BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ಪಟ್ಟಿಗೆ ಸಂಬಂಧಿಸಿದ ದೂರುಗಳಿಗೆ ಆಸ್ಪದ ನೀಡಬೇಡಿ : ಪಂಕಜ್‍ಕುಮಾರ್‍ಪಾಂಡೆ
ಇತರೆ ಸುದ್ಧಿಗಳು

ಮತದಾರರ ಪಟ್ಟಿಗೆ ಸಂಬಂಧಿಸಿದ ದೂರುಗಳಿಗೆ ಆಸ್ಪದ ನೀಡಬೇಡಿ : ಪಂಕಜ್‍ಕುಮಾರ್‍ಪಾಂಡೆ

By News Desk BenkiyabaleUpdated:December 02, 2022 5:01 pm

ತುಮಕೂರು


ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪ್ರಕಟಣೆ -2023 ಸಂಬಂಧ ನವೆಂಬರ್ 9, 2022ರಿಂದ ಡಿಸೆಂಬರ್ 8, 2022 ರವರೆಗೆ ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಮತದಾರರಿಂದ ಸ್ವೀಕೃತಗೊಳ್ಳುವ ಎಲ್ಲ ಅರ್ಜಿ ನಮೂನೆಗಳನ್ನು ಪ್ರತಿನಿತ್ಯ ಪರಿಶೀಲಿಸಿ ಇತ್ಯರ್ಥಗೊಳಿಸಬೇಕು ಮತ್ತು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ತುಮಕೂರು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರೂ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕಾರ್ಯದರ್ಶಿಗಳೂ ಆದ ಪಂಕಜ್‍ಕುಮಾರ್‍ಪಾಂಡೆ(ಐಎಎಸ್) ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರಿಂದು ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪ್ರಕಟಣೆ -2023ರ ಸಂಬಂಧ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನ್ನಾಡುತ್ತಾ, ದೋಷರಹಿತ ಮತದಾರರ ಪಟ್ಟಿ ಸಿದ್ದತೆಗೆ ಆದ್ಯತೆ ನೀಡಬೇಕು. ತುಮಕೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರು ಬರಬಾರದು.ಚುನವಣಾ ಅಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಯಾವುದೇ ಅನುಮಾನ ಅಥವಾ ಗೊಂದಲಗಳಿದ್ದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದಂತಹ ಜಿಲಾಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಿದರು.
18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು ಈ ತಿಂಗಳ 3 ಹಾಗೂ 4ರಂದು ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದ್ದು, ಬಿಎಲ್‍ಓಗಳು ಮತಗಟ್ಟೆ ಪ್ರದೇಶದಲ್ಲಿ ಹಾಜರಿದ್ದು, ಮತದಾರರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಮತ್ತು ಶೇ.100ರಷ್ಟು ಮನೆ-ಮನೆ ಭೇಟಿ ಕಾರ್ಯಕ್ರಮ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.
ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಇನ್ನು 6 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ಅವಧಿಯಲ್ಲಿ ಮತದಾರರಿಂದ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಕೈ ಬಿಡತಕ್ಕವುಗಳ ಬಗ್ಗೆ ಹೆಚ್ಚಿನ ಅರ್ಜಿಗಳು ಹರಿದು ಬರುವ ಕಾರಣ ಈಗಾಗಲೇ ಸ್ವೀಕೃತಗೊಂಡಿರುವ ಅರ್ಜಿ ನಮೂನೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಮತದಾರರ ಪಟ್ಟಿ ವೀಕ್ಷಕರಾದ ಶ್ರೀ ಪಂಕಜ್‍ಕುಮಾರ್‍ಪಾಂಡೆ ಅವರಿಗೆ ಜಿಲ್ಲೆಯ ಕುರಿತು ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರವಿದ್ದು, ಒಟ್ಟು 2798935 ಜನಸಂಖ್ಯೆಯಿರುತ್ತದೆ. 9-11-2022ರ ಕರಡು ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 2162613 ಮತದಾರರಿದ್ದು, ಈ ಪೈಕಿ 1082752 ಪುರುಷ ಹಾಗೂ 1079769 ಮಹಿಳಾ ಮತದಾರಿದ್ದಾರೆ. ಜಿಲ್ಲೆಯಲ್ಲಿ ಇಪಿ ರೇಷಿಯೋ 77.27 ಇರುತ್ತದೆ. ಜೆಂಡರ್ ರೇಷಿಯೋ 997 ಇರುತ್ತದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಒಟ್ಟು 30165 ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲಾಗಿದ್ದು, ಅಂತೆಯೇ ನವೆಂಬರ್ 12 ಹಾಗೂ 20ರಂದು ನಡೆಸಲಾದ ವಿಶೇಷ ಆಂದೋಲನ ಹಿನ್ನೆಲೆಯಲ್ಲಿ 18 ರಿಂದ 19 ವಯೋಮಾನದ 8404 ಮತ್ತು 20 ವರ್ಷ ಮೇಲ್ಪಟ್ಟ 4279 ಒಟ್ಟು 12683 ನಮೂನೆ-6 ಸ್ವೀಕೃತವಾಗಿದ್ದು, ಒಟ್ಟು 6591 ನಮೂನೆ-7 ಮತ್ತು 2511 ನಮೂನೆ-8 ಸ್ವೀಕೃತಗೊಂಡಿರುತ್ತವೆ. ಜಿಲ್ಲೆಯಲ್ಲಿ ಒಟ್ಟು 26948 ವಿಶೇಷಚೇತನ ಮತದಾರರಿರುತ್ತಾರೆ ಎಂದು ತಿಳಿಸಿದರು.
ಮಾಧ್ಯಮಗಳ ಮೂಲಕ ಡಿಇಓ, ಇಆರ್‍ಓ ಮತ್ತು ಎಇಆರ್‍ಓಗಳು ವೋಟರ್ ಹೆಲ್ಫ್‍ಲೈನ್ ಆಪ್ ಕುರಿತು ವ್ಯಾಪಕ ಪ್ರಚಾರ ನೀಡಿದ್ದು, ಬಿಎಲ್‍ಓ ಮತ್ತು ಬಿಎಲ್‍ಓ ಸೂಪರ್‍ವೈಸರ್‍ಗಳ ಮೂಲಕ ಆನ್‍ಲೈನ್ ಮೂಲಕ ನಮೂನೆಗಳನ್ನು ಭರ್ತಿ ಮಾಡುವ ಕುರಿತು ಮತದಾರರಿಗೆ ಅರಿವು ಮೂಡಿಸಲಾಗಿದೆ. ರಾಜಕೀಯ ಪಕ್ಷಗಳ ಸಭೆಗಳನ್ನು ಕರೆದು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಜಾಗೃತಿ ಮೂಡಿಸುವಂತೆ ಕೋರಲಾಗಿದೆ ಮತ್ತು ಪ್ರತಿವಾರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ. ಸ್ವೀಪ್ ಚಟುವಟಿಕೆಗಳ ಮೂಲಕ ಪಿಯು ಮತ್ತು ಡಿಗ್ರಿ ಕಾಲೇಜುಗಳಲ್ಲಿ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಕುರಿತು ಅರಿವು ಮೂಡಿಸಲಾಗಿದೆ. ಜಿಲ್ಲಾಡಳಿತದ ವತಿಯಿಂದ ಜಾಥಾವನ್ನೂ ಸಹ ಕೈಗೊಳ್ಳಲಾಗಿದೆ, ಒಟ್ಟು 2683 ಮತಗಟ್ಟೆಗಳಲ್ಲಿ 2683 ಬಿಎಲ್‍ಓಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್, ಕಲ್ಪಶ್ರೀ, ರಿಷಿ ಆನಂದ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

(Visited 9 times, 1 visits today)
tumkur
Previous Articleಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ
Next Article ಭಾರತೀಯ ಚೆಸ್ ಆಟ ಬ್ರಿಟಿಷರ ಮೂಲಕ ವಿಶ್ವಕ್ಕೆ ಪರಿಚಯ : ಜಪಾನಂದಜೀ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.