BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ
  • ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ
  • ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ
  • ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ
  • ನೀನಾಸಂ ಮೂಲದ ಸದುಭಿರುಚಿ ನಾಟಕಗಳು
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
  • ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನೆ-ಮನಗಳಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಸೈಕ್ಲೋಥಾನ್
ಇತರೆ ಸುದ್ಧಿಗಳು

ಮನೆ-ಮನಗಳಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಸೈಕ್ಲೋಥಾನ್

By News Desk BenkiyabaleUpdated:August 15, 2022 5:52 pm

ತುಮಕೂರು:


ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಸೈಕ್ಲೋಥಾನ್ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ, ಬಿ.ಜಿ.ಎಸ್. ವೃತ್ತ, ಶಿವಕುಮಾರಸ್ವಾಮಿ ವೃತ್ತ, ಭದ್ರಮ್ಮ ವೃತ್ತದ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೂ ಸಂಚರಿಸಿದ ಸೈಕ್ಲೋಥಾನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 75ನೇ ಆಜಾದಿ ಕಾ ಅಮೃತ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿನೂತನ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯ 4.5 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಉದ್ದೇಶವನ್ನು ಹೊಂದಲಾಗಿತ್ತು. ಆದರೆ 5 ಲಕ್ಷಕ್ಕೂ ಹೆಚ್ಚಿನ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರದ ಮೇಲೆ ಜನರು ಅಭಿಮಾನ ತೋರಿದ್ದಾರೆ. ಅಭಿಮಾನ ತೋರಿದ ದೇಶಪ್ರೇಮಿಗಳಿಗೆ ಅಭಿನಂದನೆ ಸಲ್ಲಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ವಿಶೇಷವಾಗಿ ಜಿಲ್ಲಾದ್ಯಂತ 15 ಹೊಸಕೆರೆಗಳ ಬಳಿ ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ಸ್ಥಳಿಯ ಗಣ್ಯರಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ ಮಾತನಾಡುತ್ತಾ, 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಮೃತ ಮಹೋತ್ಸವದ ಸವಿನೆನಪಿಗಾಗಿ ವಾಕಥಾನ್, ಸೈಕ್ಲೋಥಾನ್ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‍ವಾಡ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ನಿರ್ಮಿತಿ ಕೇಂದ್ರ ರಾಜಶೇಖರ್, ಡಿಡಿಪಿಐ ಸಿ. ನಂಜಯ್ಯ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ, ವಿವಿಧ ಶಾಲಾ ವಿದ್ಯಾರ್ಥಿಗಳು, ನಾಗರಿಕರು ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್‍ನಲ್ಲಿ ಸಂಚರಿಸುವ ಮೂಲಕ ಜನರಲ್ಲಿ ರಾಷ್ಟ್ರಪ್ರೇಮವನ್ನು ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ, ಪಾಲಿಕೆ ಆಯುಕ್ತೆ ರೇಣುಕಾ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ, ಡಿವೈಎಸ್‍ಪಿ ಡಿಎಆರ್ ಪರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ, ತುಮಕೂರು ಸೈಕ್ಲಿನ್ ಪ್ರತಿನಿಧಿ ಕ್ಲಬ್ ಚಿರಾಗ್ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಗದುದ್ದಕ್ಕೂ “ಬೋಲೋ ಭಾರತ್ ಮಾತಾಕೀ”, “ಜೈ ಜವಾನ್-ಜೈ ಕಿಸಾನ್”, “ವಂದೇ ಮಾತರಂ”, ಎಂದು ದೇಶಪ್ರೇಮದ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಸೈಕ್ಲೋಥಾನ್ ಜಾಥಾ ಕಾರ್ಯಕ್ರಮವು ನೋಡುಗರನ್ನು ಆಕರ್ಷಿಸಿತು.

(Visited 1 times, 1 visits today)
tumkur Tumkur dc yspatil
Previous Articleಎಲ್ಲರಿಗೂ ಸವಲತ್ತು ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ
Next Article ‘ಕ್ಯಾಂಪಸ್ ಕಹಾನಿ’ ಪುಸ್ತಕದಲ್ಲಿ ನವಿರಾದ ಅಭಿವ್ಯಕ್ತಿಯಿದೆ!: ಸಿಬಂತಿ ಪದ್ಮನಾಭ
News Desk Benkiyabale

Related Posts

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm news
ತಾಜಾ ಸುದ್ಧಿಗಳು
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm
news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
news

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
news

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm
Our Youtube Channel
Our Picks

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

By News Desk BenkiyabaleNovember 04, 2026 5:32 pm

ಕೊರಟಗೆರೆ: ಕರ್ನಾಟಕದಲ್ಲಿ ವಕೀಲರ ಮೇಲಿನ ಹಲ್ಲೆ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಹಾಗೂ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಹೊತ್ತಾಯಿಸಿ…

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.