BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ ಸಬಲೀಕರಣ: ಸಚಿವ ಅಶ್ವತ್ಥನಾರಾಯಣ
ಇತರೆ ಸುದ್ಧಿಗಳು

ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ ಸಬಲೀಕರಣ: ಸಚಿವ ಅಶ್ವತ್ಥನಾರಾಯಣ

By News Desk BenkiyabaleUpdated:July 12, 2022 5:49 pm

ತುಮಕೂರು:


ನಾಗರಿಕರು ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಕೊಡುಗೆ ನೀಡಬೇಕು. ಹೀಗಾದಾಗ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದಲ್ಲಿ ಮೇಲ್ದರ್ಜೆಗೇರುವ ಜೊತೆಗೆ ನಾಗರಿಕರ ಸಬಲೀಕರಣವೂ ಸಾಧ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ”ಯ ನಿರ್ಮಾಣಕ್ಕೆ ಹತ್ತಿರದ ರಂಗಾಪುರದಲ್ಲಿ ಸೋಮವಾರ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಇಪ್ಪತ್ತೊಂದನೇ ಶತಮಾನವು ಜ್ಞಾನಾಧಾರಿತ ಸಮಾಜವಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಸುಸ್ಥಿರವಾಗಿರಬೇಕೆಂದರೆ ಗುಣಮಟ್ಟ ಮುಖ್ಯ. ಇಂತಹ ಕೇಂದ್ರಗಳು ಸ್ಥಳೀಯವಾಗಿ ಪ್ರತಿಭೆಯನ್ನು ಉತ್ತೇಜಿಸುವ ಜೊತೆಗೆ ಇಡೀ ದೇಶದೆಲ್ಲೆಡೆಯ ಪ್ರತಿಭೆಗಳನ್ನು ಇಲ್ಲಿಗೆ ಸೆಳೆಯುವ ರೀತಿಯಲ್ಲಿ ಬೆಳೆಯಬೇಕು. ಇದು ಸಾಧ್ಯವಾದಾಗ, ವೈವಿಧ್ಯತೆಯನ್ನು ಉಳಿಸಿಕೊಂಡು ನಮ್ಮತನದ ಛಾಪನ್ನು ಒತ್ತಿದಂತಾಗುತ್ತದೆ ಎಂದು ಸಚಿವರು ವಿವರಿಸಿದರು.
ಯಾವ ಜಾಗದಲ್ಲಿ ಗುಣಮಟ್ಟದ ಶಿಕ್ಷಣ ಇರುತ್ತದೋ ಅದು ಸಮೃದ್ಧತೆಯ ತಾಣವಾಗುತ್ತದೆ. ಇಲ್ಲಿ 16 ಎಕರೆ ಕ್ಯಾಂಪಸ್ ತಲೆಯೆತ್ತಲಿದ್ದು, ಎಂ.ಕಾಂ, ಎಂಸಿಎ ಕೋರ್ಸ್ ಗಳು ಇರಲಿವೆ. ಜಿಲ್ಲೆಯ ಬಿದರೆಕಟ್ಟೆಯಲ್ಲಿ 44 ಕೋಟಿ ವೆಚ್ಚದಲ್ಲಿ ಹೊಸ ಕ್ಯಾಂಪಸ್ ನಿರ್ಮಾಣ ಕಾರ್ಯ ನಡೆದಿದೆ. ಸಿರಾದಲ್ಲಿ ಪಿ.ಜಿ. ಕೇಂದ್ರ ಕಾರ್ಯಾಚರಿಸುತ್ತಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಮಕೂರು ವಿ.ವಿ.ಯಲ್ಲಿ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ, ಒಟ್ಟು 70 ಎಕರೆ ವಿಸ್ತೀರ್ಣದಲ್ಲಿರುವ ತುಮಕೂರು ವಿ.ವಿ.ಯು ಈಗ ನ್ಯಾಕ್ ಬಿ+ ಶ್ರೇಣಿಯಲ್ಲಿದ್ದು, ಎ+ ಶ್ರೇಣಿಗೆ ಏರಬೇಕು. ಅದೇ ರೀತಿ ಎನ್.ಐ.ಆರ್.ಎಫ್. ಶ್ರೇಯಾಂಕದಲ್ಲಿ ಈಗ 150ರಿಂದ 200ರ ಒಳಗಿದ್ದು, ಇದು ಇನ್ನಷ್ಟು ಮೇಲಕ್ಕೆ ಬರಬೇಕು. ಒಟ್ಟಾರೆ ತುಮಕೂರು ವಿ.ವಿ. ದೇಶದ ಎಲ್ಲಾ ಭಾಗದವರೂ ಓದಲು ಬಯಸುವಂತಹ ಶೈಕ್ಷಣಿಕ ತಾಣವಾಗಬೇಕು ಎಂದು ಆಶಿಸಿದರು.
ಸದ್ಯ ತಾಂತ್ರಿಕತೆಯು ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸುತ್ತಿದೆ. ಈಗ ರಾಜ್ಯದ ಯಾವುದೇ ಗ್ರಾಮದ ವಿದ್ಯಾರ್ಥಿ ಯುಯುಸಿಎಂಎಸ್ (ಯುನಿಫೈಡ್ ಯುನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ ಮೆಂಟ್ ಸಿಸ್ಟಂ) ಬಳಸಿ ತಾನಿರುವ ಸ್ಥಳದಿಂದ ರಾಜ್ಯದ ಯಾವುದೇ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು. ವಿದ್ಯಾರ್ಥಿಗಳ ಅಂಕಪಟ್ಟಿ ಸೇರಿದಂತೆ 43 ವರ್ಷಗಳ ಶೈಕ್ಷಣಿಕ ದಾಖಲೆಗಳು ಡಿಜಿ ಲಾಕರ್ ನಲ್ಲಿರುವುದರಿಂದ ಕುಳಿತ ಜಾಗದಿಂದಲೇ ಶೈಕ್ಷಣಿಕ ದಾಖಲಾತಿಗಳನ್ನು ಅರ್ಜಿಗೆ ಲಗತ್ತಿಸಬಹುದು ಎಂದು ವಿವರಿಸಿದರು.
ಸರ್ಕಾರವು 22 ವರ್ಷಗಳ ನಂತರ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೊಸ ಕಾಯ್ದೆ ಜಾರಿಗೊಳಿಸುವ ಉದ್ದೇಶ ಹೊಂದಿದೆ. ಇದಕ್ಕೆ ಮುಂಚೆ 2000ನೇ ಇಸವಿಯಲ್ಲಿ ಕರ್ನಾಟಕ ಸ್ಟೇಟ್ ಯೂನಿವರ್ಸಿಟಿ ಕಾಯ್ದೆ ತರಲಾಗಿತ್ತು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಲನಿರ್ಂಗ್ ಮ್ಯಾನೇಜ್ ಮೆಂಟ್ ಸಿಸ್ಟಂ, ಸ್ಮಾರ್ಟ್ ಕ್ಲ್ಯಾಸ್ ರೂಮ್ ಸೇರಿದಂತೆ ಹಲವು ಉಪಕ್ರಮಗಳಿಗೆ ಚಾಲನೆ ಕೊಡಲಾಗಿದೆ. ಯಾವುದೇ ಕಾಲೇಜಿನಲ್ಲಿ ಬೋಧಕರ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಕೇಂದ್ರೀತ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ತಿಳಿಸಿದರು.
ವಿಶ್ವವಿದ್ಯಾಲಯಗಳು ಕೇವಲ ಪದವಿ ಕೊಡುವುದμÉ್ಟೀ ಅಲ್ಲ, ಬದುಕಿಗೆ ಅಗತ್ಯವಾಗಿ ಬದುಕಿಗೆ ಬೇಕಾದ ಜ್ಞಾನವನ್ನು ನೀಡಬೇಕು. ಆ ಕೆಲಸವನ್ನು 2020ರ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಯಾವ ವಿದ್ಯಾರ್ಥಿಗೆ ತಾನು ಏನು ಕಲಿಯಬೇಕು ಎಂದು ಇಚ್ಚಿಸುತ್ತಾನೋ ಅಂತಹ ಶಿಕ್ಷಣವನ್ನು ನೀಡಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದ್ದು, ಹೆಚ್ಚು ವಿದ್ಯಾರ್ಹತೆ ಹೊಂದಿರುವವರಲ್ಲೇ ನೈತಿಕ ಶಿಕ್ಷಣದ ಕೊರತೆಯಿರುವುದನ್ನು ಕಾಣುತ್ತಿದ್ದೆವೆ ಅದನ್ನು ಹೋಗಲಾಡಿಸಿ ನಮ್ಮ ರಾಷ್ಟ್ರದ ಬಗ್ಗೆ ಗೌರವ ಮತ್ತು ಸಂಸ್ಕøತಿಯ ಬಗ್ಗೆ ಯೋಚಿಸುವಂತಹ ಶಿಕ್ಷಣ ಎನ್‍ಇಪಿಯ ಧ್ಯೇಯವಾಗಿದೆ ಎಂದರು.
ಇಂದು ಶಿಕ್ಷಿತರಲ್ಲೇ ಅತಿ ಹೆಚ್ಚು ಆತ್ಮಹತ್ಯೆಯ ಪ್ರಕರಣಗಳು ಕಂಡುಬರುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಜೀವನದ ಉದ್ದೇಶವನ್ನು ಕಟ್ಟಿಕೊಡುವ ಕೆಲಸವನ್ನು ಮಾಡಲಾಗಿದೆ ಎಂದರು.
ಸಚಿವರು ಇದಕ್ಕೂ ಮುನ್ನ ತಿಪಟೂರು ಪಟ್ಟಣದಲ್ಲಿ ಪದವಿ ಕಾಲೇಜಿಗೆ ಭೇಟಿ ಕೊಟ್ಟು, ಅಲ್ಲಿ ನಿರ್ಮಾಣ ಹಂತದಲ್ಲಿರುವ ಕಾಲೇಜು ಕಟ್ಟಡವನ್ನು ಪರಿಶೀಲಿಸಿ, ಆಗಿರುವ ಪ್ರಗತಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಕೆರೆಗೋಡಿ ರಂಗಾಪುರ ಮಠದ ಶ್ರೀ ಶ್ರೀ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಹಾಗೂ ಕ್ಷೇತ್ರದ ಶಾಸಕ ಬಿ.ಸಿ.ನಾಗೇಶ್, ತುಮಕೂರು ವಿ.ವಿ. ಕುಲಪತಿ ಪ್ರೊ.ಕೇಶವ, ಸಿಂಡಿಕೇಟ್ ಸದಸ್ಯರಾದ ರಾಜು, ಟಿ.ಎಸ್.ಸುನಿಲ್ ಪ್ರಸಾದ್, ಕುಲಸಚಿವ ಪ್ರೊ.ನಿರ್ಮಲ್ ರಾಜು, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ ಅವರು ಇದ್ದರು.

(Visited 7 times, 1 visits today)
tiptur tumkur
Previous Articleಕೆನಡಾದ ಸಂಸದರನ್ನು ಭೇಟಿಯಾದ ಎಂಎಲ್ಸಿ ಆರ್.ರಾಜೇಂದ್ರ: ಹಲವು ವಿಚಾರಗಳ ಚರ್ಚೆ
Next Article ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ನೀರು
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm news

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm news

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

By News Desk BenkiyabaleJune 30, 2026 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ…

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.