BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿ.15, 16 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಇತರೆ ಸುದ್ಧಿಗಳು

ಡಿ.15, 16 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

By News Desk BenkiyabaleUpdated:December 06, 2022 4:25 pm

ತುಮಕೂರು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆಯಲಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಾಹಿತ್ಯ ಮತ್ತು ಸಾಂಸ್ಕøತಿಕ ಜಾತ್ರೆಯಾದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಟಿಯಿಂದ ಸಮ್ಮೇಳನದಲ್ಲಿ ಕನ್ನಡ ನಾಡು-ನುಡಿ ಕುರಿತು ಉತ್ತಮ ಕವಿಗೋಷ್ಠಿ, ಸಂವಾದ, ವಿಶೇಷ ಉಪನ್ಯಾಸ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಆಯಾಮಗಳು, ಸಾಹಿತ್ಯ ಪರಂಪರೆ, ಸಾಂಸ್ಕøತಿಕ ಪರಂಪರೆ, ಜಾನಪದ ಕಲಾ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಜರುಗುವ ಗಾಜಿನಮನೆ ಸೇರಿದಂತೆ ಸುತ್ತಮುತ್ತ ಸ್ವಚ್ಛಗೊಳಿಸಿ ಸಮ್ಮೇಳನಕ್ಕಾಗಮಿಸುವವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕೆಂದು ಪಾಲಿಕೆಗೆ ಸೂಚನೆ ನೀಡಿದರು. ವೇದಿಕೆ ಹಾಗೂ ಸಭಾಂಗಣವನ್ನು ಸಜ್ಜುಗೊಳಿಸುವ ಜವಾಬ್ದಾರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತು ಕರಪತ್ರ, ಪ್ರಶಸ್ತಿಪತ್ರ, ಆಹ್ವಾನಪತ್ರಿಕೆ, ನೆನಪಿನ ಕಾಣಿಕೆಗಳ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಹಾಗೂ ಕಲಾ ತಂಡಗಳಿಂದ ಕಲಾಪ್ರದರ್ಶನದ ವ್ಯವಸ್ಥೆಯ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ವಹಿಸಿದರು.
ಸಮ್ಮೇಳನದ ಪ್ರಯುಕ್ತ ಸ್ತ್ರೀಶಕ್ತಿ ಸಂಘ, ಸ್ವ-ಸಹಾಯ ಸಂಘಗಳಿಂದ ಕರಕುಶಲ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಮೇಳ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಸಮ್ಮೇಳನ ದಿನಗಳಂದು ದಾಸೋಹ ವ್ಯವಸ್ಥೆಯ ಜವಾಬ್ದಾರಿಯನ್ನು ಶಾಸಕ ಜಿ.ಬಿ. ಜ್ಯೋತಿಗಣೇಶ್ ವಹಿಸಿಕೊಂಡು ಮಾತನಾಡುತ್ತಾ ಸಮ್ಮೇಳನ ದಿನಗಳಂದು ನಗರವನ್ನು ಅಲಂಕರಿಸಬೇಕು. ಜಿಲ್ಲೆಯ ಸಾಹಿತ್ಯ ಮತ್ತು ಸಂಸ್ಕøತಿಯ ಮೌಲ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುವ ಸಮ್ಮೇಳನವಾಗಬೇಕೆಂದು ಆಶಿಸಿದರು.
ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ರವೀಶ್ ಹಾಗೂ ಕಲಾವಿದ ಮನುಚಕ್ರವರ್ತಿ ಅವರು ವಿನ್ಯಾಸಗೊಳಿಸರುವ ಸಮ್ಮೇಳನದ ಲೋಗೋ(ಲಾಂಛನ) ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಟೂಡಾ ಅಧ್ಯಕ್ಷೆ ಹೆಚ್.ಜಿ. ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ರಾಣಿ ಸತೀಶ್, ಮಲ್ಲಿಕಾರ್ಜುನ ಕೆಂಕೆರೆ, ಟೂಡಾ ಆಯುಕ್ತ ಗೋಪಾಲ್ ಜಾದವ್, ಪಾಲಿಕೆ ಉಪ ಆಯುಕ್ತ(ಆಡಳಿತ) ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)
tumkur Tumkur dc yspatil
Previous Articleಮತದಾರರ ಪಟ್ಟಿ ಸೇರ್ಪಡೆಯ ಮಾಹಿತಿ ನೀಡಲು ಡಿಸಿ ಸೂಚನೆ
Next Article ಸುರೇಶ್‍ಗೌಡರ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಮುಖ್ಯಮಂತ್ರಿ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.