BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ಧರಬೆಟ್ಟದ ತಪ್ಪಲಲ್ಲಿ ಸಾಮೂಹಿಕ ಯೋಗಾಭ್ಯಾಸ
ಇತರೆ ಸುದ್ಧಿಗಳು

ಸಿದ್ಧರಬೆಟ್ಟದ ತಪ್ಪಲಲ್ಲಿ ಸಾಮೂಹಿಕ ಯೋಗಾಭ್ಯಾಸ

By News Desk BenkiyabaleUpdated:June 21, 2022 3:30 pm

ತುಮಕೂರು:


ಹಸಿರಿನ ವನಸಿರಿಯ ನಡುವೆ ಹಕ್ಕಿಗಳ ಕಲರವದೊಂದಿಗೆ ಸೂರ್ಯನ ಮೊದಲ ರಶ್ಮಿ ಭೂರಮೆಗೆ ಮುತ್ತಿಕ್ಕುವ ಸಮಯದಲ್ಲಿ ಸುಕ್ಷೇತ್ರ ಸಿದ್ಧರಬೆಟ್ಟದ ತಪ್ಪಲಲ್ಲಿ ಓಂಕಾರದಿಂದ ಪ್ರಾರಂಭವಾದ ಸಾಮೂಹಿಕ ಯೋಗಾಭ್ಯಾಸ ಎಲ್ಲರಲ್ಲೂ ನವಚೈತನ್ಯ ತಂದುಕೊಟ್ಟಿತು.
ಜಿಲ್ಲೆಯ ಕೊರಟಗೆರೆ ತಾಲೂಕು ಸುಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಆವರಣದಲ್ಲಿ ಮಂಗಳವಾರ ಬೆಳಗಿನ ಜಾವ ಶ್ರೀ ಕ್ಷೇತ್ರದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳು, ಮಠದ ವಿದ್ಯಾರ್ಥಿಗಳು, ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಸದಸ್ಯರು ವಿವಿಧ ಯೋಗಾಸನ, ಪ್ರಾಣಾಯಾಮ ಹಾಗು ಧ್ಯಾನಾಭ್ಯಾಸ ಮಾಡುವ ಮೂಲಕ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಸಿದ್ಧರಬೆಟ್ಟದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ|| ಹೆಚ್.ಬಿ. ಭವ್ಯ ಅವರು ವಿವಿಧ ಆಸನಗಳ ಭಂಗಿಗಳು ಹಾಗೂ ಆಸನಗಳನ್ನು ಅಭ್ಯಾಸ ಮಾಡುವುದರಿಂದಾಗುವ ಪ್ರಯೋಜನಗಳ ಬಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ ವಜ್ರಾಸನ, ತಾಡಾಸನ, ವೃಕ್ಷಾಸನ, ಪಾದಹಸ್ತಾಸನ, ಅರ್ಧಚಕ್ರಾಸನ, ತ್ರಿಕೋನಾಸಾನ, ವಕ್ರಾಸನ, ಉಷ್ಟ್ರಾಸನ, ಶಶಾಂಕಾಸನ, ಮಕರಾಸನ, ಶಲಭಾಸನ, ಧನುರಾಸನಗಳಲ್ಲದೆ ನಾಡಿಶುದ್ಧಿ ಹಾಗೂ ಶೀತಳಿ ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿಸಲಾಯಿತು. ಈ ಅಭ್ಯಾಸಗಳಿಂದ ದೇಹದಲ್ಲಾಗುವ ಬದಲಾವಣೆಗಳು ಎಲ್ಲರ ಅನುಭವಕ್ಕೆ ಬಂದಿತು.
ಡಾ|| ಭವ್ಯ ಮಾತನಾಡಿ ಊಟದ ನಂತರ ಮಾಡುವ ಏಕೈಕ ಆಸನ ವಜ್ರಾಸನದಿಂದ ಅಜೀರ್ಣ ಸಮಸ್ಯೆ; ಮಕರಾಸನದಿಂದ ಉಸಿರಾಟದ ತೊಂದರೆ; ಶಶಾಂಕಾಸನ ಅಭ್ಯಾಸದಿಂದ ರಕ್ತದೊತ್ತಡ ನಿಯಂತ್ರಣ, ಬೆನ್ನಿನ ಸಮಸ್ಯೆ ನಿವಾರಣೆಯಾಗುತ್ತದೆ. ನಾಡಿಶುದ್ಧಿ ಹಾಗೂ ಶೀತಳಿ ಪ್ರಾಣಾಯಾಮ ಅಭ್ಯಾಸದಿಂದ ದೇಹದಲ್ಲಿರುವ 72000 ನಾಡಿಗಳು ಶುದ್ಧಿಯಾಗುತ್ತವೆ. ದೇಹದ ಸಮತೋಲನ ಕಾಯ್ದುಕೊಳ್ಳಬಹುದು. ಮನಸ್ಸು ಶಾಂತಚಿತ್ತತೆಯಿಂದಿರಲು ಸಾಧ್ಯಮಾಡಿಕೊಡುತ್ತದೆ ಎಂದು ಸಲಹ ನೀಡಿದರು.
ಬ್ರಹ್ಮಕುಮಾರಿ ಸಂಸ್ಥೆಯ ಸುಜಾತಕ್ಕ ಅವರು ಧ್ಯಾನಾಭ್ಯಾಸವನ್ನು ಮಾಡಿಸುತ್ತಾ ಧ್ಯಾನ ಮಾಡುವುದರಿಂದ ಮನಸ್ಸಿಗೆ ಏಕಾಗ್ರತೆ, ತಾಳ್ಮೆ, ಸಮಾಧಾನ ತಂದುಕೊಡುವುದಲ್ಲದೆ ಜ್ಞಾನದ ಮಟ್ಟ ಹೆಚ್ಚುತ್ತದೆ ಎಂದರು.
ಯೋಗಾಭ್ಯಾಸದಲ್ಲಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡುತ್ತಾ, ವಿಶ್ವದಾದ್ಯಂತ ಜೂನ್ 21ರಂದು ಏಕಾಕಾಲಕ್ಕೆ ಯೋಗ ದಿನವನ್ನಾಗಿ ಆಚರಿಸುತ್ತಿದ್ದೇವೆ. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾವಿಂದು ಆಚರಿಸುತ್ತಿದ್ದು, ಪ್ರಧಾನ ಮಂತ್ರಿ ಮೋದಿಯವರೂ ಸಹ ಮೈಸೂರಿನಲ್ಲಿ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರಲ್ಲದೆ ಯೋಗ, ಪ್ರಾಣಾಯಾಮ, ಧ್ಯಾನಕ್ಕೆ ಈ ಸಿದ್ಧರಬೆಟ್ಟ ಕ್ಷೇತ್ರವು ಸೂಕ್ತವಾಗಿದೆ. ಕಳೆದ 8 ವರ್ಷಗಳ ಹಿಂದೆ ಯೋಗವೆಂದರೆ ದೇಹವನ್ನು ದಂಡಿಸುವ ವ್ಯಾಯಾಮವೆಂದು ನಂಬಲಾಗುತ್ತಿತ್ತು. ಆದರೆ ಯೋಗವೆಂದರೆ ಕೇವಲ ವ್ಯಾಯಾಮವಲ್ಲ. ದೇಹಕ್ಕೂ, ಮನಸ್ಸಿಗೂ ಸಮಾಧಾನ ತರುವ ಸಾಧನ. ಯೋಗಾಭ್ಯಾಸ ಮಾಡುವವರು ಉಸಿರಾಟದ ಮೇಲೆ ಗಮನವನ್ನು ಕೇಂದ್ರೀಕರಿಸಿ ಸುಧೀರ್ಘವಾಗಿ, ನಿಧಾನವಾಗಿ, ಕ್ರಮವಾಗಿ ಉಸಿರಾಡಬೇಕು. ಯೋಗ ಸಾಧಕರ ಸಲಹೆಯಿಲ್ಲದೆ ಉಸಿರಾಟದ ಕ್ರಮವಿಲ್ಲದೆ ತಪ್ಪಾಗಿ ಯೋಗಾಭ್ಯಾಸ ಮಾಡಿದರೆ ಅಡ್ಡಪರಿಣಾಗಳುಂಟಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಯೋಗ ತಜ್ಞರ ಸಲಹೆಗಳನ್ನು ಅನುಸರಿಸಿಯೇ ಯೋಗಾಭ್ಯಾಸ ಮಾಡಬೇಕೆಂದರು.
ಯೋಗವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ಮನಸ್ಸನ್ನು ಕೇಂದ್ರೀಕರಿಸಬಹುದಲ್ಲದೆ ನೆನಪಿನ ಶಕ್ತಿ ಹೆಚ್ಚುತ್ತದೆ. ಸುಮಾರು 5000 ವರ್ಷಕ್ಕೂ ಹೆಚ್ಚು ಇತಿಹಾಸವಿರುವ ಯೋಗ, ಧ್ಯಾನ, ಪ್ರಾಣಾಯಾಮಕ್ಕೆ ನಮ್ಮ ದೇಶವೇ ಮೂಲ ತವರು. ವಿದೇಶೀಯರೇ ಆಕರ್ಷಿತರಾಗಿ ಯೋಗಾಭ್ಯಾಸದಲ್ಲಿ ತೊಡಗುತ್ತಿರುವಾಗ ನಾವೇಕೆ ಅಭ್ಯಾಸ ಮಾಡಬಾರದು? ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವ ಮೂಲಕ ದೇಹ ಮತ್ತು ಮನಸ್ಸನ್ನು ಸದೃಢವಾಗಿಟ್ಟುಕೊಳ್ಳೋಣವೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವಹಿಸಿ ಎಲ್ಲ ಆಸನಗಳ ಅಭ್ಯಾಸದಲ್ಲಿ ಪಾಲ್ಗೊಂಡಿದ್ದ ಶ್ರೀ ಕ್ಷೇತ್ರದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳು ಮಾತನಾಡುತ್ತಾ ಸುಕ್ಷೇತ್ರದಲ್ಲಿ ಯೋಗ ದಿನಾಚರಣೆ ಹಮ್ಮಿಕೊಂಡಿರುವುದು ತಮಗೆ ಸಂತೋಷದ ವಿಚಾರ. ಪ್ರತೀದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ, ಜ್ಞಾನ ಪ್ರಾಪ್ತಿಯಾಗುವುದಲ್ಲದೆ ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಯೋಗಬಂಧುಗಳಾಗಿ ಆರೋಗ್ಯಯುತ ಜೀವನ ನಡೆಸಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪೂರ್‍ವಾಡ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ.ವಿದ್ಯಾಕುಮಾರಿ, ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಕೊರಟಗೆರೆ ತಹಶೀಲ್ದಾರ್, ನಾಹಿದಾ ಜಂ ಜಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಮಂಜುನಾಥ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಟಿ.ಎ. ವೀರಭದ್ರಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ|| ಸಂಜೀವಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಠದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 2 times, 1 visits today)
tumkur yoga
Previous Articleಡಾಕ್ಟರೇಟ್ ಪಡೆದ ಇನ್ಸ್ಪೆಕ್ಟರ್ ನವೀನ್‍ರವರಿಗೆ ಸನ್ಮಾನ
Next Article ಎಣ್ಣೆಕಾಳು ಬೀಜಗಳ ಬೆಲೆ ದುಪ್ಪಟ್ಟಾಗದಂತೆ ಕ್ರಮ ವಹಿಸಲು ಮನವಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.