BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ
  • ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ
  • ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ
  • ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ
  • ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ
  • ನೀನಾಸಂ ಮೂಲದ ಸದುಭಿರುಚಿ ನಾಟಕಗಳು
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಾಲ್ಯ ವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ
ಇತರೆ ಸುದ್ಧಿಗಳು

ಬಾಲ್ಯ ವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

By News Desk BenkiyabaleUpdated:June 08, 2022 6:18 pm

ತುಮಕೂರು:


ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಅತ್ಯಾಚಾರ/ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವನ್ನು ಒದಗಿಸಲಾಗುತ್ತಿದ್ದು, 36.75 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪಿಆರ್‍ಇಡಿ ವತಿಯಿಂದ ನಿರ್ಮಿಸಲಾಗಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡದ ಉದ್ಘಾಟನೆ ನೆರವೇರಿಸಬೇಕಿದ್ದು, ಈ ಸಂಬಂಧ ಶೀಘ್ರವಾಗಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಿಆರ್‍ಇಡಿ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ್ ಅವರು ಸಭೆಗೆ ತಮ್ಮ ಇಲಾಖಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುತ್ತಾ, ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಸಂಬಂಧ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಲು ‘ವೀಡಿಯೋ ಆನ್ ವೀಲ್’ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ 205 ಕಡೆ ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸಲಾಗಿದ್ದು, ಒಟ್ಟು 36044 ಜನರು ಕಾರ್ಯಕ್ರಮದ ಪ್ರಯೋಜನ ಪಡೆದಿರುತ್ತಾರೆ ಎಂದು ವಿವರಿಸಿದರು. ತುಮಕೂರು ಜಿಲ್ಲೆಯಲ್ಲಿ 2021-22ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಒಟ್ಟು 111 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 100 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದ್ದು, 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಉಪನಿರ್ದೇಶಕರು ವಿವರಿಸಿದರು.
ಕೌಟುಂಬಿಕ ದೌರ್ಜನ್ಯ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರಡಿ ಜನವರಿ 2022ರಿಂದ ಮಾರ್ಚ್ 2022ರವರೆಗೆ 55 ಪ್ರಕರಣಗಳು ಸೇರಿದಂತೆ ಒಟ್ಟು 120 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 50 ಪ್ರಕರಣಗಳನ್ನು, ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ವರ್ಷಾಂತ್ಯದಲ್ಲಿ ಸಂರಕ್ಷಣಾಧಿಕಾರಿ ಹಂತದಲ್ಲಿ 34 ಹಾಗೂ ನ್ಯಾಯಾಲಯ ಹಂತದಲ್ಲಿ 36 ಸೇರಿ ಒಟ್ಟು 70 ಪ್ರಕರಣಗಳು ಬಾಕಿ ಇರುತ್ತವೆ ಎಂದು ತಿಳಿಸಿದರು. ಸಾಂತ್ವಾನ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 517 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 497 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥಗೊಳಿಸಲಾಗಿದ್ದು, 20 ಪ್ರಕರಣಗಳು ಬಾಕಿ ಇರುತ್ತವೆ ಎಂದರು. ‘ಸಖಿ ಒನ್ ಸ್ಟಾಪ್ ಸೆಂಟರ್’ ಯೋಜನೆಯಡಿ 2021-22ನೇ ಸಾಲಿನಲ್ಲಿ ಒಟ್ಟು 234 ಪ್ರಕರಣ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿ ತುಮಕೂರು ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಒಟ್ಟು 28 ಪ್ರಕರಣಗಳು ದಾಖಲಾಗಿರುತ್ತವೆ ಎಂದು ಉಪನಿರ್ದೇಶಕರಾದ ಶ್ರೀಧರ್ ತಿಳಿಸಿದರು. ಸಭೆಯಲ್ಲಿ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur Tumkur dc yspatil
Previous Articleಜೂ.25: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
Next Article ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನಕ್ಕೆ ಖಂಡನೆ!
News Desk Benkiyabale

Related Posts

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm news
ತಾಜಾ ಸುದ್ಧಿಗಳು
news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm
news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
news

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
news

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
Our Youtube Channel
Our Picks

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

By News Desk BenkiyabaleNovember 05, 2026 5:31 pm

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಸುಮಾರು 1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ ಉಳಿದಿದ್ದು, ಈ ಪೈಕಿನ 1.09 ಕೋಟಿ…

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.