BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
  • ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ
  • ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ
  • ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
  • ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು
  • ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ
  • ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ
ತುಮಕೂರು

ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ

By News Desk BenkiyabaleUpdated:May 16, 2022 7:16 pm

ತುಮಕೂರು:
ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದ ಮನವಿ ಮೇರೆಗೆ ಇದರ ನವೀಕರಣಕ್ಕೆ 18 ಲಕ್ಷ ರೂ. ಅನುದಾನವನ್ನು ನೀಡಿರುವುದಾಗಿ ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಹಿತ ಕಾಯಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪತ್ರಿಕಾ ಏಜೆಂಟರೇ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತ್ರಿಕೆಗಳನ್ನು ವಿತರಿಸಿ ಜೀವನ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಅನೇಕ ಪತ್ರಕರ್ತರು ಇದನ್ನೇ ನಂಬಿಕೊಂಡು ಹತ್ತಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದಾರೆ. ನಗರ ಹಾಗೂ ಗ್ರಾಮೀಣ ಪತ್ರಕರ್ತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು.
ಪತ್ರಕರ್ತರಿಗೆ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಹಾಗೂ ಆರೋಗ್ಯ ವಿಮೆ, ಉಚಿತ ಹೆಲ್ತ್ ಕಾರ್ಡ್, ಉಚಿತ ಬಸ್ ಪಾಸ್ ಸೌಲಭ್ಯ, ತಾಲ್ಲೂಕು ಮಟ್ಟದಲ್ಲಿ ಪತ್ರಿಕಾ ಭವನ ನಿರ್ಮಾಣ, ಜಿಲ್ಲಾ ಮಟ್ಟದಲ್ಲಿ ಪತ್ರಕರ್ತರಿಗೆ ವಿಶೇಷ ತರಬೇತಿಗೆ ಆದ್ಯತೆ ನೀಡುವುದು, ಪತ್ರಕರ್ತರಿಗೆ ಉಚಿತ ನಿವೇಶನ ನೀಡುವುದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ನೀತಿಯನ್ನು ಸರಳೀಕರಣಗೊಳಿಸುವುದು ಹಾಗೂ ಪತ್ರಕರ್ತರ ವಾಹನಗಳಿಗೆ ಉಚಿತ ಟೋಲ್ ಫೀ ಮಾಡುವುದು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿರಿಯ ಪತ್ರಿಕಾ ಸಂಪಾದಕರಾದ ಜೀಲ್ ಪತ್ರಿಕೆ ಸಂಪಾದಕರಾದ ರುದ್ರಯ್ಯ, ಅಮೃತವಾಣಿ ಪತ್ರಿಕೆ ಸಂಪಾದಕರಾದ ಗಂಗಹನುಮಯ್ಯ, ಕಮಲಾ ಗಂಗಹನುಮಯ್ಯ, ಸೊಗಡು ಪತ್ರಿಕೆಯ ಎಸ್.ಶಿವಣ್ಣ, ಪ್ರಜಾಪ್ರಗತಿ ಪತ್ರಿಕೆಯ ಪರವಾಗಿ ಮಧುಕರ್, ಏಕೇಶ್ ಪತ್ರಿಕೆಯ ಪರವಾಗಿ ಟಿ.ಇ.ರಘುರಾಂ ಹಾಗೂ ಪುರುಷೋತ್ತಮ್ ಮೊದಲಿಯಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವರು ಹಾಗೂ ಸೊಗಡು ಪತ್ರಿಕೆ ಸಂಪಾದಕ ಎಸ್.ಶಿವಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಮುಂದೆಯೂ ಇದೇ ರೀತಿ ಉತ್ತಮವಾಗಿ ಕೆಲಸ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಅಮೃತವಾಣಿ ಪತ್ರಿಕೆ ಸಂಪಾದಕರು ಹಾಗೂ ಮಾಜಿ ಶಾಸಕರಾದ ಗಂಗಹನುಮಯ್ಯ ಮಾತನಾಡಿ, ನಮ್ಮ ಕಾಲದಲ್ಲಿ ಮೊಳೆ ಜೋಡಿಸಿ ಪತ್ರಿಕೆ ಪ್ರಿಂಟ್ ಮಾಡಲಾಗುತ್ತಿತ್ತು. ಇಂದಿನ ಕಾಲಘಟ್ಟದಲ್ಲಿ ತಂತ್ರಜ್ಞಾನವೂ ಬದಲಾಗಿ ಅತ್ಯಂತ ವೇಗವಾಗಿ ಓದುಗರಿಗೆ ಪತ್ರಿಕೆ ತಲುಪುತ್ತಿರುವುದು ಅತ್ಯಂತ ಸಂತೋಷದಾಯಕ ಎಂದರು.
ಪ್ರಜಾಪ್ರಗತಿ ಪತ್ರಿಕೆಯ ಮಧುಕರ್ ಮಾತನಾಡಿ, ನಾವೆಲ್ಲಾ ಒಂದಾಗಿ ಪತ್ರಕರ್ತರ ಹಿತ ಕಾಪಾಡಲು ಮುಂದಾಗಬೇಕು, ಒಗ್ಗಟ್ಟಿನಲ್ಲಿ ಬಲವಿದೆ ಎಂಬುದು ಈ ಕಾರ್ಯಕ್ರಮದಿಂದ ಸಾಬೀತಾಗಿದೆ. ನವೀಕರಣ ಕಾಮಗಾರಿ ಆದಷ್ಟು ಬೇಗ ಮುಗಿದು ಪತ್ರಕರ್ತರಿಗೆ ಅನುಕೂಲವಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್, ಸಂಸದ ಜಿ.ಎಸ್. ಬಸವರಾಜು, ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಾ.ಸಿ.ಎಂ.ರಾಜೇಶ್‍ಗೌಡ, ಚಿದಾನಂದ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಉಪಾಧ್ಯಕ್ಷರಾದ ತಿಪಟೂರು ಕೃಷ್ಣ, ಎಲ್. ಚಿಕ್ಕೀರಪ್ಪ, ಶ್ಯಾ.ನ.ಪ್ರಸನ್ನಮೂರ್ತಿ, ಕಾರ್ಯದರ್ಶಿಗಳಾದ ಹಾರೋಗೆರೆ ಸತೀಶ್, ದಶರಥ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಲಿಂಗಸ್ವಾಮಿ, ಖಜಾಂಚಿ ದೇವಪ್ರಕಾಶ್ ಸೇರಿದಂತೆ ಸಂಘದ ಎಲ್ಲಾ ಸದಸ್ಯರು, ಪತ್ರಕರ್ತರು, ಅಧಿಕಾರಿಗಳು ಹಾಜರಿದ್ದರು.

(Visited 91 times, 1 visits today)
Bommai tumkur
Previous Articleಸಮವಸ್ರ್ತಧಾರಿ ಸಿಬ್ಬಂದಿಗೆ ವರ್ತನೆ ಬಹುಮುಖ್ಯ: ಟಿ.ಜೆ ಉದೇಶ್
Next Article ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ
News Desk Benkiyabale

Related Posts

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm news

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm news

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm news
ತಾಜಾ ಸುದ್ಧಿಗಳು
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm
news

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm
news

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm
news

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm
news

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm
Our Youtube Channel
Our Picks

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

By News Desk BenkiyabaleNovember 03, 2026 4:38 pm

ತುಮಕೂರು: ಸಾರ್ವಜನಿಕರು ಓಡಾಡುವ ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿ ರಸ್ತೆ ಮುಚ್ಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ…

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.