BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ : ಎನ್.ಗೋವಿಂದರಾಜು
ಇತರೆ ಸುದ್ಧಿಗಳು

ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ : ಎನ್.ಗೋವಿಂದರಾಜು

By News Desk BenkiyabaleUpdated:November 08, 2022 5:12 pm

ತುಮಕೂರು


ನಗರ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದರೂ ಜನಸೇವೆ ಮಾಡೋದನ್ನ ಮರೆಯಲಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಹೇಳಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್ ಅವರು ತುಮಕೂರು ನಗರಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ್ದರು ಇದಕ್ಕೆ ಪ್ರತ್ಯುತ್ತರವಾಗಿ ನಗರದಲ್ಲಿ 2013 ರಿಂದ 2018ರವರೆಗೆ ನಿರಂತರ ಐದು ವರ್ಷಗಳ ಕಾಲ ಶಾಸಕರಾಗಿದ್ದಾಗ, ತುಮಕೂರು ನಗರಕ್ಕೆ ತಮ್ಮ ಕೊಡುಗೆ ಏನು ಎಂಬುದನ್ನು ದಾಖಲೆ ಸಮೇತ ಬಿಡುಗಡೆ ಮಾಡಿ ಎಂದು ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಪ್ರತಿ ಸವಾಲು ಹಾಕಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎನ್.ಗೋವಿಂದರಾಜು ನಗರದ ಜನತೆಗೆ ಕಳೆದ 11 ವರ್ಷದಿಂದ ಶುದ್ದ ಕುಡಿಯುವ ನೀರನ್ನು ನೀಡುತ್ತಾ ಬಂದಿದ್ದೇನೆ. ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಿದ್ದೇನೆ. ಕೋವಿಡ್ ನಿಂದ ಸಾರ್ವಜನಿಕರಿಗೆ ಆಂಬ್ಯುಲೆನ್ಸ್ ಕೊರತೆ ಉಂಟಾದಾಗ ಎರಡು ಖಾಸಗಿ ಆಂಬ್ಯುಲೆನ್ಸ್ ಗಳನ್ನು ಒದಗಿಸಿ ಜನರಿಗೆ ವೈದ್ಯಕೀಯ ಸೇವೆ ನೀಡಿದ್ದೇನೆ.
ತುಮಕೂರು ನಗರವನ್ನು ಕಾರ್ಯಕ್ಷೇತ್ರವಾಗಿಸಿಕೊಂಡು 2010 ರಿಂದಲೂ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್,ಅಶಕ್ತ ಮಕ್ಕಳಿಗೆ ಶಾಲಾ ಶುಲ್ಕ,ಬಡಮಕ್ಕಳಿಗೆ ಸಮವಸ್ತ್ರ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇನೆ. ಜನರು ಅಧಿಕಾರ ನೀಡಿದರೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡಲಿದ್ದೇನೆ.
ಮಾಜಿ ಶಾಸಕರೇ, 2013 ರಿಂದ 2018ರವರೆಗೆ ತುಮಕೂರು ನಗರದ ಶಾಸಕರಾಗಿದ್ದ ತಾವು ನಗರಕ್ಕೆ ನೀಡಿರುವ ಕೊಡುಗೆ ಏನು? 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಣೆ ಮಾಡಿ, ತುಮಕೂರು ನಗರಕ್ಕೆ ಮಂಜೂರು ಮಾಡಿದ್ದ ಮೆಡಿಕಲ್ ಕಾಲೇಜು ಎಲ್ಲಿ ಹೋಯಿತು? ಮೆಡಿಕಲ್ ಕಾಲೇಜಿಗಾಗಿ ನೀಡಿದ 6 ಎಕರೆ ಜಮೀನು ಮತ್ತು 620 ಕೋಟಿ ಹಣ ಯಾರ ಪಾಲಾಯಿತು. ತುಮಕೂರು ನಗರ
ಶಾಸಕರಾಗಿ ಮೆಡಿಕಲ್ ನಿರ್ಮಾಣಕ್ಕೆ ನೀವು ಯಾವ ರೀತಿ ಕ್ರಮ ಕೈಗೊಂಡಿದ್ದೀರಾ?
ಎಂಬುದನ್ನು ದಾಖಲೆಗಳ ಸಮೇತ ತುಮಕೂರು ನಗರದ ಜನತೆಯ ಮುಂದಿಡಬೇಕೆಂದು ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಅವರು ಒತ್ತಾಯಿಸಿದ್ದಾರೆ.
ತುಮಕೂರು ನಗರದ ಜನತೆ ಐದು ವರ್ಷಗಳ ಕಾಲ ನಿಮಗೆ ಶಾಸಕರನ್ನಾಗಿ ಅಧಿಕಾರ ನೀಡಿದ್ದರು. ಈ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿದ್ಯಾರ್ಥಿಗಳಿಗೆ ಎಷ್ಟು ಹಾಸ್ಟಲ್ ನಿರ್ಮಾಣ ಮಾಡಿದ್ದೀರಾ? ಯಾವ ಯಾವ ವಸತಿ ಯೋಜನೆಗಳ ಮೂಲಕ ಎಷ್ಟು ಜನ ಬಡವರಿಗೆ, ನಿರ್ಗತಿಕರಿಗೆ ಮನೆ ನಿರ್ಮಿಸಿದ್ದೀರಾ? ಅಲ್ಪಸಂಖ್ಯಾತರ
ಅಭಿವೃದ್ದಿಗೆ ನೀವು ಸರಕಾರದಿಂದ ಎಷ್ಟು ಕೋಟಿ ವಿಶೇಷ ಅನುದಾನ
ಮಂಜೂರು ಮಾಡಿಸಿದ್ದೀರಾ? ದಲಿತ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಅಭಿವೃದ್ದಿಗೆ ನೀವು ತಂದ ಅನುದಾನ ಎಷ್ಟು? ಎಂಬುದನ್ನು ದಾಖಲೆಗಳ ಸಮೇತ ಸಾರ್ವಜನಿಕವಾಗಿ ತಿಳಿಸಿ,ಇಲ್ಲವೇ ಬಹಿರಂಗ ಚರ್ಚೆಗೆ ಬನ್ನಿ ಎಂಬುದು ನನ್ನ ಸವಾಲಾಗಿದೆ ಎಂದು ಎನ್.ಗೋವಿಂದರಾಜು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

(Visited 13 times, 1 visits today)
tumkur
Previous Articleಕನ್ನಡ ಭಾಷೆಯನ್ನು ಬಳಸಿ ಬೆಳೆಸಿ : ವಕೀಲೆ
Next Article ರೈತರಿಗೆ ಸಾಗುವಳಿ – ಹಕ್ಕು ಪತ್ರವನ್ನು ಅಂದೋಲನ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.