BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆರೆಗಳ ಸರಹದ್ದನ್ನು ಗುರುತಿಸಿ ಸಂರಕ್ಷಿಸಿ ಕೆರೆ ಒತ್ತುವರಿ ತೆರವು : 768 ಕೆರೆಗಳ ಸರ್ವೇಕಾರ್ಯ ಪೂರ್ಣ : ಡಿಸಿ
ಇತರೆ ಸುದ್ಧಿಗಳು

ಕೆರೆಗಳ ಸರಹದ್ದನ್ನು ಗುರುತಿಸಿ ಸಂರಕ್ಷಿಸಿ ಕೆರೆ ಒತ್ತುವರಿ ತೆರವು : 768 ಕೆರೆಗಳ ಸರ್ವೇಕಾರ್ಯ ಪೂರ್ಣ : ಡಿಸಿ

By News Desk BenkiyabaleUpdated:September 06, 2022 5:13 pm

ತುಮಕೂರು:


ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಎಲ್ಲ ಕೆರೆ-ಕಟ್ಟೆÉಗಳು ತುಂಬಿದ್ದು, ಇದೇ ಸಂದರ್ಭವನ್ನು ಬಳಸಿಕೊಂಡು ಸಂಬಂಧಿಸಿದ ಇಲಾಖೆಗಳು, ತಮ್ಮ ವ್ಯಾಪ್ತಿಯ ಕೆರೆಗಳ ಸರಹದ್ದನ್ನು ಗುರುತಿಸಿ, ಒತ್ತುವರಿ ಇದ್ದಲ್ಲಿ ತೆರವುಗೊಳಿಸಿ ಕೆರೆಗಳನ್ನು ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಮತ್ತು ಈ ಸಂಬಂಧ ಜಿಲ್ಲಾ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು
ಅಧಿಕಾರಿಗಳಿಗೆ ಸೂಚಿಸಿದರು.
ಜಿಲಾಧಿಕಾರಿಗಳ ಕೆಸ್ವಾನ್ ಸಭಾಂಗಣದಲ್ಲಿಂದು ನಡೆದ ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದ ಕಾರ್ಯಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ, ಜಿಲ್ಲೆಯ ಎಲ್ಲ ಜಲಮೂಲಗಳ ನೀರಿನ ಗುಣಮಟ್ಟ ವಿಶ್ಲೇಷಣೆಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಕೆರೆಗಳ ಒತ್ತುವರಿ ಹಾಗೂ ಮಾಲಿನ್ಯ ತಡೆಗಟ್ಟಿ ಕೆರೆಗಳನ್ನು ಪುನಶ್ಚೇತನಗೊಳಿಸಿರುವ ಸಂಬಂಧ ಕೆರೆಗಳ ಉಸ್ತುವಾರಿ ಇಲಾಖೆಗಳು ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ಕೆರೆ ಒತ್ತುವರಿ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಕೆರೆಗಳ ಸರ್ವೆ ಕಾರ್ಯವು ಈಗಾಗಲೇ ಪ್ರಗತಿಯಲ್ಲಿದ್ದು, ಆಯಾ ಇಲಾಖೆಗಳು ಸಹ ಕೆರೆಗಳ ಗಡಿ ಗುರುತಿಸಿ ಕೆರೆಗಳನ್ನು ಸಂರಕ್ಷಿಸಿಕೊಳ್ಳುವಂತೆ ಸೂಚಿಸಿದರು.
ಜಿಲೆಯ ಒಟ್ಟು 2061 ಕೆರೆಗಳ ಪೈಕಿ ಈವರೆಗೆ 768 ಕೆರೆಗಳ ಸರ್ವೇಕಾರ್ಯ ನಡೆಸಲಾಗಿದ್ದು, 1293 ಕೆರೆಗಳ ಅಳತೆ ಕಾರ್ಯ ಬಾಕಿ ಇರುತ್ತದೆ. ಈಗಾಗಲೇ ಸರ್ವೇಕಾರ್ಯ ನಡೆಸಿ ಒತ್ತುವರಿ ಎಂದು ಗುರುತಿಸಲಾಗಿರುವ ಕೆರೆಗಳ ನಕ್ಷೆಗಳನ್ನು ಸಿದ್ಧಪಡಿಸಿ ಕಂದಾಯ ಇಲಾಖೆ, ಉಸ್ತುವಾರಿ ಇಲಾಖೆ ಮತ್ತು ಅವಶ್ಯಕತೆ ಇದ್ದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆಯೊಂದಿಗೆ ಒತ್ತುವರಿ ತೆರವುಗೊಳಿಸಿ ಉಸ್ತುವಾರಿ ಇಲಾಖೆಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ನಗರದ ಮರಳೂರು ಅಮಾನಿಕೆರೆಗೆ ತ್ಯಾಜ್ಯ ನೀರನ್ನು ಹರಿಬಿಡುತ್ತಿರುವ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ ಪಾಲಿಕೆ ಆಯುಕ್ತರು, ತ್ಯಾಜ್ಯ ನೀರನ್ನು ತಡೆಯಲು ಪೈಪ್‍ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಛೇಂಬರ್ ನಿರ್ಮಾಣ ಕಾಮಗಾರಿಯು ಬಾಕಿ ಇರುತ್ತದೆ. ಈ ಕಾಮಗಾರಿ ಪೂರ್ಣಗೊಂಡ ನಂತರ ತ್ಯಾಜ್ಯ ನೀರು ಕೆರೆಗೆ ಹರಿಯುವುದನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು.
ತುಮಕೂರು ನಗರದ ಅಮಾನಿಕೆರೆ ಬಫರ್ eóÉೂೀನ್‍ನಲ್ಲಿ ಅನಧೀಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂಧ ಮಾತನಾಡಿದ ಪಾಲಿಕೆ ಆಯುಕ್ತರು, ಬಫರ್ eóÉೂೀನ್‍ನಲ್ಲಿ ನಿರ್ಮಾಣ ಮಾಡಿರುವ ಎರಡು ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಲು ಪೂರಕ ಕ್ರಮ ಕೈಗೊಳ್ಳಲಾಗಿದೆ. ಆದರೆ ಎರಡೂ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ಬಾಕಿ ಇರುತ್ತದೆ ಎಂದು ವಿವರಿಸಿದರು.
ತುಮಕೂರು ನಗರದ ಡಿಸಿ ಬಂಗಲೆ ಮತ್ತು ಕೆಎಸ್‍ಆರ್‍ಟಿಸಿ ಬಸ್ ಡಿಪೋಗೆ ಹೊಂದಿಕೊಂಡಿರುವ ಸರ್ವೇ ನಂ. 8ರಲ್ಲಿನ ಸರ್ಕಾರಿ ಕೆರೆಯು ನಿರ್ವಹಣೆ ಕೊರತೆಯಿಂದಾಗಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿರುವುದರಿಂದ ಈ ಕೆರೆಯನ್ನು ಪುನಶ್ಚೇತನಗೊಳಿಸಲು ಸೂಚಿಸಲಾಗಿದ್ದು, ಪುನಶ್ಚೇತನ ಕಾಮಗಾರಿ ಕೈಗೊಳ್ಳುವ ಮೊದಲು ಕೆರೆಯ ಗಡಿಗಳನ್ನು ಗುರುತಿಸಿ ಕೆರೆಯ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಭೂ ದಾಖಲೆಗಳ ಉಪನಿರ್ದೇಶಕರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಾಧಿಕಾರದ ಸದಸ್ಯರಾದ ನೂರುನ್ನೀಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಾಣಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸಭೆಯಲ್ಲಿ ಉಪಸ್ಥಿತರಿದ್ದರು.

(Visited 4 times, 1 visits today)
tumkur Tumkur dc yspatil
Previous Articleಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ
Next Article 2 ಕೋಟಿ ಕಾಮಗಾರಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ.
News Desk Benkiyabale

Related Posts

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm news
ತಾಜಾ ಸುದ್ಧಿಗಳು
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm
news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
Our Youtube Channel
Our Picks

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

By News Desk BenkiyabaleAugust 06, 2026 6:24 pm

ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು…

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.