BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೆ.12 : ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ : ಕೋಡಿಹಳ್ಳಿ ಚಂದ್ರಶೇಖರ್
ಇತರೆ ಸುದ್ಧಿಗಳು

ಸೆ.12 : ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ : ಕೋಡಿಹಳ್ಳಿ ಚಂದ್ರಶೇಖರ್

By News Desk BenkiyabaleUpdated:September 06, 2022 5:57 pm

ತುಮಕೂರು:


ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳ ವಾಪಸ್, ವಿದ್ಯುತ್ ಖಾಸಗಿ ಬಿಲ್ ಜಾರಿ ಮಾಡದಂತೆ ಒತ್ತಾಯಿಸಿ ಸೆಪ್ಟಂಬರ್ 12 ರಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕೇಂದ್ರ ಸರಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ರೈತರ ವಿರೋಧದಿಂದ ವಾಪಸ್ ಪಡೆದರೆ, ರಾಜ್ಯ ಸರಕಾರ ಮಾತ್ರ,ಇಂದು,ನಾಳೆ ಎಂದು ಸಬೂಬು ಹೇಳುವ ಮೂಲಕ ದಿನಗಳನ್ನು ದೂಡುತ್ತಿದೆ. ಹಾಗಾಗಿ ಸೆಪ್ಟಂಬರ್ 12 ರಿಂದ ಆರಂಭವಾಗುವ ಅಧಿವೇಶನದಲ್ಲಿಯೇ ರೈತರಿಗೆ ಮಾರಕವಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ,ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಬೇಕೆಂದು ಆಗ್ರಹಿಸಿ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.
ಡಬಲ್ ಇಂಜಿನ್ ಸರಕಾರದಿಂದ ರಾಜ್ಯಕ್ಕೆ ಅನುಕೂಲ ಇಲ್ಲದಂತಾಗಿದೆ.ಆದರೆ ಬಿಜೆಪಿ ರಾಜಕೀಯವಾಗಿ ಹೆಚ್ಚು ಅನುಕೂಲ ಪಡೆದುಕೊಳ್ಳುತ್ತಿದೆ.ಕರ್ನಾಟಕವನ್ನು ತಮ್ಮ ಕಾರ್ಯಕ್ರಮಗಳ ಪ್ರಯೋಗಶಾಲೆಯಾಗಿ ಮಾಡಿಕೊಂಡು,ರಾಜ್ಯದ ರೈತರು, ಕಾರ್ಮಿಕರು,ಬಡವರು,ಕೃಷಿಕೂಲಿಕಾರರು ಪರದಾಡುವಂತಹ ಸ್ಥಿತಿ ನಿರ್ಮಾಣ ಮಾಡಿದೆ.ಸಾರ್ವಜನಿಕ ಉದ್ಯಿಮೆಗಳನ್ನು ಖಾಸಗೀ ಕರಣ ಮಾಡಿ,ಯುವಜನರು ಉದ್ಯೋಗಕ್ಕಾಗಿ ಅಲೆದಾಡುವಂತಹ ಪರಿಸ್ಥಿತಿಯನ್ನು ಡಬಲ್ ಇಂಜಿನ್ ಸರಕಾರ ಸೃಷ್ಟಿಸಿದೆ. ಇದರ ವಿರುದ್ದ ರೈತರ ಹೋರಾಟ ನಿರಂತರವಾಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ನುಡಿದರು.
ರಾಜ್ಯದ ಸಣ್ಣ,ಪುಟ್ಟ ಹಿಡುವಳಿದಾರರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು,ಜೀವನ ಸಾಗಿಸುತ್ತಿದ್ದ ರೈತರನ್ನು ಹೈನುಗಾರಿಕೆಯಿಂದ ಹೊರಗಿಡುವ ಹುನ್ನಾರವನ್ನು ಸರಕಾರ ಮಾಡಲು ಹೊರಟಿದೆ. ಸಬ್ಸಿಡಿ ಹೆಸರಿನಲ್ಲಿ 2000-3000 ಹಸುಗಳ ಸಾಕಲು ದೊಡ್ಡ ದೊಡ್ಡ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟು, 2-3 ಹಸುಗಳನ್ನು ಕಟ್ಟಿಕೊಂಡು ಹೈನುಗಾರಿಕೆಯಲ್ಲಿ ಜೀವನ ನಡಸುತ್ತಿದ್ದ ಬಡವರ ಹೊಟ್ಟೆಯ ಮೇಲೆ ಹೊಡೆಯಲು ಮುಂದಾಗಿದೆ ಎಂದು ಆರೋಪಿಸಿದ ಕೋಡಿಹಳ್ಳಿ ಚಂದ್ರಶೇಖರ್,ಭೂ ಸುದಾರಣಾ ಕಾಯ್ದೆ ಮೂಲಕ ಬಡವರ ಭೂಮಿಯನ್ನು ಉಳ್ಳವರಿಗೆ ನೀಡಲು ಅನ್‍ಲೈನ್ ಮೂಲಕ ನೊಂದಣಿಗೆ ಅವಕಾಶ ನೀಡಿದ್ದಾರೆ.ಇದರಿಂದ ಸಣ್ಣ ಹಿಡುವಳಿದಾರರು ಕೂಲಿ ಕಾರ್ಮಿಕರಾಗಿ ಬದಲಾಗುವ ದೊಡ್ಡ ಅಪಾಯ ಎದುರಾಗಿದೆ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಉದ್ದಿಮೆಗಳು, ರಸ್ತೆ, ರೈಲ್ವೆ,ವಿಮಾನ ಇನ್ನಿತರ ಸೇವೆಗಳನ್ನು ಖಾಸಗೀಕರಣ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ.ಬಲಾಡ್ಯರಿಗೆ ಶಕ್ತಿ ತುಂಬಿ, ಬಡವರನ್ನು ಮತ್ತಷ್ಟು ಮೃತ್ಯಕೂಪಕ್ಕ ತಳ್ಳುವ ಪ್ರಕ್ರಿಯೆಯಲ್ಲಿದೆ.ಅತಿವೃಷ್ಟಿಯಿಂದ ಇಡೀ ರಾಜ್ಯವೇ ಮಳೆ ನೀರಿನಿಂದ ಅನಾಹುತಕ್ಕೆ ಒಳಗಾಗಿದ್ದರೂ ಸಮರ್ಪಕ ಪರಿಹಾರ ನೀಡದೆ,
ಜನರ ಹಣದಲ್ಲಿ ಜನೋತ್ಸವ ಮಾಡಲು ಹೊರಟಿರುವುದು ನಾಚಿಕೇಗೆಡಿನ ಸಂಗತಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದರು.
ಸೆಪ್ಟಂಬರ್ 12 ರ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ರಾಜ್ಯ ಮೂಲೆ ಮೂಲೆಗಳಿಂದ 15-20 ಸಾವಿರ ಜನರು ಭಾಗವಹಿಸಲಿದ್ದಾರೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರಗೆ ಮೆರವಣಿಗೆ ನಡೆಯಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್,ಭಕ್ತರಹಳ್ಳಿ ಭೈರೇಗೌಡ,ಜಿಲ್ಲಾಧ್ಯಕ್ಷ ಆನಂದಪಟೇಲ್, ಧನಂಜಯ ಆರಾಧ್ಯ,ವಿವಿಧ ತಾಲೂಕುಗಳ ಅಧ್ಯಕ್ಷರಾದ ಬಸ್ತಿಹಳ್ಳಿ ರಾಜಣ್ಣ, ಅನಿಲ್,ಕೊರಟಗೆರೆ ಸಿದ್ದರಾಜು, ನಾಗೇಂದ್ರ, ನಾಗಣ್ಣ ಮತ್ತಿತರರು ಪಾಲ್ಗೊಂಡಿದ್ದರು.

(Visited 2 times, 1 visits today)
tumkur
Previous Articleವೈವಾಹಿಕ ಜೀವನವು ಹೊಂದಾಣಿಕೆಯಿಂದ ಕೂಡಿರಬೇಕು : ಮಮತ
Next Article ಮಳೆಗೆ ನಲುಗಿದ ತುಮಕೂರು : ಬೆಳೆ ನಾಶ
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.