BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಲಿತರನ್ನು ಸಿಎಂ ಮಾಡುವೆ : ಎಚ್‍ಡಿಕೆ
ಇತರೆ ಸುದ್ಧಿಗಳು

ದಲಿತರನ್ನು ಸಿಎಂ ಮಾಡುವೆ : ಎಚ್‍ಡಿಕೆ

By News Desk BenkiyabaleUpdated:December 02, 2022 4:53 pm

ತುಮಕೂರು

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 123 ಸ್ಥಾನಗಳು ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡಲು ನಾವು ಸಿದ್ದರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
2023ರ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ದಲಿತರನ್ನು ಮುಖ್ಯಮಂತ್ರಿ ಏಕೆ ಆಗಬಾರದು. ನಾವಂತೂ ದಲಿತರನ್ನು ಮುಖ್ಯಮಂತ್ರಿ ಮಾಡಲು ತಯಾರಿದ್ದೇವೆ ಎಂದರು.
ನಗರದ ದಿಬ್ಬೂರಿನಲ್ಲಿ ವಾಸ್ತವ್ಯ ಹೂಡಿ ಬೆಳಿಗ್ಗೆ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಮೀಸಲಾತಿ ಇಲ್ಲದೇ ಇದ್ದಾಗಲೂ ದಲಿತರನ್ನು ಮುಖಂಡರನ್ನಾಗಿ ಮಾಡಿದ್ದರು. ಅದನ್ನು ನಾವ್ಯಾರೂ ಮರೆಯಲು ಆಗುವುದಿಲ್ಲ ಎಂದು ಹೇಳಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತ ಕುಟುಂಬದ ಮಹಿಳೆಗೆ ಚಿಕಿತ್ಸೆ ಕೊಡಿಸಿ ನಮ್ಮ ಮನೆಯಲ್ಲಿಯೇ ಇರಿಸಿಕೊಂಡಿದ್ದೆ. ಈ ಕೆಲಸ ಯಾವ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದರು.
ದಲಿತರ ಬಗ್ಗೆ ಕಾಳಜಿ ಇದೆ ಎಂದು ಮೇಲ್ನೋಟಕ್ಕೆ ತೋರ್ಪಡಿಸುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಅಸ್ಪೃಶ್ಯರ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆ ದಾಖಲೆ ಕೊಡುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವು ಮನೆಯಲ್ಲಿ ಕುಳಿತುಕೊಂಡಿದ್ದರೂ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಆದರೆ ನಮಗೆ ಅದು ಬೇಕಾಗಿಲ್ಲ. ಸಂಪೂರ್ಣ ಬಹುಮತ ಬಂದು ನಮ್ಮ ಪಕ್ಷ ಸ್ವತಂತ್ರವಾಗಿ ಸರ್ಕಾರ ರಚಿಸಬೇಕು. ಆಗ ಮಾತ್ರ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದರು.
ಚುನಾವಣೆ ಇನ್ನು 4-5 ತಿಂಗಳು ಬಾಕಿ ಇದೆ. ಹಾಗಾಗಿ ಮುಂದಿನ ನಾಲ್ಕು ತಿಂಗಳು ಬಹಳ ಸೂಕ್ಷ್ಮದ ದಿನಗಳು. ಯಾರೂ ಕೂಡಾ ಮೈ ಮರೆಯಬಾರದುಯ ಮನೆ ಮನೆಗೆ ಹೋಗಿ ಪಕ್ಷದ ಕಾರ್ಯಕ್ರಮದ ಬಗ್ಗೆ ತಿಳಿಸಿ ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿರುವುದಾಗಿ ಹೇಳಿದರು.
ಈಗ ಯಾವ್ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೋ ಅಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಇನ್ನೊಂದು ಕ್ಷೇತ್ರ ಮಾತ್ರ ಬಾಕಿಯಿದೆ ಎಂದ ಅವರು, ಒಂದೊಂದು ಕಡೆ ಲೋಪದೋಷಗಳು ಆದಾಗ ಮಾತ್ರ ಅಂತಹ ಕಡೆಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಆಗಬಹುದು ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ ಅಷ್ಟೆ. ಅದನ್ನು ಹೊರತುಪಡಿಸಿದರೆ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಡೆಗಣಿಸಿದರೆ ಮಾತ್ರ ಅಂತಹ ಅಭ್ಯರ್ಥಿಗಳ ಬದಲಾವಣೆಯಾಗುತ್ತದೆ. ನಮ್ಮದು ಕಾರ್ಯಕರ್ತರ ಪಕ್ಷ. ಹಾಗಾಗಿ ಕಾರ್ಯಕರ್ತರಿಗೆ ಮೊದಲ ಆದ್ಯತೆ ಎಂದರು.
ಚುನಾವಣೆಯಲ್ಲಿ ನಾವು ಕುತಂತ್ರದಿಂದ ಗೆಲ್ಲುವ ಅವಶ್ಯಕತೆ ಇಲ್ಲ. ನಾಡಿನ ಜನರ ಪ್ರೀತಿ, ವಿಶ್ವಾಸದಿಂದ ಗೆಲ್ಲಬೇಕಾಗಿದೆ ಎಂದು ಅವರು ಹೇಳಿದರು.
ರಾಜ್ಯದ ಪ್ರತಿಯೊಂದು ಕ್ಷೇತ್ರದ ಬಗ್ಗೆಯೂ ಪ್ರತಿ ತಿಂಗಳು ವರದಿ ಬರುತ್ತದೆ. ಯಾರು ಹೇಗೆ ಕೆಲಸ ಮಾಡುತ್ತಾರೆ, ನಾವು ವಹಿಸಿರುವ ಜವಾಬ್ದಾರಿಗಳನ್ನು ಯಾರು ಸರಿಯಾಗಿ ನಿರ್ವಹಿಸುತ್ತಾರೆ ಎಂಬುದರ ಬಗ್ಗೆ ಇಂಚಿಂಚೂ ಮಾಹಿತಿ ನಮಗೆ ತಿಳಿಯುತ್ತದೆ ಎಂದು ಅವರು ಹೇಳಿದರು.
ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಜೆಡಿಎಸ್ ಪಕ್ಷಕ್ಕೆ ಬರುವ ಸನ್ನಿವೇಶ ಇಲ್ಲ. ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಪಾಪಾ ಅವರಿಗೆ ಗೊತ್ತಿರುತ್ತದೆ ಎಂದ ಅವರು, ಕಾಂಗ್ರೆಸ್ ಪಕ್ಷದವರು ನಮ್ಮ ಪಕ್ಷದವರ ಬಗ್ಗೆ ನೆಗೆಟಿವ್ ಮಾತುಗಳನ್ನಾಡುತ್ತಲೇ 70 ಸ್ಥಾನಕ್ಕೆ ಬಂದರು. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಭಾಗ್ಯಗಳ ಸರಮಾಲೆಯನ್ನು ನೀಡಿದರೂ ಸಹ ಯಾವುದೇ ಪ್ರಯೋಜನವಾಗಿಲಿಲ್ಲ ಎಂದು ಟೀಕಿಸಿದರು.
ಕಳೆದ ಬಾರಿ ಸೋಲಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ, ಸಣ್ಣಪುಟ್ಟ ಲೋಪದೋಷ ಇದ್ದರೆ ಅದನ್ನು ಸರಿಪಡಿಸಿಕೊಂಡು ಈ ಬಾಗಿ ಆ ರೀತಿಯ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸುವುದಾಗಿ ಅವರು ಹೇಳಿದರು.
ಈ ಪಂಚರತ್ನ ರಥಯಾತ್ರೆ ಬಗ್ಗೆ ನಿನ್ನೆ-ಮೊನ್ನೆ ತೀರ್ಮಾನ ಮಾಡಿಲ್ಲ. ಕೋವಿಡ್‍ಗಿಂತಲೂ ಮೊದಲೇ ನಿರ್ಧಾರ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಯಾವ ಹೆಸರು ಇಡಬೇಕು ಎಂದು ಯೋಚಿಸಿ ಪಂಚರತ್ನ ಎಂದು ಹೆಸರು ಇಡಲಾಯಿತು. ಪಂಚಭೂತಗಳೇ ನಮ್ಮ ಭೂಮಿಯನ್ನು ಕಾಪಾಡಿರುವುದು. ದೇಹಕ್ಕೆ ಪಂಚೇಂದ್ರಿಯಗಳು ಎಷ್ಟು ಮುಖ್ಯವೋ ಅದೇ ರೀತಿ ಪಂಚರತ್ನ ಕಾರ್ಯಕ್ರಮಗಳು ಅಷ್ಟೇ ಮುಖ್ಯ ಎಂದರು.
ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ. ತಮಿಳುನಾಡು, ಕೇರಳ ಗಡಿ ಭಾಗದಲ್ಲೂ ಸಮಸ್ಯೆಗಳನ್ನು ಹೇಳುತ್ತಾರೆ. ರಾಜಕೀಯದ ಉದ್ದೇಶಕ್ಕಾಗಿ ಈ ರೀತಿಯ ಹುನ್ನಾರಗಳನ್ನು ಮಾಡುತ್ತಿದ್ದಾರೆ. ನಮ್ಮ ನೆಲ, ಜಲ ಕಾಪಾಡುವ ಬಗ್ಗೆ ಎಲ್ಲರೂ ಚಿಂತಿಸಲೇಬೇಕು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಜಿ. ಆಂಜಿನಪ್ಪ, ಮುಖಂಡರಾದ ಗೋವಿಂದರಾಜು, ಎಸ್.ಆರ್. ಗೌಡ, ಪ್ರೆಸ್ ರಾಜಣ್ಣ, ಟಿ.ಆರ್. ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

 

 

(Visited 1 times, 1 visits today)
tumkur
Previous Articleಪಂಚಯೋಜನೆಗಳೊಂದಿಗೆ ಪಂಚರತ್ನ ಯಾತ್ರೆ
Next Article ಶಾಲೆಯ ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.