BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚುನಾವಣೆಯಲ್ಲಿ ಧೋರಣೆ – ಪ್ರತಿಭಟನೆ
ಇತರೆ ಸುದ್ಧಿಗಳು

ಚುನಾವಣೆಯಲ್ಲಿ ಧೋರಣೆ – ಪ್ರತಿಭಟನೆ

By News Desk BenkiyabaleUpdated:November 07, 2022 4:36 pm

ತುಮಕೂರು


ತುಮಕೂರು ಜಿಲ್ಲಾ ವಕ್ಕಲಿಗರ ಸಂಘದ ಆಡಳಿತಾಧಿಕಾರಿ ಚುನಾವಣಾ ವಿಚಾರದಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದು,ಕೂಡಲೇ ಅವರನ್ನು ವಜಾ ಮಾಡಬೇಕು ಹಾಗೂ ಷೇರು ಹಣ ಕಟ್ಟಿರುವ ಎಲ್ಲರಿಗೂ ಸದಸ್ಯತ್ವ ನೀಡಿ, ಮತದಾನಕ್ಕೆ ಅವಕಾಶ ಕಲ್ಪಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಇಂದು ವಕ್ಕಲಿಗ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ತುಮಕೂರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಕ್ಕಲಿಗ ಮುಖಂಡರ ಬ್ಯಾಟರಂಗೇಗೌಡ ಮಾತನಾಡಿ,ತುಮಕೂರು ಜಿಲ್ಲಾ ವಕ್ಕಲಿಗರ ಸಂಘದ ಆಡಳಿತಾವಧಿ 2022ರ ಮಾರ್ಚ 31ಕ್ಕೆ ಪೂರ್ಣಗೊಂಡಿದ್ದು,ಸಹಕಾರ ಇಲಾಖೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ.ಆದರೆ ನಿಗಧಿತ ಅವಧಿಯೊಳಗೆ ಚುನಾವಣೆ ನಡೆಸದ ಕಾರಣ ಕರ್ನಾಟಕ ಹೈಕೋರ್ಟು ಸದರಿ ಆಡಳಿತಾಧಿಕಾರಿಗಳಿಗೆ ನಿಗಧಿತ ಅವಧಿಯೊಳಗೆ ಚುನಾವಣೆ ನಡೆಸುವಂತೆ ಆದೇಶ ಮಾಡಿದೆ ಎಂದರು.
ಹೈಕೋರ್ಟಿನ ಆದೇಶವನ್ನು ನೆಪವಾಗಿಟ್ಟುಕೊಂಡು 2008-09ನೇ ಸಾಲಿನಿಂದಲೂ ಸುಮಾರು 22 ಸಾವಿರ ಜನರು ಷೇರು ಹಣ ಹೂಡಿಕೆ ಮಾಡಿ, ಸದಸ್ಯತ್ವಕ್ಕಾಗಿ ಕಾಯುತಿದ್ದರು, ಅವರಿಗೆ ಸದಸ್ಯತ್ವ ನೀಡದೆ.ಕೆಲವು ವ್ಯಕ್ತಿಗಳ ಕಡೆಯಿಂದ ಶಿಫಾರಸ್ಸಾಗಿ ಇತ್ತೀಚಗೆ ಷೇರು ಶುಲ್ಕ ತುಂಬಿರುವ 500 ಜನರಿಗೆ ಮಾತ್ರ ಸದಸ್ಯತ್ವ ನೀಡಿ, ಅವರನ್ನೇ ಮತದಾರರೆಂದು ಘೋಷಿಸಿ,ಚುನಾವಣೆ ನಡೆಸಲು ಮುಂದಾಗಿದ್ದಾರೆ. ಆಡಳಿತಾಧಿಕಾರಿ ನಡೆ ಪಕ್ಷಪಾತದಿಂದ ಕೂಡಿದೆ. ಈ ಬಗ್ಗೆ ಸಹಕಾರ ಇಲಾಖೆಯ ಪ್ರಭಂಧಕರಿಗೆ ಮನವಿ ಮಾಡಿದ್ದರೂ ಅವರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.ಬದಲಾಗಿ ನಿಯಮ ಮೀರಿ ಚುನಾವಣೆ ನಡೆಸಲು ಒಕ್ಕಲಿಗರ ಸಂಘದ ಆಡಳಿತಾಧಿಕಾರಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ಕೂಡಲೇ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸಿ, ಈಗಾಗಲೇ ಷೇರು ಬಂಡವಾಳ ಹೂಡಿ, ಸದಸ್ಯತ್ವಕ್ಕೆ ಕಾಯುತ್ತಿರುವ 22 ಸಾವಿರ ಜನರಿಗೂ ಸದಸ್ಯತ್ವ ನೀಡಿ, ಮತದಾರರಾಗಿ ಪರಿಗಣಿಸಿ ಚುನಾವಣೆ ನಡೆಸಬೇಕೆಂದು ಬ್ಯಾಟರಂಗೇಗೌಡ ಆಗ್ರಹಿಸಿದರು.
ಬೆಳ್ಳಿ ಬ್ಲಡ್ ಬ್ಯಾಂಕ್‍ನ ಬೆಳ್ಳಿ ಲೋಕೇಶ್ ಮಾತನಾಡಿ,ವಕ್ಕಲಿಗರ ಸಂಘದ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ವ್ಯಕ್ತಿ ಕೆಲವರ ಕೈಗೊಂಬೆಯಂತೆ ವರ್ತಿಸುತ್ತಿದ್ದು,ಮತದಾರರ ಕರಡು ಪಟ್ಟಿಗೆ ಸುಮಾರು 125ಕ್ಕೂ ಹೆಚ್ಚು ಅಕ್ಷೇಪಣೆಗಳನ್ನು ಸಲ್ಲಿಸಿದ್ದರೂ ಒಂದಕ್ಕೂ ಉತ್ತರ ನೀಡಿಲ್ಲ.ನ್ಯಾಯಾಲಯದ ನಿಗಧಿ ಪಡಿಸಿದ್ದ ಅವಧಿ ಮುಗಿಯುತ್ತಾ ಬಂದಿದ್ದರೂ, ನ್ಯಾಯಲಯಕ್ಕೆ ಹೆಚ್ಚಿನ ಕಾಲಾವಕಾಶಕ್ಕೆ ಅರ್ಜಿ ಸಲ್ಲಿಸದೆ ಮೀನಾಮೇಷ ಎಣಿಸುತ್ತಿದ್ದಾರೆ. ಇದರಿಂದ ಕಳೆದ 10-12 ವರ್ಷಗಳಿಂದ ಸದಸ್ಯತ್ವಕ್ಕಾಗಿ ಷೇರು ಹಾಕಿ ಕಾಯುತ್ತಿರುವ ಆರ್ಹ ಒಕ್ಕಲಿಗ ಜನಾಂಗದ ವ್ಯಕ್ತಿಗಳಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಆಡಳಿತಾಧಿಕಾರಿಯನ್ನು ವಜಾ ಮಾಡಿ, ಬೇರೊಬ್ಬರನ್ನು ನೇಮಕ ಮಾಡಿ, ಚುನಾವಣಾ ಪ್ರಕ್ರಿಯೆಯನ್ನು ಮೊದಲಿನಿಂದ ಪ್ರಾರಂಭಿಸಬೇಕು. ಆರ್ಹರಿಗೆ ಸದಸ್ಯತ್ವ ನೀಡಿ, ಅವರಿಗೂ ಮತ ಹಾಕುವ ಹಕ್ಕು ನೀಡಿದ ನಂತರವೇ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕೆಂದು ಆಗ್ರಹಿಸಿದರು.
ಡಿ.ಆರ್. ಮತ್ತು ಒಕ್ಕಲಿಗ ಮುಖಂಡರ ನಡುವೆ ವಾಗ್ವಾದ:ವಕ್ಕಲಿಗ ಮುಖಂಡರ ಒತ್ತಾಯದಂತೆ ಮನವಿ ಸ್ವೀಕರಿಸಲು ತುಮಕೂರು ಉಪವಿಭಾಗಾಧಿಕಾರಿ ಅಜಯ್ ಅವರೊಂದಿಗೆ ಆಗಮಿಸಿದ, ಸಹಕಾರ ಇಲಾಖೆಯ ಡಿ.ಆರ್. ಎನ್.ವೆಂಕಟೇಶ್ ಅವರೊಂದಿಗೆ ವಾಗ್ವಾದಕ್ಕೆ ಇಳಿದ ವಕ್ಕಲಿಗ ಮುಖಂಡರು, ಆಡಳಿತಾಧಿಕಾರಿಗಳೊಂದಿಗೆ ನೀವು ಸಹ ಸೇರಿ ಆರ್ಹರಿಗೆ ಸದಸ್ಯತ್ವ ನೀಡದೆ ಅನ್ಯಾಯ ಮಾಡುತ್ತಿದ್ದೀರಿ,ಮೊದಲು ಆಡಳಿತಾಧಿಕಾರಿಯನ್ನು ವಜಾಗೊಳಿಸಿ ಎಂದು ಒತ್ತಾಯಿಸಿದರು. ಈ ವೇಳೆ ಕೆಲ ಕಾಲ ಅಧಿಕಾರಿಯೊಂದಿಗೆ ಜೋರು ಮಾತಿನಲ್ಲಿಯೇ ವಾಗ್ವಾಧಕ್ಕಿಳಿದರು. ಉಪವಿಭಾಗಾಧಿಕಾರಿ ಅಜಯ್ ಪ್ರತಿಭಟನಾ ನಿರತರನ್ನು ಸಮಾಧಾನ ಪಡಿಸಿ,ಮುಂದಿನ ಎರಡು ದಿನದಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳು ಮತ್ತು ವಕ್ಕಲಿಗ ಮುಖಂಡರು ಸಭೆ ಕರೆದು ಚರ್ಚೆ ನಡೆಸಿ,ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಯ ನಂತರ ಪ್ರತಿಭಟನೆಯನ್ನು ಕೈಬಿಡಲಾಯಿತು. ಪ್ರತಿಭಟನೆಯಲ್ಲಿ ದೇವಪ್ರಕಾಶ್,ವಕೀಲರಾದ ರವಿಗೌಡ,ಚಿಕ್ಕರಂಗಣ್ಣ,ಕೆಂಪರಾಜು,ಕೈದಾಳ ರಮೇಶ್,ಸತ್ಯಪ್ಪ,ವಿಜಯಕುಮಾರ್,ಮಂಜುನಾಥಗೌಡ, ಪಾಲಿಕೆ ದಸ್ಯರಾದ ಧರಣೇಂದ್ರಕುಮಾರ್, ಶ್ರೀನಿವಾಸಕುಮಾರ್, ಮನೋಹರಗೌಡ, ಲಕ್ಕೇಗೌಡ, ಕುಣಿಗಲ್ ಶ್ರೀನಿವಾಸಗೌಡ, ಚಿಕ್ಕಸಾರಂಗಿ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಜೆ.ಇ.ಲಸಿಕಾ ಅಭಿಯಾನದ ಅರಿವು ಮೂಡಿಸಿ
Next Article ಭ್ರಷ್ಟಾಚಾರ ತೊಲಗಿಸಿ ದೇಶದ ಪ್ರಗತಿ ಹೆಚ್ಚಿಸಿ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.