BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳ ಸೇರ್ಪಡೆಯಿಂದ ಅನ್ಯಾಯ
ತುಮಕೂರು

ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳ ಸೇರ್ಪಡೆಯಿಂದ ಅನ್ಯಾಯ

By News Desk BenkiyabaleUpdated:May 02, 2022 7:44 pm

ತುಮಕೂರು:
ಪ್ರಬಲ ಜಾತಿಗಳನ್ನು ಪ್ರವರ್ಗ-2ಕ್ಕೆ ಸೇರಿಸುವುದರಿಂದ ಹಿಂದುಳಿದ ವರ್ಗಗಳಿಗೆ ಸೇರಿದ 105 ಜಾತಿಗಳಿಗೆ ತೀವ್ರ ಅನ್ಯಾಯವಾಗಲಿದೆ. ಇದರ ವಿರುದ್ದ ಜನಜಾಗೃತಿ ಮೂಡಿಸುವ ಕೆಲಸವನ್ನು ಹಿಂದುಳಿದ ವರ್ಗಗಳ ಮುಖಂಡರು ಮಾಡಬೇಕಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಂಚಾಲಕ ಕ್ಯಾಪ್ಟನ್ ಸೋಮಶೇಖರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಗಳ ಹಿತರಕ್ಷಣಾ ಸಮಿತಿವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಬಲ ಜಾತಿಗಳನ್ನು ಪ್ರವರ್ಗ-2ಎಗೆ ಸೇರಿಸುವುದರಿಂದ ಹಿಂದುಳಿದ ಜಾತಿಗಳಿಗೆ ಸರಕಾರಿ ನೌಕರಿ,ರಾಜಕೀಯ ಅಧಿಕಾರ ಮರೀಚಿಕೆಯಾಗಲಿದೆ.ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಅರ್ಥಿಕವಾಗಿ ಕುಸಿಯುವುದಲ್ಲದೆ,ಮುಂದಿನ ಯುವಜನತೆ ಸಾಕಷ್ಟು ಪಶ್ಚಾತಾಪ ಪಡಲಿದ್ದಾರೆ.ಹಾಗಾಗಿ ಸರಕಾರ ಪ್ರಬಲ ಜಾತಿಗಳನ್ನು ಹಿಂದುವರ್ಗ ಎಗೆ ಸೇರಿಸುವ ಪ್ರಸ್ತಾಪವನ್ನು ಕೈಬಿಡಬೇಕೆಂಬುದು ನಮ್ಮ ಆಗ್ರಹವಾಗಿದೆ.ಅಲ್ಲದೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿಚಾರಸಂಕಿರಣದಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾ ಸಮಿತಿಯ ಮುಖಂಡರುಗಳಿಗೆ ಮನವಿ ಮಾಡಿದರು.
ಸಮಿತಿಯ ಮತ್ತೊಬ್ಬ ಸಂಚಾಲಕ ಸಿ.ಡಿ.ಚಂದ್ರಶೇಖರ್ ಮಾತನಾಡಿ,ಪಂಚಮಶಾಲಿ ಲಿಂಗಾಯಿತರನ್ನು ಪ್ರವರ್ಗ 2 ಎ ಗೆ ಸೇರಿಸಲು ಸರಕಾರ ಮುಂದಾಗಿದೆ.ಇದು ಸಂವಿಧಾನಕ್ಕೆ ಮಾಡಿದ ಅಪಚಾರ.ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವೆಂಬುದು ಈಗಾಗಲೇ ಮರೀಚಿಕೆಯಾಗಿದೆ.ಹಿಂದುಳಿದ ಸಮುದಾಯದಲ್ಲಿರುವ ಜಾತಿಗಳು,ಶೈಕ್ಷಣಿಕ, ಅರ್ಥಿಕ,ರಾಜಕೀಯ ಸೌಲಬ್ಯಗಳು ಸಿಗದೆ ತತ್ತರಿಸಿ ಹೋಗಿರುವಂತಹ ಹೊತ್ತಿನಲ್ಲಿ, ಪ್ರಬಲ ಜಾತಿಗಳನ್ನು ಪ್ರವರ್ಗ 2ಕ್ಕೆ ಸೇರಿಸುವುದರಿಂದ ಆ ಸಮುದಾಯಗಳಿಗೆ ಮತ್ತಷ್ಟು ಅನ್ಯಾಯಮಾಡಿದಂತಾಗುತ್ತದೆ. ಹಾಗಾಗಿ ಸರಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕೆಂಬುದು ಹಿಂದುಳಿದ ವರ್ಗಗಳ ಆಗ್ರಹವಾಗಿದೆ. ಒಂದು ವೇಳೆ ಸರಕಾರ ಸರಿಯಾದ ತೀರ್ಮಾನ ತೆಗೆದುಕೊಂಡು ಓಬಿಸಿಗಳ ಹಿತರಕ್ಷಿಸಿದಿದ್ದರೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ರೂಪಿಸಿ, ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಎಲ್ಲಾ ಹಿಂದುಳಿದ ವರ್ಗಗಳ ಸಮುದಾಯದವರು ಯಾವ ತ್ಯಾಗಕ್ಕಾದರೂ ಸಿದ್ದರಾಗುವಂತೆ ಮನವಿ ಮಾಡಿದರು.
ತುಮಕೂರು ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಧನಿಯಕುಮಾರ್ ಮಾತನಾಡಿ,ಪ್ರಬಲ ಜಾತಿಗಳನ್ನು ಹಿಂದುಳಿದ ವರ್ಗ ಬ ಗೆ ಸೇರಿಸಲು ಮುಂದಾಗಿರುವುದು ಖಂಡನೀಯ.ಒಂದು ವೇಳೆ ಸರಕಾರ ಈ ವಿಚಾರದಲ್ಲಿ ಹಿಂದುಳಿದ ಸಮುದಾಯಗಳ ವಿರುದ್ದವಾಗಿ ಕೆಲಸ ಮಾಡಿದರೆ, ಮುಂದಿನ ಚುನಾವಣೆಯಲ್ಲಿ ಸಂಪೂರ್ಣವಾಗಿ ಹಿಂದುಳಿದ ಜಾತಿಗಳು ಬಿಜೆಪಿಗೆ ವಿರುದ್ದವಾಗಿ ನಿಲ್ಲುತ್ತವೆ ಎಂಬ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಯುವಜನರಿಗೆ ಸರಕಾರಿ ಕೆಲಸವೆಂಬುದು ಮರೀಚಿಕೆಯಾಗಿದೆ.ಶಿಕ್ಷಣ ಮತ್ತು ರಾಜಕೀಯದಲ್ಲಿಯೂ ಮೀಸಲಾತಿ ಬಹಳ ದೂರದ ಮಾತಾಗಿದೆ. ಇಂತಹ ವೇಳೆಯಲ್ಲಿ ಪ್ರಬಲ ಜಾತಿಗಳನ್ನು ಸೇರ್ಪಡೆ ಮಾಡುವುದು, ನಮ್ಮ ತಟ್ಟೆಯಲ್ಲಿರುವ ಅನ್ನವನ್ನು ಕಸಿದು, ಬಲಾಢ್ಯರಿಗೆ ನೀಡಿದಂತಾಗುತ್ತದೆ.ಇದು ಎಸ್ಸಿ, ಎಸ್ಟಿ, ಓಬಿಸಿ ಸಮುದಾಯಗಳು ಮೀಸಲಾತಿ ಮೂಲಕ ಪಡೆಯುತ್ತಿರುವ ಸೌಲಭ್ಯಗಳಿಗೆ ಹಳ್ಳ ತೋಡಿದಂತಾಗುತ್ತದೆ.ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಶೀಘ್ರವೇ ವಿಚಾರಸಂಕಿರಣವೊಂದನ್ನು ಏರ್ಪಡಿಸಲಾಗುವುದು ಎಂದು ಧನಿಯಕುಮಾರ್ ತಿಳಿಸಿದರು.
ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಕೆಂಪರಾಜು ಮಾತನಾಡಿ,ಒಬಿಸಿಗಳ ಹಿತರಕ್ಷಣೆಗೆ ಧರಣಿ ಕೈಗೊಂಡಿರುವುದನ್ನು ಬೆಂಬಲಿಸಿ, ಇಂದು ನಾವೂ ಕೂಡ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ.ಹಿಂದುಳಿದ ಸಮುದಾಯಗಳಿಗೆ ನೀಡುತ್ತಿರುವ ಅಲ್ಪಪ್ರಮಾಣದ ಸವಲತ್ತುಗಳು ಇನ್ನೂ ಕೆಲ ಸಣ್ಣ, ಅತಿ ಸಣ್ಣ ಜಾತಿಗಳಿಗೆ ತಲುಪಿಲ್ಲ.ಅಭಿವೃದ್ದಿ ನಿಗಮಗಳಲ್ಲಿ ನಿಗಧಿ ಪಡಿಸಿರುವ ಗುರಿಗಳಿಗೂ ಜನಸಂಖ್ಯೆಗೂ ಅಜಗಜಾಂತರ ವೆತ್ಯಾಸವಿದೆ.ಹೀಗಿರುವಾಗ ಪ್ರಬಲ ಜಾತಿಗಳನ್ನು ಸೇರಿಸುವುದರಿಂ ಹೆಚ್ಚಿನ ತೊಂದರೆಯಾಗಲಿದೆ. ಈ ಬಗ್ಗೆ ಹಿಂದುಳಿದ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ತಾಲೂಕು, ಹೋಬಳಿ ಮಟ್ಟದಲ್ಲಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬೃಹತ್ ಹೋರಾಟ ರೂಪಿಸಿ, ಪ್ರಬಲ ಜಾತಿಗಳನ್ನು ಪ್ರವರ್ಗ-2ಎಗೆ ಸೇರಿದಂತೆ ಒತ್ತಡ ತರಲಾಗುವುದು ಎಂದರು.
ಧರಣಿ ಸತ್ಯಾಗ್ರಹದಲ್ಲಿ ಮುಖಂಡರಾದ ಜಾಕೀರ್ ಹುಸೇನ್,ಶಿವಣ್ಣ, ರವಿಕುಮಾರ್,ಚಂದ್ರಶೇಖರ್ ಹುಳಿಯಾರು, ನಟರಾಜು,ಸಿ.ಆರ್, ಗುರುಪ್ರಸಾದ್, ರಾಜು ಹೊನ್ನೇಬಾಗಿ ಮುಂತಾದವರು ಭಾಗವಹಿಸಿದ್ದರು.

 

(Visited 1 times, 1 visits today)
Obc tumkur
Previous Articleಇದು ನನ್ನ ಕೊನೆಯ ಚುನಾವಣೆ ಒಗ್ಗಟ್ಟಿನಿಂದ ಗೆಲ್ಲಿಸಿ: ಕೆ.ಎನ್ ರಾಜಣ್ಣ
Next Article ಕಷ್ಟಕ್ಕೆ ದೇವರು ಪರಿಹಾರವಲ್ಲ ದುಡಿಮೆಯೇ ಪರಿಹಾರ!
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.