BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ: ಅರಗ ಜ್ಞಾನೇಂದ್ರ
ಇತರೆ ಸುದ್ಧಿಗಳು

ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ: ಅರಗ ಜ್ಞಾನೇಂದ್ರ

By News Desk BenkiyabaleUpdated:August 15, 2022 5:41 pm

ತುಮಕೂರು:


ವಿಶ್ವದ ಬಲಾಡ್ಯ ರಾಷ್ಟ್ರಗಳ ಪೈಕಿ ಭಾರತವು ಸಹ ಒಂದಾಗಿದ್ದು, ಜಿ-20 ರಾಷ್ಟ್ರಗಳ ಗುಂಪಿನಲ್ಲಿ ‘ಭಾರತ ನಾಯಕ ರಾಷ್ಟ್ರ’ವೆನಿಸಿದೆ. ಇಂದು ಇಡೀ ಜಗತ್ತೇ ನಮ್ಮ ದೇಶವನ್ನು ಗೌರವಿಸುವಂತಹ ನಾಯಕತ್ವ ನಮ್ಮ ದೇಶಕ್ಕಿದ್ದು, ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಬಾಹ್ಯಕಾಶ ತಂತ್ರಜ್ಞಾನದಲ್ಲಿ ನಾವು ಸ್ವಾವಲಂಭನೆಯನ್ನು ಸಾಧಿಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ. ಅತ್ಯಾಧುನಿಕ ಸಬ್‍ಮೆರಿನ್‍ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿದ್ದೇವೆ. ಅಂತೆಯೇ ವಿಶ್ವದಲ್ಲಿಯೇ ನಾಲ್ಕನೇ ಅತಿದೊಡ್ಡ ಸೈನ್ಯ ನಮ್ಮದಾಗಿದ್ದು, ಇದು ಸಹ ನಾವೆಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.
ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದ ನಂತರ, ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಣ್ಣಿಗೆ ಕಾಣದ ವೈರಾಣು ಕೋವಿಡ್-19ನಿಂದ ಇಡೀ ಜಗತ್ತೇ ತತ್ತರಿಸಿದ್ದು, ಈ ಸಂದರ್ಭ ಭಾರತದ ಎರಡು ಕಂಪನಿಗಳು ಕೋವಿಡ್ ವೈರಾಣು ವಿರುದ್ಧ ಲಸಿಕೆಯನ್ನು ಕಂಡುಹಿಡಿದು ನಮ್ಮ ದೇಶದ ಜನರನ್ನು ಕೋವಿಡ್‍ನಿಂದ ರಕ್ಷಿಸಿದ್ದಲ್ಲದೆ, ಲಸಿಕೆಯನ್ನು ವಿದೇಶಗಳಿಗೂ ಕಳುಹಿಸಿಕೊಡಲಾದ ವಿಷಯ ನಾವು ಗರ್ವ ಪಡುವಂತಹ ವಿಷಯವಾಗಿದೆ ಎಂದರು.
ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ವೈದ್ಯರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸಿ ಜನರನ್ನು ಕೋವಿಡ್‍ನಿಂದ ರಕ್ಷಿಸಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ದೇಶದ ಜನತೆಗೆ ಉಚಿತ ಆಹಾರ ಪಡಿತರಗಳನ್ನು ಸಹ ನಮ್ಮ ಸರ್ಕಾರ ನೀಡಿರುತ್ತದೆ ಎಂದರು.
ಸ್ವಾತಂತ್ರ್ಯ ಗಳಿಸುವಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟ ಬ್ರಿಟಿಷರಲ್ಲಿ ನಡುಕವನ್ನುಂಟು ಮಾಡಿತ್ತು. ಮಹಾನ್ ವೀರ ಸೇನಾನಿಗಳು/ ಹೋರಾಟಗಾರರ ತ್ಯಾಗ-ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ ಎಂದ ಅವರು, ನಮಗೆ ಸ್ವಾತಂತ್ರ್ಯ ಸಿಗಲು ಹೋರಾಡಿದ ಆತ್ಮಗಳು ಕಣ್ಣೀರಾಗಬಾರದು ಅಂತಹ ವ್ಯಕ್ತಿತ್ವವನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕಿದೆಯಲ್ಲದೇ, ಸ್ವಾತಂತ್ರ್ಯಕ್ಕಾಗಿ ಮಡಿದವರ ಕನಸಿನ ಭಾರತಕ್ಕೆ ನಮ್ಮ ಕೊಡುಗೆಯೇನು ಎಂಬುದನ್ನು ನಾವಿಂದು ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ಅವರು ಕರೆ ನೀಡಿದರು. ಭಾರತ ಇಬ್ಭಾಗವಾದಾಗ ಗಾಂಧೀಜಿಯವರು “ನಮ್ಮ ದೇಹವನ್ನು ತುಂಡು ಮಾಡಿ ದೇಶವನ್ನಲ್ಲ” ಎಂಬ ಮಾತನ್ನು ಸಚಿವರು ಸ್ಮರಿಸಿದರು. ಬ್ರಿಟಿಷರು ಭಾರತ ಬಿಟ್ಟು ತೊಲಗಿದಾಗ 540ಕ್ಕೂ ಅಧಿಕ ಸಂಸ್ಥಾನಗಳು ಭಾರತದಲ್ಲಿದ್ದವು. ಒಕ್ಕೂಟ ವ್ಯವಸ್ಥೆಗೆ ಸೇರಲೊಪ್ಪದ ಹೈದರಾಬಾದ್ ನಿಜಾಮನ ಸಂಸ್ಥಾನಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಸೈನ್ಯವನ್ನು ಕಳುಹಿಸಿ ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಸಫಲರಾದರು. ಈ ಮೂಲಕ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸಾಂಸ್ಕøತಿಕವಾಗಿ ಏಕತೆಯನ್ನು ಹೊಂದಿರುವ ದೇಶವಾಗಿದೆಯೆಂದರು.
ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ಮುಂದಿನ ಹತ್ತು ವರ್ಷಗಳಿಗಾಗುವಷ್ಟು ಆಹಾರ ಸಂಗ್ರಹಣಾ ಸಾಮಥ್ರ್ಯವನ್ನು ನಮ್ಮ ದೇಶ ಹೊಂದಿದೆ ಎಂದರು. ದೇಶದಾದ್ಯಂತ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ಕೃಷಿಗೆ ಆದ್ಯತೆಯನ್ನು ನೀಡಲಾಗಿದೆ. 1947ರ ಸುಮಾರಿಗೆ 549 ಇದ್ದ ತಲಾ ಆದಾಯ ಇಂದು 1.50 ಲಕ್ಷದμÁ್ಟಗಿದೆ. ರಾಷ್ಟ್ರೀಯ ಹೆದ್ದಾರಿ ಕೇವಲ 21 ಸಾವಿರ ಕಿ.ಮೀ ಇತ್ತು, ಇಂದು 1.40 ಲಕ್ಷ ಸಾವಿರ ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಈ ರಾಷ್ಟ್ರ ಹೊಂದಿದೆ ಎಂದರು.
ರಾಷ್ಟ್ರಕ್ಕೆ ನಾವೇನು ಕೊಡುಗೆ ನೀಡಬಹುದು ಎಂಬುದಕ್ಕೆ ಸಿದ್ಧಗಂಗಾ ಮಠ ಉದಾಹರಣೆಯಾಗಿದೆ. ಪೂಜ್ಯ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರು ಸಿದ್ಧಗಂಗಾ ಮಠದಲ್ಲಿ ಸಾವಿರಾರು ಮಂದಿಗೆ ಅನ್ನ, ಅಕ್ಷರ, ಜ್ಞಾನ ನೀಡಿದರು. ಈ ಮಾದರಿಯಲ್ಲಿ ಅನೇಕರು ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ ಪರಿಣಾಮ ಸ್ವಾತಂತ್ರ್ಯ ಪೂರ್ವದಲ್ಲಿ ಶೇ. 27ರಷ್ಟು ಇದ್ದ ಸಾಕ್ಷರತೆ ಇಂದು ಶೇ. 84ರಷ್ಟು ಸಾಕ್ಷರತೆಯನ್ನು ಸಾಧಿಸಿದೆ ಎಂದರು. 75ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಮೃತ ಸರೋವರ ಕಾರ್ಯಕ್ರಮದಡಿ 15ಕ್ಕೂ ಹೆಚ್ಚಿನ ಕೆರೆಗಳನ್ನು ಪುನಶ್ಚೇತನ/ನಿರ್ಮಾಣಗೊಳಿಸಲಾಗಿದ್ದು, ಆಗಸ್ಟ್ 15ರಂದು ಅಂದರೆ ಇಂದು ಕೆರೆಗಳ ಅಂಗಳದಲ್ಲಿ ಅನೇಕ ಸ್ವಾತಂತ್ರ್ಯ ಯೋಧರನ್ನು ಕರೆದು ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಇತ್ತೀಚೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಹೆಚ್ಚು ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತದೆ. ಈ ಮಳೆಯಿಂದಾಗಿ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಬಹುತೇಕರು ಮನೆಗಳನ್ನು ಹಾಗೂ ಜಾನುವಾರುಗಳನ್ನೂ ಸಹ ಕಳೆದುಕೊಂಡಿರುತ್ತಾರೆ. ಈ ಕಠಿಣ ಪರಿಸ್ಥಿತಿಯನ್ನು ಜಿಲ್ಲಾಡಳಿತ ಯಶಸ್ವಿಯಾಗಿ ನಿಭಾಯಿಸಿದ್ದು, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗುವ ಮೂಲಕ ಸಕಾಲದಲ್ಲಿ ಅರ್ಹರಿಗೆ ಪರಿಹಾರ ನೀಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿರುತ್ತಾರೆ. ಇದಕ್ಕಾಗಿ ಜಿಲ್ಲಾಡಳಿತವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ ಎಂದರು.

(Visited 1 times, 1 visits today)
Araga jnanendra tumkur
Previous Articleಬಿಜೆಪಿಗೆ ಧ್ವಜ ಹಾರಿಸುವ ನೈತಿಕತೆ ಇಲ್ಲ!
Next Article ಸೌಹಾರ್ಧ ಭಾರತ ಕಟ್ಟಬೇಕಿದೆ!
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.