ತುಮಕೂರು

ಸಮಾಜದಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಎಂ. ಶಾಂತಮ್ಮ ಅಭಿಪ್ರಾಯಪಟ್ಟರು.
ಜಿಲ್ಲಾ ಕಾರಾಗೃಹ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಇತ್ತೀಚೆಗೆ ವಿಚಾರಣಾಧೀನ ಬಂದಿಗಳಿಗಾಗಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿವಸ ಹಾಗೂ ಕಾನೂನು ಅರಿವು ಅಭಿಯಾನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಾರಾಗೃಹದಲ್ಲಿರುವ ಬಂದಿಗಳು ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಕ್ತವಾಗಿ ಚರ್ಚಿಸಿ, ಉಚಿತವಾಗಿ ಕಾನೂನು ನೆರವು ಪಡೆಯಬಹುದೆಂದು ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲ ಬಿ.ದಾಸಪ್ಪ ಮಾತನಾಡಿ, ಸರ್ಕಾರದ ಸೌಲಭ್ಯ, ನಿಯಮಗಳ ಮೂಲಕ ಕಾನೂನು ನೆರವು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲ ಡಿ.ರಾಮಕೃಷ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಿ.ವಿ ಕೋಪರ್ಡೆ, ಜೈಲರ್ ಬಿ.ವೈ. ಬಿಜ್ಜೂರ, ಸಹಾಯಕ ಜೈಲರ್‍ಗಳಾದ ಎಂ.ಎಸ್. ರಾಮಚಂದ್ರ, ಶಿವರಾಜು ಟಿ. ಹಾಗೂ ಸಿದ್ದರಾಜಯ್ಯ, ಸಹ ಶಿಕ್ಷಕರು ಉಪಸ್ಥಿತರಿದ್ದರು.
(Visited 1 times, 1 visits today)





