ಮಾಡುತ್ತಾ, ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿ,ಜ್ಞಾತಕ ಪಕ್ಷಿಯಂತೆ ಕಾಯುತ್ತಿರುವ ಜನರಿಗೆ ಯಾವುದೇ ಉಪಯೋಗವಿಲ್ಲದಂತಾಗಿದೆ.ಹಾಗಾಗಿ ಮಾಡು, ಇಲ್ಲವೆ ಮಡಿ ಎಂಬ ಹೋರಾಟಕ್ಕಾಗಿ ಮುಂದಾಗಿದ್ದೇವೆ.ನಮಗೆ ಶಾಮಿಯಾನಕ್ಕೆ ದುಡ್ಡು ಕಟ್ಟಲಾಗುತ್ತಿಲ್ಲ. ಮುಂದಿನ ವಾರದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗುಡಿಸಲು ಹಾಕಿ ವಾಸಿಸುವ ಮೂಲಕ ಪ್ರತಿಭಟನೆ ಮುಂದುವರೆಸುವುದಾಗಿ ವಿವರಿಸಿದರು.
ಪ್ರತಿಭಟನಾನಿರತ ಮನವಿ ಆಲಿಸಿದ ನಂತರ ಮಾತನಾಡಿದ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ,ಇಡೀ ಜಿಲ್ಲೆಯಲ್ಲಿಯೇ ಬಗರ್ ಹುಕ್ಕಂ ಸಮಿತಿಯ ಸಭೆಗಳು ಸರಿಯಾಗಿ ಆಗುತ್ತಿಲ್ಲ.ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಇಂದೇ ಮಾತುಕತೆ ನಡೆಸಿ, ಶೀಘ್ರದಲ್ಲಿಯೇ ಎಲ್ಲಾ ಶಾಸಕರಗಳ ಸಭೆ ಕರೆದು, ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದ ಅವರು, ಎಫ್.ಐ.ಆರ್. ಆದ ನಂತರವೂ ತಹಶೀಲ್ದಾರರ ವಿರುದ್ದ ಕ್ರಮ ಕೈಗೊಳ್ಳದಿರುವ ಬಗ್ಗೆಯೂ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದರು.
ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ.ಭೂಮಿ ಮತ್ತು ವಸತಿ ರಹಿತರಿಗೆ ಅದ್ಯತೆಯ ಮೇಲೆ ಸೂರು ಒದಗಿಸುವುದು ಮತ್ತು ಈಗಾಗಲೇ ಬಗರ್‍ಹುಕ್ಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವವರಿಗೆ ಸಾಗುವಳಿ ಚೀಟಿ ನೀಡುವುದು ಸರಕಾರದ ಕರ್ತವ್ಯವಾಗಿದೆ. ಹಾಗಾಗಿ ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದ ಎಂದು ಆರ್.ರಾಜೇಂದ್ರ ಭರವಸೆ ನೀಡಿದರು.

(Visited 5 times, 1 visits today)
Protest R. Rajendra tumkur
Previous Articleಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
Next Article ಏ.21: ಸರ್ಕಾರಿ ನೌಕರರ ದಿನಾಚರಣೆ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.