ತುಮಕೂರು:
      ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ತುರುವೇಕೆರೆ ತಾಲೂಕಿನ ಸಿ.ವಿ.ಮಹಾಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲೆಯ 10 ತಾಲೂಕುಗಳಿಂದ ತಲಾ ಒಬ್ಬರಂತೆ 10 ಜನ ನಿರ್ದೇಶಕರು ಹಾಗೂ 4 ಜನ ಅಧಿಕಾರಿಗಳನ್ನು ಒಳಗೊಂಡ 14 ಜನ ಮತದಾರರನ್ನು ಹೊಂದಿದ್ದು,9 ಮತಗಳನ್ನು ಪಡೆದ ಪಡೆದ ಸಿ.ವಿ.ಮಹಾಲಿಂಗಪ್ಪ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಡಿ.ಕೃಷ್ಣಕುಮಾರ್ 5 ಮತಗಳನ್ನು ಪಡೆದರು.
ಇಂದು ಮಧ್ಯಾಹ್ನ 12ಕ್ಕೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತುರುವೇಕೆರೆ ಕ್ಷೇತ್ರದ ಸಿ.ವಿ.ಮಹಾಲಿಂಗಯ್ಯ ಮತ್ತು ಕುಣಿಗಲ್ ಕ್ಷೇತ್ರದ ಡಿ.ಕೃಷ್ಣಮೂರ್ತಿ ಅವರುಗಳು ಅಧ್ಯಕ್ಷಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ವಾಪಸ್ಸು ಪಡೆಯಲು ನಿಗಧಿಪಡಿಸಿದ್ದ ಕಾಲಾವಕಾಶದಲ್ಲಿ ಇಬ್ಬರಲ್ಲಿ ಯಾರು ತಮ್ಮ ನಾಮಪತ್ರ ಹಿಂಪಡೆಯದ ಕಾರಣ ಚುನಾವಣೆ ನಡೆಸಲಾಯಿತು.
10 ತಾಲೂಕುಗಳ ಚುನಾಯಿತ ನಿರ್ದೇಶಕರಲ್ಲದೆ,ಸಹಕಾರ ಇಲಾಖೆಯ ಜಂಟಿ ಉಪನಿಬಂಧಕರು, ಕೆ.ಎಂ.ಎಫ್. ಪ್ರತಿನಿಧಿ, ಪಶುಸಂಗೋಪನಾ ಇಲಾಖೆಯ ಸಹಕಾರ ಇಲಾಖೆಯ ಉಪನಿರ್ದೆಶಕರು ಹಾಗೂ ಸರಕಾರದ ನಾಮನಿರ್ದೇಶಿತ ನಿರ್ದೇಶಕ ಅಬ್ದುಲ್ ರಜಾಕ್ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಉಪನಿಬಂಧಕ ಜಿ.ಆರ್.ವಿಜಯಕುಮಾರ್,ಸಹಾಯಕ ಚುನಾವನಾಣಾಧಿ ಕಾರಿಯಾಗಿ ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಮುನೇಗೌಡ ಕಾರ್ಯನಿರ್ವಹಿಸಿದ್ದರು.
ತುಮಕೂರ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ತುರುವೇಕೆರೆ ಕ್ಷೇತ್ರದ ಸಿ.ವಿ.ಮಹಾಲಿಂಗಯ್ಯ ಮಾತನಾಡಿ, ಒಕ್ಕೂಟದಲ್ಲಿ ಈ ಹಿಂದಿನ ಅಧ್ಯಕ್ಷರು ಒಕ್ಕೂಟದಲ್ಲಿ ಕೈಗೊಂಡಿರುವ ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಮುಂದುವರೆ ಸುವುದರ ಜೊತೆಗೆ,ಮುಂದಿನ ದಿನಗಳಲ್ಲಿ ಹೈನುಗಾರರಿಗೆ ಹೆಚ್ಚಿನ ಬೆಲೆ, ಮೇಗಾ ಡೈರಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಇಚ್ಚೆಯಿದ್ದು, ಮುಖ್ಯಮಂತ್ರಿಗಳು, ಜಿಲ್ಲೆಯ ಎಲ್ಲಾ ಸಚಿವರು, ಶಾಸಕರು ಹಾಗೂ ಪಶುಸಂಗೋಪನಾ ಸಚಿವರೊಂದಿಗೆ ಚರ್ಚಿಸಿ, ಡೈರಿ ಅಭಿವೃದ್ದಿಗೆ ಮುಂದಾಗುವುದಾಗಿ ತಿಳಿಸಿದರು.

 
									 
					



