BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
Trending

ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

By News Desk BenkiyabaleUpdated:April 19, 2022 5:36 pm

ತುಮಕೂರು:
ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸಂಟೇಜ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್‍ಐಆರ್‍ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು.
ಭ್ರಷ್ಟಾಚಾರದ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಗ್ಗೆ ಮುಖ್ಯಮಂತ್ರಿಗಳು ನೀಡುತ್ತಿರುವ ಹೇಳಿಕೆಯನ್ನು ಗಮನಿಸಿದರೆ ಈಗಾಗಲೇ ಈಶ್ವರಪ್ಪನವರು ನಿರ್ದೋಷಿ ಎಂದು ಅವರೇ ತೀರ್ಮಾನ ಮಾಡಿದಂತೆ ಕಂಡು ಬರುತ್ತಿದೆ. ಮುಖ್ಯಮಂತ್ರಿಗಳು ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.
ಭ್ರಷ್ಟಾಚಾರ ಎಲ್ಲ ಕಾಲದಲ್ಲೂ ಇದೆ. ಆದರೆ ಈ ರೀತಿ ಅತಿರೇಖಕ್ಕೆ ಹೋಗಿದ್ದನ್ನು ನಾನೆಂದೂ ನೋಡಿರಲಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.
ಸ್ವಾಮೀಜಿಗಳನ್ನು ನಾವು ಎರಡನೇ ದೇವರು ಎಂದು ಕರೆಯುತ್ತೇವೆ. ಆದರೆ ಬಿಜೆಪಿ ಸರ್ಕಾರ ಸ್ವಾಮೀಜಿಗಳ ಬಳಿಯೂ ಕಮೀಷನ್ ಪಡೆದಿದೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಇದು ಸರಿಯಲ್ಲ. ರಾಜ್ಯದ ಜನರ ಶ್ರೇಯೋಭಿವೃದ್ಧಿಗೆ ತೆರಿಗೆ ಹಣ ವಿನಿಯೋಗವಾಗಬೇಕು ಎಂದರು.
ಬಿಜೆಪಿ ಸರ್ಕಾರ ಬಂದ ಮೇಲೆ ಸರ್ಕಾರಿ ಕಚೇರಿಗಳು ಲಂಚಮಯವಾಗಿವೆ. ಭ್ರಷ್ಟಚಾರ ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿಗಳು ಇದುವರೆಗೂ ಹೇಳಿದ ಮಾತಿನಂತೆ ನಡೆದುಕೊಳ್ಳದೆ ಬರೀ ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು.
ದೇಶದ ಜನರ ಖಾತೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದ ಪ್ರಧಾನಿಗಳು ಅವರ ಖಾತೆಗೆ ಹಣ ಹಾಕುವುದಿರಲಿ, ಇದ್ದ ಉದ್ಯೋಗವನ್ನು ಕಿತ್ತುಕೊಂಡು ನಿರುದ್ಯೋಗ ಸಮಸ್ಯೆ ತಾಂಡವವಾಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸಂಟೇಜ್ ಕಮೀಷನ್ ನೀಡಬೇಕಾಗಿದೆ ಎಂದು ಸ್ವತಃ ಗುತ್ತಿಗೆದಾರರೇ ಆರೋಪಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. ಪ್ರತಿಭಟನೆ ಮಾಡಿದಷ್ಟೂ ಪರ್ಸಂಟೇಜ್ ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿದರು.
ಭ್ರಷ್ಟ ಬಿಜೆಪಿ ಪಕ್ಷ ರಾಜ್ಯದಿಂದ ತೊಲಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದರು.
ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿದ್ದರು. ಈಗ ಮಂತ್ರಿಗಳು ಸಹ ಜೈಲಿಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡು ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದರು.
ಶಾಸಕ ವೆಂಕಟರಮಣಪ್ಪ ಮಾತನಾಡಿ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಡೆಯುತ್ತಿರುವ 40 ಪರ್ಸೆಂಟ್ ಕಮೀಷನ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಡಾ. ರಫೀಕ್‍ಅಹಮದ್ ಮಾತನಾಡಿ, ಮಾಜಿ ಸಚಿವ ಈಶ್ವರಪ್ಪ ಹಾಗೂ ಇತರೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತನಿಖೆಯನ್ನು ಹಾಲಿ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದರು.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಕಾಂಗ್ರೆಸ್ ನಾಯಕರುಗಳು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಮಾಜಿ ಶಾಸಕರಾದ ಆರ್. ನಾರಾಯಣ್, ಕೆ. ಷಡಕ್ಷರಿ, ಬಿ.ಬಿ. ರಾಮಸ್ವಾಮಿಗೌಡ, ಎಂ.ಡಿ. ಲಕ್ಷ್ಮೀನಾರಾಯಣ್, ಹೊನ್ನಗಿರಿಗೌಡ, ಚೌದ್ರಿರಂಗಪ್ಪ, ಇಕ್ಭಾಲ್ ಅಹಮದ್, ಅತೀಕ್ ಅಹಮದ್, ಲೋಕೇಶ್ವರ್, ಕೆಂಚಮಾರಯ್ಯ, ಸಿಮೆಂಟ್ ಮಂಜುನಾಥ್, ಆಟೋರಾಜು, ಮೆಹಬೂಬು ಪಾಷ, ಪಾಲಿಕೆ ಸದಸ್ಯರಾದ ಮಹೇಶ್, ಶಕೀಲ್ ಅಹಮದ್, ರೂಪಶೆಟ್ಟಳ್ಳಯ್ಯ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

(Visited 89 times, 1 visits today)
Congress Protest tumkur
Previous Articleಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಚನೆ
Next Article ಏ.23: ಜಗಜೀವನ್ ರಾಮ್ – ಅಂಬೇಡ್ಕರ್ ಜಯಂತಿ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.