ತುಮಕೂರು:

ಜಿಲ್ಲೆಯಾದ್ಯಂತ 2022ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 13 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 12, 2022ರಿಂದ ಆಗಸ್ಟ್ 25, 2022ರವರೆಗೆ (ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ನಡೆಯಲಿದ್ದು, ಪರೀಕ್ಷೆಯು ಲೋಪದೋóಷವಿಲ್ಲದೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶಿಸಿದ್ದಾರೆ.
ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ eóÉರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚುವುದು, ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸದ್ದಾರೆ.
ಪರೀಕ್ಷೆಯ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ/ವಿದ್ಯಾರ್ಥಿಗಳು ಮೊಬೈಲ್ ತರುವುದು/ಉಪಯೋಗಿಸುವುದನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

									 
					



