BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
  • ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ
ಇತರೆ ಸುದ್ಧಿಗಳು

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ

By News Desk BenkiyabaleUpdated:August 20, 2022 5:57 pm

ತುಮಕೂರು


ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಜರಂಗದಳ ಹಾಗು ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಗೋ ಬ್ಯಾಕ್ ಘೋಷಣೆ ಕೂಗಿ ಅಪಮಾನಿಸಿರುವ ಕ್ರಮವನ್ನು ಖಂಡಿಸಿ ಇಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ನಗರದ ಟೌನ್‍ಹಾಲ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ, ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಕಾಂಗ್ರೆಸ್ ಮುಖಂಡರಾದ ಕೆಂಚಮಾರಯ್ಯ, ನರಸೀಯಪ್ಪ, ಪತ್ರಕರ್ತ ಎಸ್.ನಾಗಣ್ಣ ಮತ್ತಿತರ ಪ್ರಮುಖ ಮುಖಂಡರು ಭಾಗವಹಿಸಿ, ಸರಕಾರದ ನೀತಿಯನ್ನು ಖಂಡಿಸಿದರಲ್ಲದೆ, ಸರಕಾರ ಕೂಡಲೇ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವ ವ್ಯಕ್ತಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗೂ ಇಂತಹ ಘಟನೆ ಮರುಕಳುಹಿಸದಂತೆ ಸರಕಾರ ಕಟ್ಟು ನಿಟ್ಟಿನ ಭ್ರದತೆ ನೀಡಬೇಕೆಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ,ಆಗಸ್ಟ್ 03 ರಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ ಜನ್ಮ ಜಯಂತಿಯಲ್ಲಿ ಭಾಗವಹಿಸಿದ್ದ 10 ಲಕ್ಷ ಕ್ಕೂ ಹೆಚ್ಚು ಜನರನ್ನು ನೋಡಿರುವ ಬಿಜೆಪಿಗೆ ನಿದ್ದೆ ಬರುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಆಣತಿಯಂತೆ ನಮ್ಮ ನಾಯಕರನ್ನು ಟಾಗೇಟ್ ಮಾಡಿ, ಅವರಿಗೆ ಜೀವ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿದೆ. ಇದು ಖಂಡನೀಯ ಎಂದರು.
ವಿರೋಧ ಪಕ್ಷದ ನಾಯಕ ಎಂಬುದು ಒಂದು ಸಾಂಮಿಧಾನಿಕ ಹುದ್ದೆ. ಇದರ ಬಗ್ಗೆ ಅಗೌರವದಿಂದ ನಡೆದುಕೊಳ್ಳುವುದು ತರವಲ್ಲ. ಅವರಿಗೆ ಅಗತ್ಯವಿರುವ ರಕ್ಷಣೆಯನ್ನು ಸರಕಾರ ನೀಡಬೇಕಿದೆ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ ಸಾರ್ವಕರ್ ಅವರ ಪೋಟೋವನ್ನು ಮುನ್ನೆಲೆಗೆ ತಂದು ತನ್ನ ರಾಜಕೀಯ ಬೆಳೆ ಬೆಯಿಸಿಕೊಳ್ಳಲು ಮುಂದಾಗಿದೆ. ಸರಕಾರವೇ ನೇರವಾಗಿ ಈ ಕೃತ್ಯದಲ್ಲಿ ಭಾಗಿಯಾಗಿದೆ. ನಿಮಗೆ ಸಾರ್ವಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಅರಗಿಸಿಕೊಳ್ಳಲು ಆಗದಿದ್ದರೆ ಸಾರ್ವಜನಿಕ ಚರ್ಚೆಗೆ ಬನ್ನಿ ಎಂದು ಬಿಜೆಪಿಯವರು ಬಹಿರಂಗ ಸವಾಲು ಹಾಕಿದರು.
ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಮಳೆ ಹಾನಿಯ ಅಧ್ಯಯನ ಪ್ರವಾಸದ ಸಂದರ್ಭದಲ್ಲಿ ಬಜರಂಗದಳ,ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ಮೊಟ್ಟೆ ಎಸೆದು ಅಪಮಾನ ಮಾಡಿರುವುದು ಖಂಡನೀಯ.
ಇದು ಸರಕಾರ ಭದ್ರತಾ ಲೋಪ ಎಸಗಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳು,ಗೃಹ ಸಚಿವರು ಸೇರಿದಂತೆ ಮಂತ್ರಿಗಳು,ಬಿಜೆಪಿ ಪಕ್ಷದ ಮುಖಂಡರು ಒಡಾಡುವಾಗ ಮೊಟ್ಟೆ ಎಸೆಯಲು ಬರುತ್ತದೆ. ಆದರೆ ಆ ರೀತಿಯ ಕೆಟ್ಟ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಕೈ ಹಾಕುವುದಿಲ್ಲ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನವಾಗಿದೆ. ಮೊಟ್ಟೆಯ ಬದಲು, ಕಲ್ಲು, ಬಾಂಬ್ ಎಸೆದಿದ್ದರೆ ಏನು ಗತಿ, ಹಾಗಾಗಿ ಕೂಡಲೇ ಮಾಜಿ ಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ ಅವರು,2008ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಐದು ವರ್ಷಗಳ ಅಧಿಕಾರವಧಿ ಯಲ್ಲಿ ಇಲ್ಲದ ಸಾರ್ವಕರ್,ಈಗ ಉದ್ಬವಿಸಲು ಕಾರಣ ಎನು? ಸೋಲಿನ ಭೀತಿಯಲ್ಲಿರುವ ಬಿಜೆಪಿ,ಹೇಗಾದರೂ ಮಾಡಿ, ಸ್ವಾತಂತ್ರ ಹೋರಾಟಗಾರರ ಹೆಸರಿನಲ್ಲಿ ಮತಗಳಿಸುವ ತಂತ್ರಗಾರಿಕೆಯ ಭಾಗವಾಗಿ ಸಾರ್ವಕರ್ ಫೋಟೋ ಬಳಕೆ ಮಾಡುತ್ತಿದ್ದಾರೆ. ಅಲ್ಲದೆ ರಾಷ್ಟ್ರಪಿತ ಮಹಾತ್ಮಗಾಂಧಿಯನ್ನು ಕೊಂದ ನಾಥೂರಾಮ್ ಗೂಡ್ಸೆ ಅವರ ಫೋಟೋ ಹಾಕಿದವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ, ರಾಜ್ಯದಲ್ಲಿ ಕೋಮುದ್ವೇಷ ಹರಡಲು ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ ಎಂದು ಆರ್.ರಾಜೇಂದ್ರ ಆರೊಪಿಸಿದರು.
ಪ್ರತಿಟನೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಕೆಂಪರಾಜು, ಚಂದ್ರಶೇಖರಗೌಡ, ಗುರುಪ್ರಸಾದ್, ಹೆಬ್ಬೂರು ಶ್ರೀನಿವಾಸ ಮೂರ್ತಿ, ಮೈಲಾರಪ್ಪ, ದಸಂಸದ ಪಿ.ಎನ್.ರಾಮಯ್ಯ, ಜಯಮೂರ್ತಿ, ರಾಜೇಶ್ ದೊಡ್ಡಮನೆ, ಎಂ.ವಿ.ರಾಘವೇಂದ್ರ ಸ್ವಾಮಿ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಮಹಾತ್ಮ ಗಾಂಧಿ ಕ್ರೀಡಾಂಗಣ ಬಳಕೆಯ ಶುಲ್ಕಕ್ಕೆ ವಿರೋಧ
Next Article ಹೇಮಾವತಿ ನಾಲೆ ಪರಿಶೀಲಿಸಿದ ಸಚಿವ ಗೋವಿಂದ ಕಾರಜೋಳ
News Desk Benkiyabale

Related Posts

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm news
ತಾಜಾ ಸುದ್ಧಿಗಳು
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm
news

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
news

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
Our Youtube Channel
Our Picks

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

By News Desk BenkiyabaleSeptember 29, 2026 5:00 pm

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ…

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.