BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಿಗೆ ತೆಂಗಿನ ಚಿಪ್ಪಿನಲ್ಲಿ ಊಟಬಡಿಸಿದ ಭಟ್ಟರು
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ತೆಂಗಿನ ಚಿಪ್ಪಿನಲ್ಲಿ ಊಟಬಡಿಸಿದ ಭಟ್ಟರು

By News Desk BenkiyabaleUpdated:October 22, 2022 5:33 pm

ತುಮಕೂರು


ತುಮಕೂರು ವಿಶ್ವವಿದ್ಯಾಲಯದಿಂದ ನಡೆಸುತ್ತಿರುವ ಸ್ನಾತಕೋತ್ತರ ಪದವಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ತೆಂಗಿನ ಚಿಪ್ಪಿನ ಸೌಟ್ ನಲ್ಲಿ ಆಹಾರ ಬಡಿಸಿರುವುದನ್ನು ಖಂಡಿಸಿ ಎಸ್‍ಎಫ್‍ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕುಲಪತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕುಲಸಚಿವ ಶಿವಚಿತ್ತಪ್ಪ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಈ ಅವಾಂತರಕ್ಕೆ ಕಾರಣವಾಗಿರುವ ಅಡುಗೆ ಸಿಬ್ಬಂದಿಯ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಗಮನಹರಿಸಲಾಗುವುದು. ಹಾಸ್ಟೆಲ್ ಸಿಬ್ಬಂದಿ ಮತ್ತು ಮೇಲ್ವಿಚಾರಕರನ್ನು ಬದಲಾವಣೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕಳೆದ ಮೂರು ದಿನಗಳ ಹಿಂದೆ ಸಾಂಬಾರ್ ಬಡಿಸುವ ಸ್ಟೀಲ್ ಸೌಟ್ ನಾಪತ್ತೆಯಾಗಿದೆ ಎಂದು ಭಟ್ಟರು ತೆಂಗಿನ ಚಿಪ್ಪಿನಲ್ಲೇ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಸಾಂಬರು ಬಡಿಸಿದ್ದಾರೆ. ಮೂರು ದಿನಗಳಿಂದಲೂ ತೆಂಗಿನ ಚಿಪ್ಪಿನಲ್ಲೇ ಆಹಾರ ನೀಡುವುದನ್ನು ಖಂಡಿಸಿ ಎಸ್‍ಎಫ್‍ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ನಿಲಯ ಪಾಲಕರು ಪ್ರತಿದಿನ ಹಾಸ್ಟೆಲ್‍ಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವುದು ಹಾಸ್ಟೆಲ್ ವಾರ್ಡ್‍ನ್ ಗಳ ಕರ್ತವ್ಯವಾಗಿದೆ.
ಆದರೆ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ತೆಂಗಿನ ಚಿಪ್ಪು ಬಳಸಿ ಆಹಾರ ನೀಡಿರುವುದು ಖಂಡನೀಯ. ವಿದ್ಯಾರ್ಥಿಗಳನ್ನು ಪ್ರಾಣಿಗಳಿಗಿಂತ ಅತ್ಯಂತ ಹೀನಾಯವಾಗಿ ನಡೆಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
21ನೇ ಶತಮಾನದಲ್ಲಿಯೂ ಸಹ ಇಂತಹ ಪರಿಸ್ಥಿತಿ ವಿಶ್ವವಿದ್ಯಾಲಯಕ್ಕೆ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಅಡುಗೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡದೆ ವಿದ್ಯಾರ್ಥಿಗಳಿಗೆ ವಂಚಿಸಲಾಗುತ್ತಿದೆ. ಮತ್ತು ಗುಣಮಟ್ಟ ಆಹಾರ ಕೇಳಿದ ವಿದ್ಯಾರ್ಥಿಗಳ ಮೇಲೆ ನಿಲಯ ಪಾಲಕರು ಮತ್ತು ಕೆಲ ಸಿಬ್ಬಂದಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಆಂತರಿಕ ಅಂಕಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಪ್ರಸಂಗಗಳು ನಡೆಯುತ್ತಿವೆ. ಇಂತಹ ಬೆದರಿಕೆ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಎಸ್‍ಎಫ್‍ಐ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದನ್ನು ಸರಿಪಡಿಸಲು ಮುಂದಾಗದಿದ್ದರೆ ವಿವಿ ಮುತ್ತಿಗೆ ಕಾರ್ಯಕ್ರಮವನ್ನು ಎಸ್‍ಎಫ್‍ಐ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಎಸ್‍ಎಫ್‍ಐ ಸದಸ್ಯ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿಯ ತರಗತಿಗಳು ನಡೆಯುವವರೆಗೂ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯವನ್ನು ಮುಂದುವರಿಸಬೇಕು. ಯಾವುದೇ ವಿದ್ಯಾರ್ಥಿಗಳಿಗೂ
ತೊಂದರೆಯಾಗದ ರೀತಿಯಲ್ಲಿ ನಿಲಯ ಪಾಲಕರು ಗಮನಹರಿಸಬೇಕು. ನಮ್ಮಿಂದ ಯಾವುದೇ ತಪ್ಪಾದರೂ ಸಹ ಅವರು ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ವಿದ್ಯಾರ್ಥಿಗಳಾದ ನರಸಿಂಹಮೂರ್ತಿ ದೊಡ್ಮನೆ, ಬಾಬು.ಡಿ ಮತ್ತು ವೆಂಕಪ್ಪ ಮಾತನಾಡಿ, ಹಾಸ್ಟೆಲ್ ವಿದ್ಯಾರ್ಥಿಗಳನ್ನು ಬಹಳ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದ್ದು ನಮಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳು ಇರುವುದಿಲ್ಲ. ಹಲವಾರು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನ ಆಗಿಲ್ಲ. ಹಾಸ್ಟೆಲ್‍ನಲ್ಲಿ ದಾಖಲಾಗದೇ ಇರುವಂತಹ ವ್ಯಕ್ತಿಗಳ ಹಾವಳಿಯು ಸಹ ಹೆಚ್ಚಳವಾಗಿದೆ. ಇದರಿಂದ ಹಲವಾರು ಸಂದರ್ಭದಲ್ಲಿ ಗಲಾಟೆಗಳು ಸಹ ನಡೆಯುತ್ತಿವೆ. ಆದ್ದರಿಂದ ವಿಶ್ವವಿದ್ಯಾಲಯವು ನಮಗೆ ರಕ್ಷಣೆ ನೀಡಬೇಕು ಎಂದರು.
ಪ್ರತಿಭಟನೆಯಲ್ಲಿ ಎಸ್‍ಎಫ್‍ಐ ನಗರಾಧ್ಯಕ್ಷ ಶಶಿ ವರ್ಧನ್, ಎಂ.ಆರ್. ತ್ಯಾಗರಾಜು, ಶಿವಲಿಂಗ, ಶಿವರಾಜು, ನರಸಿಂಹಮೂರ್ತಿ ಇತರರು ಭಾಗವಹಿಸಿದ್ದರು.

(Visited 3 times, 1 visits today)
Accident BJP Gubbi tumkur
Previous Articleನಿವೇಶನಗಳು ಹಂಚಿಕೆಯಾಗಿದ್ದರೂ ಗೊಂದಲ ಸೃಷ್ಠಿ
Next Article ಆಡಳಿತ ಸುಸ್ಥಿತಿಯಲ್ಲಿರಲು ಮಾಹಿತಿ ಹಕ್ಕು ಪ್ರಮುಖ ಅಸ್ತ್ರ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.