BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು-ಬೆಂಗಳೂರು: ಮೆಮು ರೈಲು ಸಂಚಾರಕ್ಕೆ ಚಾಲನೆ
Trending

ತುಮಕೂರು-ಬೆಂಗಳೂರು: ಮೆಮು ರೈಲು ಸಂಚಾರಕ್ಕೆ ಚಾಲನೆ

By News Desk BenkiyabaleUpdated:April 08, 2022 6:23 pm

ತುಮಕೂರು:
ತುಮಕೂರು ನಗರದ ರೈಲು ನಿಲ್ದಾಣದಿಂದ ಪ್ರತಿನಿತ್ಯ ತುಮಕೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ವಿಶೇಷ ರೈಲು ಸಂಚಾರಕ್ಕೆ ಸಂಸದರಾದ ಶ್ರೀ ಜಿ.ಎಸ್. ಬಸವರಾಜು ಅವರಿಂದು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆ ಈ ದಿನ ಈಡೇರಿದಂತಾಗಿದೆ. ತುಮಕೂರು ಮತ್ತು ಬೆಂಗಳೂರಿನ ಕೆಎಸ್‍ಆರ್ ರೈಲು ನಿಲ್ದಾಣದ ನಡುವೆ ಸಂಚರಿಸುವ ಈ ವಿದ್ಯುತ್‍ಚಾಲಿತ ರೈಲು ಸೇವೆ(ಮೆಮು)ಯಿಂದ ಮುಖ್ಯವಾಗಿ ಕಾರ್ಮಿಕರು, ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬೆಂಗಳೂರು-ತುಮಕೂರು 8 ಭೋಗಿಗಳುಳ್ಳ ಡೆಮು ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ 16 ಭೋಗಿಗಳುಳ್ಳ ಮೆಮು ರೈಲನ್ನಾಗಿ ಪರಿವರ್ತಿಸಲಾಗಿದೆ. ಸುಮಾರು 20 ವರ್ಷಗಳಿಂದ ಹೋರಾಟದ ಶ್ರಮದಿಂದ ಎರಡು ಪ್ರಮುಖ ನಗರಗಳ ನಡುವೆ ಸಂಚರಿಸುವ ಈ ಮೆಮು ರೈಲು ಸೇವೆ ಸಾಕಾರವಾಗಿದೆ ಎಂದರಲ್ಲದೆ, 2024ರೊಳಗಾಗಿ ರಾಷ್ಟ್ರದ ಎಲ್ಲಾ ರೈಲು ಮಾರ್ಗಗಳು ಡೀಸೆಲ್ ಮುಕ್ತ ವಿದ್ಯುತ್ ಚಾಲಿತ ರೈಲು ಮಾರ್ಗಗಳಾಗಬೇಕೆಂದು ಪ್ರಧಾನಿ ಮೋದಿಯವರ ದೊಡ್ಡ ಕನಸಾಗಿದೆ. ಇದನ್ನು ನನಸಾಗಿಸಲು ಪ್ರಯಾಣಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು.
ತುಮಕೂರು ರೈಲು ನಿಲ್ದಾಣದ ಮೂಲಕ ಪ್ರತಿದಿನ ಸುಮಾರು 30 ರೈಲುಗಳು ಸಂಚರಿಸುತ್ತಿದ್ದರೂ, ಪ್ರಯಾಣಿಕರಿಂದ ಹೆಚ್ಚುವರಿ ರೈಲು ಸಂಚಾರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತಲೇ ಇರುವುದರಿಂದ ತುಮಕೂರು-ಬೆಂಗಳೂರು ನಡುವೆ ಪ್ರತಿ 1 ಗಂಟೆಗೊಮ್ಮೆ ಪ್ರತ್ಯೇಕ ರೈಲು ಸಂಚಾರಕ್ಕೆ ಕೇಂದ್ರದ ರೈಲ್ವೆ ಸಚಿವರಲ್ಲಿ ಮನವಿ ಮಾಡಿದಾಗ ಅವರು ಶಾಶ್ವತ ರೈಲು ಸಂಚಾರಕ್ಕೆ ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲಿ ಕಾರ್ಯಗತವಾಗಲಿದೆ ಎಂದು ತಿಳಿಸಿದರು.
ನಗರದ ರೈಲು ನಿಲ್ದಾಣದ ದಕ್ಷಿಣ ಭಾಗದಲ್ಲಿ ಗೇಟ್ ತೆರೆಯಬೇಕೆಂದು ಸಾರ್ವಜನಿಕರಿಂದ ಮನವಿಗಳು ಬರುತ್ತಿದೆ. ಒಂದಕ್ಕಿಂತ ಹೆಚ್ಚು ಗೇಟ್‍ಗಳನ್ನು ತೆರೆದಲ್ಲಿ ಪ್ರಯಾಣಿಕರು ಟಿಕೇಟ್ ರಹಿತ ಪ್ರಯಾಣ ಮಾಡುವ ಸಾಧ್ಯತೆ ಇರುವುದರಿಂದ ರೈಲ್ವೆ ನಿಯಮಾವಳಿ ಪ್ರಕಾರ ಪ್ರಯಾಣಿಕರು ಹೋಗಿ ಬರಲು ಒಂದೇ ಕಡೆ ಗೇಟ್ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರದ ಹೊರವಲಯ ವಸಂತ ನರಸಾಪುರದ ಸುಮಾರು 13000 ಎಕರೆ ಕೈಗಾರಿಕಾ ಪ್ರದೇಶದ ಉದ್ಯಮಿಗಳು ಹಾಗೂ ಕಾರ್ಮಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರಕ್ಕೆ ಸರ್ಕಾರ ಮುಂದಾಗಿದೆ ಎಂದರಲ್ಲದೆ, ತುಮಕೂರು ನಗರ ರೈಲು ನಿಲ್ದಾಣವನ್ನು ಮೈಸೂರು, ಬೆಂಗಳೂರು ಮಾದರಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ತುಮಕೂರು-ಮಳವಳ್ಳಿ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರೈಲ್ವೆ ಯೋಜನೆಗಳು ಪೂರ್ಣಗೊಂಡ ನಂತರ ತುಮಕೂರು ರೈಲು ನಿಲ್ದಾಣ ಜಂಕ್ಷನ್ ಆಗಿ ಪರಿವರ್ತನೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಬಾ.ಹ.ರಮಾಕುಮಾರಿ ಹಾಗೂ ಕಾರ್ಯದರ್ಶಿ ಕರ್ಣಂ ರಮೇಶ್, ರೈಲ್ವೆ ಅಧಿಕಾರಿಗಳು, ಮತ್ತಿತರರು ಹಾಜರಿದ್ದರು.
ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿರುವುದರಿಂದ ಯೋಜನೆ ಪೂರ್ಣಗೊಳ್ಳಲು ವಿಳಂಬವಾಗುತ್ತಿದೆ ಎಂದು ತಿಳಿಸಿದರಲ್ಲದೆ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 50 ಕೋಟಿ ರೂ.ಗಳನ್ನು ಮಂಡನೆ ಮಾಡಲಾಗಿದೆ ಎಂದು ತಿಳಿಸಿದರು.
ನೈರುತ್ಯ ರೈಲ್ವೆ ಬೆಂಗಳೂರು ವಿಭಾಗ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ(ನಿರ್ವಹಣೆ) ಅಮನ್‍ದೀಪ್ ಕಪೂರ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮೆಮು ರೈಲು ಸಂಚಾರವು ಪರಿಸರ ಸ್ನೇಹಿಯಾಗಿದ್ದು, ತುಮಕೂರಿನಿಂದ ಪ್ರತಿದಿನ ಬೆಳಿಗ್ಗೆ 11.15 ಗಂಟೆಗೆ ಹೊರಟು 13.25 ಗಂಟೆಗೆ ಬೆಂಗಳೂರು ತಲುಪಲಿದ್ದು, ಬೆಂಗಳೂರಿನಿಂದ ಮಧ್ಯಾಹ್ನ 13.50ಕ್ಕೆ ಹೊರಟು 15.40 ಗಂಟೆಗೆ ತುಮಕೂರು ತಲುಪಲಿದೆ. ತುಮಕೂರಿನಿಂದ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಈ ರೈಲು ಕ್ಯಾತ್ಸಂದ್ರ, ಹಿರೇಹಳ್ಳಿ, ಡಾಬಸ್‍ಪೇಟೆ, ನಿಡವಂದ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಬೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ, ಚಿಕ್ಕಬಾಣವರ, ಯಶವಂತಪುರ, ಮಲ್ಲೇಶ್ವರಂ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಇಲಾಖೆ ಬದ್ಧವಾಗಿದ್ದು, ಪ್ರಯಾಣಿಕರು ಸಲಹೆಗಳನ್ನು ನೀಡಿದಲ್ಲಿ ಕಾರ್ಯ ರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.
ರೈಲ್ವೆ ಬಳಕೆದಾರರ ಸಮಾಲೋಚಕರ ಸಮಿತಿ ಸದಸ್ಯ ಡಿ.ಆರ್. ರಘೋತ್ತಮ್ ರಾವ್ ಮಾತನಾಡಿ, ಮೆಮು ರೈಲು ಓಡಾಟದಿಂದ ವಿಶೇಷವಾಗಿ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು, ಬೆಳೆದ ಬೆಳೆಯನ್ನು ಮಾರಾಟ ಮಾಡುವ ರೈತರಿಗೆ ಪ್ರಯೋಜನವಾಗಲಿದೆ ಎಂದರಲ್ಲದೆ, ರೈಲ್ವೆ ಇಲಾಖೆ ಹಾಗೂ ಕೆಎಸ್‍ಆರ್‍ಟಿಸಿ ಜಂಟಿ ಒಪ್ಪಂದದ ಮೇರೆಗೆ ನಗರ ರೈಲು ನಿಲ್ದಾಣದಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವುದರಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಂಸದರಲ್ಲಿ ಮನವಿ ಮಾಡಿದರು.

(Visited 12 times, 1 visits today)
gs basavaraju Memu trin tumkur
Previous Articleಏ.21: ಸರ್ಕಾರಿ ನೌಕರರ ದಿನಾಚರಣೆ
Next Article ಅಮಾನಿಕೆರೆಯಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.