BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯಲಿ
ಇತರೆ ಸುದ್ಧಿಗಳು

ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯಲಿ

By News Desk BenkiyabaleUpdated:November 17, 2022 5:03 pm

ತುಮಕೂರು


ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾದ ಡಾ: ಕೆ. ಸುಧಾಕರ್ ತಿಳಿಸಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಆಡಿಟೋರಿಯಂನಲ್ಲಿ ವೈದ್ಯರುಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು. ಆಸ್ಪತ್ರೆಗಳಿಗೆ ಡಯಾಲಿಸಿಸ್ ಮಾಡಿಸಿಕೊಳ್ಳಲು ಬರುವಂತಹ ರೋಗಿಗಳಿಗೆ ಯಾವುದೇ ರೀತಿ ಸೋಂಕು ಆಗದ ರೀತಿ ವೈದ್ಯರುಗಳು ಮತ್ತು ಶುಶ್ರೂಷಕರು ಎಚ್ಚರಿಕೆ ವಹಿಸಬೇಕು. ಇದರಿಂದ ಜನರು ಖಾಸಗಿ ಆಸ್ಪತ್ರೆಗಳಿಗೆ ಹೋಗುವುದು ತಪ್ಪುತ್ತದೆ. ಬಳಸಿದ ಉಪಕರಣಗಳನ್ನು ಮರು ಬಳಸದಂತೆ ‘ಸಿಂಗಲ್ ಯೂಸ್’ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ: ವೀಣಾ ಅವರು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 10 ಡಯಾಲಿಸಿಸ್ ಯಂತ್ರಗಳಿದ್ದು, 3 ಪಾಳಿಯಲ್ಲಿ ಡಯಾಲಿಸಿಸ್ ಮಾಡಲಾಗುತ್ತಿದ್ದು, ಪ್ರತಿ ತಿಂಗಳು 500-700 ಸೈಕಲ್ ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ಸಚಿವರಿಗೆ ವಿವರಿಸಿದರು.
ದಂತ ಭಾಗ್ಯ ಹಾಗೂ ನೇತ್ರ ಚಿಕಿತ್ಸೆ ಕ್ಯಾಂಪ್‍ಗಳನ್ನು ಜಿಲ್ಲೆಯಾದ್ಯಂತ ನಡೆಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆಧುನಿಕ ಹಾಸಿಗೆ ಮತ್ತು ಒಂದೇ ಮಾದರಿಯ ಹೊದಿಕೆಗಳನ್ನು ಖರೀದಿಸಬೇಕು. ಶೌಚಾಲಯಗಳನ್ನು ಸ್ವಚ್ಚವಾಗಿಡುವ ಸಂಬಂಧ ಉತ್ತಮ ಏಜೆನ್ಸಿಯನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಡಿಹೆಚ್‍ಒ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಮರುಕಳಿಸದಂತೆ ಜಿಲ್ಲಾಸ್ಪತ್ರೆಗಳಲ್ಲಿ 24×7 ಸಹಾಯವಾಣಿಯನ್ನು ತೆರೆಯಲಿದ್ದು, ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಮಂದಿ ಸಿಬ್ಬಂದಿಯನ್ನು ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲು ನೇಮಿಸಿಕೊಳ್ಳುವಂತೆ ಸಚಿವರು ಸೂಚಿಸಿದರು.
ಆಸ್ಪತ್ರೆಯ ಬಯೋ ಮೆಡಿಕಲ್ ತ್ಯಾಜ್ಯವನ್ನು ಸರಿಯಾಗಿ ವಿಲೇ ಮಾಡಬೇಕು ಎಂದ ಸಚಿವರು, ಮಾನವೀಯ ಮನಸ್ಥಿತಿ ಹೊಂದಿರುವಂತಹ ಆರೋಗ್ಯ ಮಿತ್ರ ಸಿಬ್ಬಂದಿಯನ್ನೂ ಸಹ ನೇಮಕ ಮಾಡಿಕೊಳ್ಳಬೇಕು. ಆಸ್ಪತ್ರೆಯ ದಟ್ಟಣೆ ಮೇರೆಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಮತ್ತು ಆರೋಗ್ಯ ಮಿತ್ರ ಸಿಬ್ಬಂದಿಗೆ ನಿಯಮಿತವಾಗಿ ಗುರಿ ನೀಡಬೇಕು ಎಂದರು.
ಜಿಲ್ಲಾಸ್ಪತ್ರೆಯ ಶವಾಗಾರ ಅತ್ಯಂತ ಹಳೆಯದಾಗಿದ್ದು, ಆಧೂನಿಕ ಸೌಲಭ್ಯ ಒದಗಿಸುವಂತೆ ಹಾಗೂ ಶವಾಗಾರಕ್ಕೆ ಜೆ.ಸಿ.ರಸ್ತೆ ಮೂಲಕ ಪ್ರತ್ಯೇಕ ಆಗಮನ ನಿರ್ಗಮನ ವ್ಯವಸ್ಥೆ ಮಾಡುವಂತೆ ಶಾಸಕ ಜ್ಯೋತಿ ಗಣೇಶ್ ಅವರು ಮನವಿ ಮಾಡಿದಾಗ ಅದಕ್ಕೆ ಸ್ಪಂದಿಸಿದ ಸಚಿವರು, ಕಾರ್ಯಪಾಲಕ ಅಭಿಯಂತರರಿಗೆ ಈ ಕುರಿತಂತೆ ಪರಿಶೀಲಿಸಲು ಸೂಚಿಸಿದರು.
ದಿನನಿತ್ಯ ಆಸ್ಪತ್ರೆಗೆ ಅಂದಾಜು 1600 ರೋಗಿಗಳು ಹೊರರೋಗಿಯಾಗಿ ಚಿಕಿತ್ಸೆ ಪಡೆಯಲು ಆಗಮಿಸುತ್ತಿದ್ದು, ಈ ಲೆಕ್ಕಾಚಾರದನ್ವಯ ಪ್ರತಿ ದಿನ 800 ರಿಂದ 1000 ಎಬಿಎಆರ್‍ಕೆ ಕಾರ್ಡ್‍ಗಳು ನೋಂದಣಿಯಾಗಬೇಕು ಎಂದರು.
ನಿಯಮಿತವಾಗಿ ಎಆರ್‍ಎಸ್(ಆರೋಗ್ಯ ರಕ್ಷಾ ಸಮಿತಿ) ಸಮಿತಿ ಸಭೆಗಳನ್ನು ನಡೆಸಬೇಕು. ಹೀಗೆ ಮಾಡುವುದರಿಂದ ಪಾರದರ್ಶಕತೆ ಕಾಪಾಡಿಕೊಳ್ಳುವಂತಾಗುತ್ತದೆ ಮತ್ತು ಜನರಿಗೆ ವೈದ್ಯಕೀಯ ವಿಷಯಗಳು ತಿಳಿಯುತ್ತವೆ ಎಂದರು.
ರೋಗಿಗಳಿಗೆ ನೀಡಲಾಗುವ ‘ಡಯಟ್ ಮೆನು’ ಸರಿಯಾಗಿರಬೇಕು. ಕ್ಯಾಟರಿಂಗ್ ವ್ಯವಸ್ಥೆ ಹೆಚ್ಚಿಸಬೇಕು, ಅಡಿಗೆ ಕೋಣೆ ಸ್ವಚ್ಛವಾಗಿರಬೇಕು ಎಂದು ಸೂಚಿಸಿದರು.
ಡಗ್ಸ್ ಮತ್ತು ಲಾಜಿಸ್ಟಿಕ್ ವೇರ್ ಹೌಸ್‍ನಿಂದ ನಿಯಮಿತವಾಗಿ ಔಷಧಗಳು ಸರಬರಾಜು ಆಗುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಮತ್ತು ಔಷಧಿಗಳ ಪೂರೈಕೆ ಕುರಿತು ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಿ ಡೀಲರ್‍ಗಳಿಗೆ ಮುಂಚಿತವಾಗಿ ಇಂಡೆಂಟ್ ನೀಡಬೇಕು ಎಂದರು.
ಎಂ.ಆರ್.ಐ.(ಒಖI) ಮತ್ತು ಸಿಟಿ ಸ್ಕ್ಯಾನ್‍ಗಳನ್ನು(ಅಖಿ Sಛಿಚಿಟಿ) ವೈದ್ಯರುಗಳು ಶಿಫಾರಸ್ಸು ಮಾಡಿದಾಗ ಅದನ್ನು ಸ್ಥಾನಿಕ ವೈದ್ಯಾಧಿಕಾರಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರು ದೃಢೀಕರಿಸಬೇಕು. ರೋಗಿಗಳಿಗೆ ಅವಶ್ಯಕತೆ ಇದ್ದಲ್ಲಿ ಮಾತ್ರ ಎಂ.ಆರ್.ಐ. ಮತ್ತು ಸಿಟಿ ಸ್ಕ್ಯಾನ್‍ಗಳನ್ನು ಶಿಫಾರಸ್ಸು ಮಾಡಬೇಕು. ಅನಾವಶ್ಯಕವಾಗಿ ಶಿಫಾರಸ್ಸು ಮಾಡಬಾರದು. ಪ್ರತಿ ಶುಕ್ರವಾರ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪರಿಶೀಲನಾ ಸಭೆಯನ್ನು ನಡೆಸಿದಲ್ಲಿ ವ್ಯವಸ್ಥೆ ಸರಿಹೋಗಲಿದೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ವೆಂಟಿಲೇಟರ್, ಆಕ್ಸಿಜûನ್ ಪ್ಲಾಂಟ್, ಆ್ಯಂಬುಲೆನ್ಸ್, ಖಾಲಿ ಹುದ್ದೆಗಳು, ಮುಂತಾದವುಗಳ ಕುರಿತು ಸಚಿವರು ಚರ್ಚಿಸಿ ಸಮಗ್ರ ಮಾಹಿತಿಯನ್ನು ಪಡೆದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಮಾತನಾಡಿ, ಜನಸಾಮಾನ್ಯರಿಗೆ ಎಲ್ಲಾ ರೀತಿಯ ಉತ್ತಮ ಚಿಕಿತ್ಸೆ ಹಾಗೂ ಸೌಕರ್ಯವನ್ನು ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳ ಮೂಲಕ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಘಟಿಸಿದ ತಾಯಿ-ಶಿಶುಗಳ ಸಾವಿನ ಪ್ರಕರಣ ಮತ್ತೆ ಮರು ಕಳಿಸಬಾರದು. ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ಕುರಿತಂತೆ ಯಾವುದೇ ರೂಪದಲ್ಲಿ ದೂರು ಬರಬಾರದು. ದೂರು ಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

(Visited 3 times, 1 visits today)
tumkur
Previous Articleಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಕಾಂಗ್ರೇಸ್ಸಿಗರ ಗುಟುರು
Next Article ವಿದ್ಯುತ್ ಮೇಲು ಮಾರ್ಗಗಳ ಕೆಳಗೆ ಕಟ್ಟಡ ನಿರ್ಮಾಣ ನಿಯಮಬಾಹಿರ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.