BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಜಾರಾಜ್ಯ ಅವಶ್ಯಕತೆ ಎತ್ತಿ ಹಿಡಿದ ಅಂಬೇಡ್ಕರ್
Trending

ಪ್ರಜಾರಾಜ್ಯ ಅವಶ್ಯಕತೆ ಎತ್ತಿ ಹಿಡಿದ ಅಂಬೇಡ್ಕರ್

By News Desk BenkiyabaleUpdated:April 14, 2022 7:06 pm

ತುಮಕೂರು :
ಸ್ವರಾಜ್ಯದ ಜೊತೆಗೆ ಪ್ರಜಾ ರಾಜ್ಯದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿ, ಪ್ರಜಾರಾಜ್ಯಕ್ಕಾಗಿ ಮೊಟ್ಟ ಮೊದಲಿಗನಾಗಿ ಧ್ವನಿ ಎತ್ತಿದ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು, ಮಹಾನ್ ರಾಷ್ಟ್ರ ಭಕ್ತರು ಕೂಡ ಆಗಿದ್ದರು ಎಂದು ಪ್ರೊ. ಶ್ರೀ ಹರಿ ರಾಂ ಅವರು ತಿಳಿಸಿದರು.
ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರ 115ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಭಾಷಣಾಕಾರರಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತಿನಾದ್ಯಂತ ಜನಸಾಮಾನ್ಯರು ಹಬ್ಬದ ರೀತಿ ಆಚರಿಸಿ ಸಂಭ್ರಮಿಸುವ ಏಕೈಕ ಹಬ್ಬ ಅದುವೇ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಎಂದರು. ಮಹಾನಾಯಕ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತವಾಗಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಅವರು ಕೇವಲ ಒಂದು ದೇಶ, ಒಂದು ರಾಜ್ಯ, ಒಂದು ಜಾತಿಗೆ ಸೀಮಿತವಲ್ಲ, ಅವರು ವಿಶ್ವ ನಾಯಕ. ದಲಿತ ಪರ ಹೋರಾಟ, ಮೀಸಲಾತಿ ಹೋರಾಟ ಅಲ್ಲದೇ ದೇಶಕ್ಕಾಗಿ ಸಾಮಾಜಿಕ ಚಳುವಳಿ ಮಾಡಿದಂತಹ ಮಹಾನ್ ನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು ಎಂದರು.
ದೇಶದ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಬದಲಾಯಿಸಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಓಟಿನ ಹಕ್ಕನ್ನು ಈ ದೇಶದ ಜನತೆಗೆ ಕೊಟ್ಟ ಮಹಾನಾಯಕ ಅವರು. ಟ್ರೇಡ್ ಯೂನಿಯನ್ ಕಾಯಿದೆಗಳ ಮೂಲಕ ಟ್ರೇಡ್ ಯೂನಿಯನ್‍ಗಳನ್ನು ಗುರುತಿಸುವ, ಕಾರ್ಮಿಕರು ಕೆಲಸ ಮಾಡುವ ವಾತಾವರಣ ಉತ್ತಮವಾಗಿಸುವ, ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ತಂದಂತಹ, ರಜಾ ದಿನದ ಸಂಬಳ ಅಥವಾ ಬದಲಿ ರಜೆ, ಇಎಸ್‍ಐ, ಪಿಎಫ್, ಕಾರ್ಮಿಕರಿಗೆ 8 ಗಂಟೆಗಳ ಕೆಲಸ, ಮಹಿಳೆಯರಿಗೆ ಪ್ರಸೂತಿ ರಜೆ ಮುಂತಾದ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಬ್ರಿಟೀಷ್ ಪರಕೀಯ ಸರ್ಕಾರದಲ್ಲಿ ಕಾನೂನು ಮಂತ್ರಿಯಾಗಿ ಅವರು ಭಾರತೀಯರ ಪರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಕಾನೂನು ಮೂಲಕ ಜಾರಿಗೆ ತಂದರು ಎಂದು ಹರಿ ರಾಂ ಅವರು ವಿವರಿಸಿದರು.
ಮತ್ತೋರ್ವ ಭಾಷಣಾಕಾರ ಡಾ. ರವಿಕುಮಾರ್ ನೀಹ ಅವರು ಮಾತನಾಡಿ, ದಲಿತರ, ದಮನಿತರ, ಮಹಿಳೆಯರ ಏಳ್ಗೆಗಾಗಿ ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರು ನಿರಂತರವಾಗಿ ಹೋರಾಡಿದ್ದಾರೆ. ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ, ರಾಜಕೀಯ ಶೋಷಣೆಗಳು ನಿಲ್ಲಬೇಕು. ಎಲ್ಲಾ ಸಮುದಾಯದವರು ಒಟ್ಟಾಗಿ ಕೆರೆ-ಕಟ್ಟೆ, ದೇವಾಲಯ, ಶಾಲೆಗೆ ಪ್ರವೇಶ ಪಡೆದಾಗ ಸಮಾನತೆ ಸಾಧ್ಯ ಎಂಬುದು ಜಗಜೀವನ ರಾಂ ಅವರ ಆಶಯವಾಗಿತ್ತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಂತಹ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮಾತನಾಡಿ, ತಾವು ಜೀವನದಲ್ಲಿ ಪಟ್ಟಂತಹ ಕಷ್ಟಗಳನ್ನು ಮೆಟ್ಟಿನಿಂತು ದೇಶಕ್ಕಾಗಿ ಸಾಮಾಜಿಕ ಚಳುವಳಿ ಮಾಡಿದಂತಹ ಡಾ|| ಬಿ.ಆರ್. ಅಂಬೇಡ್ಕರ್ ಅವರು ಭಾರತದ ಪ್ರಜಾಪ್ರಭುತ್ವದ ಪಿತಾಮಹ ಎನಿಸಿದ್ದಾರೆ ಎಂದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ ಅಸಮತೋಲನ, ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂಬುದನ್ನು ಪ್ರತಿಪಾದಿಸಿದವರು ಡಾ|| ಬಿ.ಆರ್. ಅಂಬೇಡ್ಕರ್ ಅವರು. ಇಂದು ಅಧಿಕಾರ ವಿಕೇಂದ್ರೀಕರಣ ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಇದೆ ಎಂದಾದರೆ ಇದಕ್ಕೆ ಕಾರಣ ಡಾ|| ಬಿ.ಆರ್. ಅಂಬೇಡ್ಕರ್ ಅವರು ಎಂದರು.
ಇದೇ ಸಂದರ್ಭ ಜಿಲ್ಲೆಯ ವಿವಿಧ ತಾಲ್ಲೂಕುಗಳ 12 ಮಂದಿ ಸಮಾಜ ಸೇವಕರನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂಧ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾಪೌರರಾದ ಬಿ,ಜಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ಕೆ. ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಷಹಪೂರ್‍ವಾಡ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.

(Visited 10 times, 1 visits today)
Ambedkar tumkur
Previous Articleಅನೈತಿಕ ಸಂಬಂಧ : ಪಿಡ್ಲ್ಯೂಡಿ ಇಂಜಿನಿಯರ್ ಶಂಭುಕುಮಾರ್ ವಿರುದ್ಧ ಮೊಕದ್ದಮೆ
Next Article ಅಂಬೇಡ್ಕರ್ ಅಂದರೆ ಎಸ್ಸಿಎಸ್ಟಿ ಎನ್ನುವ ಮನೋಭಾವನೆ ಜನರಲ್ಲಿದೆ: ಡಾ.ಜಿ.ಪರಮೇಶ್ವರ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.