BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಇಲ್ಲದ ಆಹ್ವಾನ : ಜೆಡಿಎಸ್‌ ಟ್ವಿಟ್‌
ಇತರೆ ಸುದ್ಧಿಗಳು

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಇಲ್ಲದ ಆಹ್ವಾನ : ಜೆಡಿಎಸ್‌ ಟ್ವಿಟ್‌

By News Desk BenkiyabaleUpdated:November 11, 2022 4:18 pm
Deve Gowda

ಬೆಂಗಳೂರು:

Deve Gowda

ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು.

ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು.

ಈ ನಡುವೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡದೇ ಇರುವುದಕ್ಕೆ ಜೆಡಿಎಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವಿಟ್‌ ಮಾಡಿದೆ.
ಟ್ವಿಟ್‌ನಲ್ಲಿ ಇರೋದು ಏನು?

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಕೆಂಪೇಗೌಡರು ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡರನ್ನು
ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಮಾಡಲಾಗಿದೆ ಅಂತ ಹೇಳಿದ್ದಾರೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ

ರಾಜ್ಯ ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

(Visited 1 times, 1 visits today)
tumkur
Previous Articleನ 13 : ನೇಕಾರರ ಸಮುದಾಯಗಳ ಜಿಲ್ಲಾ ಸಮಾವೇಶ
Next Article ಕೆಂಪೇಗೌಡ ಪ್ರತಿಮೆ ಅನಾವರಣ – ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಪ್ರಧಾನಿ ವಾಗ್ದಾನ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.