BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್ ಆರಂಭ
ಇತರೆ ಸುದ್ಧಿಗಳು

ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್ ಆರಂಭ

By News Desk BenkiyabaleUpdated:December 15, 2022 4:36 pm

ತುಮಕೂರು


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ್ ರವರು ನಗರ ಹಾಗೂ ಪಟ್ಟಣ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ‘ನಮ್ಮ ಕ್ಲಿನಿಕ್’ಗಳನ್ನು ರಾಜ್ಯದಾದ್ಯಂತ ಆರಂಭಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮೇಳೆಕೋಟೆ ಮುಖ್ಯರಸ್ತೆ ಹಾಗೂ ಮರಳೂರು ದಿಣ್ಣೆ ಮುಖ್ಯ ರಸ್ತೆಯಲ್ಲಿ ಆಯೋಜಿಸಿದ್ದ ‘ನಮ್ಮ ಕ್ಲಿನಿಕ್’ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಠಿಯಿಂದ ಆರೋಗ್ಯ ಕ್ಷೇತ್ರಕ್ಕಾಗಿ ನೀಡುವ ಅನುದಾನವನ್ನು ಆರ್ಥಿಕ ವರ್ಷ 2021-22 ರಿಂದ 2025-26ನೇ ಸಾಲಿನವರೆಗೆ ಐದು ವರ್ಷಗಳ ಅವಧಿಗೆ ಹಂಚಿಕೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2022-23ನೇ ಸಾಲಿನ ಆಯವ್ಯಯದಲ್ಲಿ ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಗರ ಪ್ರದೇಶದ ವ್ಯಾಪ್ತಿಯಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಲು ಯೋಜನೆ ರೂಪಿಸಿ, ಮೊದಲ ಹಂತದಲ್ಲಿ 114 ಕ್ಲಿನಿಕ್‍ಗಳು ಏಕ ಕಾಲಕ್ಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಖ್ಯಮಂತ್ರಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ ಎಂದರು.
“ನಮ್ಮ ಕ್ಲಿನಿಕ್”ಗಳು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ, ದುರ್ಬಲ ವರ್ಗ, ಕೊಳಗೇರಿ ಮತ್ತು ವಲಸೆ ಬರುವ ಜನರಿಗೆ ಉತ್ತಮ ಗುಣಮಟ್ಟದ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲಿವೆ, ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ನಿರಂತರ ಆರೋಗ್ಯ ಪಾಲನೆಯನ್ನು ಖಾತ್ರಿಪಡಿಸುವ ಮತ್ತು ಆರೋಗ್ಯ ಸೇವೆಗಳನ್ನು ಪಡೆಯಲು ತಗಲುವ ವೆಚ್ಚವನ್ನು ಕಡಿಮೆಗೊಳಿಸಲು ಸಹಕಾರಿಯಾಗಲಿದ್ದು, ತುಮಕೂರು ನಗರದಲ್ಲಿ ಬಡ ಜನರು, ಬೀದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಡ ಜನರು ವಾಸಿಸುವ ಪ್ರದೇಶಕ್ಕೆ ಸಮೀಪದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ಸಿಗಬೇಕು, ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸಲು, ಕಡು ಬಡವರಿಗಾಗಿ ದುರ್ಬಲ ಪ್ರದೇಶಗಳಿಗೆ ಆದ್ಯತೆ ನೀಡಿ ಈಗಾಗಲೇ ಕಾರ್ಯನಿರ್ವನಿರ್ವಹಿಸುತ್ತಿರುವ ನಗರ ಪ್ರಾಥಮಿಕ ಆರೋಗ್ಯ ಕೆಂದ್ರಗಳ ಜೊತೆಯಲ್ಲಿ, “ನಮ್ಮ ಕ್ಲಿನಿಕ್”ಗಳನ್ನು 30000 ಜನಸಂಖ್ಯೆಗೆ ಒಂದರಂತೆ ಸ್ಥಾಪಿಸಲಾಗುತ್ತಿದೆ ಅದರಂತೆ ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್‍ಗಳನ್ನು ಮರಳೂರು ದಿಣ್ಣೆ, ಮೇಳೆಕೋಟೆ .ಜಯಪುರ ಅಂಗನವಾಡಿ, ದೇವರಾಯನ ಪಟ್ಟಣದ ಸಮುದಾಯ ಭವನ, ದಿಬ್ಬೂರು ಅಂಗನವಾಡಿ, ಸತ್ಯಮಂಗಲ ಸಮುದಾಯ ಭವನ (ಒಟ್ಟು 07 ತುಮಕೂರು ನಗರದಲ್ಲಿ) ಹಾಗೂ ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತಲಾ ಒಂದು ನಮ್ಮ ಕ್ಲಿನಿಕ್‍ಗಳನ್ನು ತೆರೆಯಲಾಗುತ್ತಿದೆ, ಆರಂಭಿಕ ಹಂತದಲ್ಲಿ ಜಿಲ್ಲೆಯಲ್ಲಿ ಇಂದು 02 ಕ್ಲಿನಿಕ್‍ಗಳನ್ನು ನಗರದಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೆಲವೇ ವಾರಗಳಲ್ಲಿ ಉಳಿದ ನಮ್ಮ ಕ್ಲಿನಿಕ್‍ಗಳು ಜನರ ಸೇವೆಗೆ ಲಭ್ಯವಿರಲಿವೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್ ಡಿ.ಎನ್. ಮಾತನಾಡಿ, ನಗರ ಪ್ರದೇಶಗಳ ಬಡ ಜನತೆಗೆ ನಮ್ಮ ಕ್ಲಿನಿಕ್‍ಗಳು 12 ಆರೋಗ್ಯ ಸೇವೆಗಳ ಮೂಲಕ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು, ನಿರಂತರ ಆರೈಕೆಯನ್ನು ನೀಡುವ ನಿಟ್ಟಿನಲ್ಲಿ ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಕೇಂದ್ರಗಳಿಗೆ ರೆಫರಲ್ ಸೇವೆಗಳನ್ನು ಒದಗಿಸುವ ಮೂಲಕ, ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸುಧಾರಿಸಲು, ಸೂಕ್ತವಾದ ಕಾರ್ಯವಿಧಾನಗಳನ್ನು ಬಲಪಡಿಸಲು ಹಾಗೂ ಸಮುದಾಯದ ಸಹಭಾಗಿತ್ವವನ್ನು ಉತ್ತೇಜಿಸುವಲ್ಲಿ ಸಹಾಯಕಾರಿಯಾಗಲಿವೆ, ನಮ್ಮ ಕ್ಲಿನಿಕ್ 1000 ಚದರ ಅಡಿ ವಿಸ್ತೀರ್ಣ ಹೊಂದಿದ್ದು, ಇಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ ಕೂಠಡಿ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಛೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿದ್ದು ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಿ ನಮ್ಮ ಕ್ಲಿನಿಕ್‍ಗೆ ಒಳಂಗಾಣ ಹಾಗೂ ಹೊರಾಂಗಾಣ ವಿನ್ಯಾಸ ಮಾಡಿಸಲಾಗಿದೆ, ನಮ್ಮ ಕ್ಲಿನಿಕ್ ಗಳಲ್ಲಿ ಒಬ್ಬರು ವೈದ್ಯಾಧಿಕಾರಿ, ಒಬ್ಬರು ಶುಶ್ರೂಷಕರು, ತಲಾ ಒಬ್ಬೊಬ್ಬ ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಕಿರಿಯ ದರ್ಜೆ ಸಹಾಯಕರು, ಒಬ್ಬರು ಡಿ ದರ್ಜೇ ನೌಕರರು ಕಾರ್ಯನಿರ್ವಹಿಸಲಿದ್ದಾರೆ, ಹಾಗೂ ಅಗತ್ಯ ಮಾನವ ಸಂಪನ್ಮೂಲವನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಜನರು ಎಲ್ಲ ರೋಗಗಳ ತಪಾಸಣೆಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು, ಜಿಲ್ಲಾಸ್ಪತ್ರೆಗೆ ಹೋಗಬೇಕಾಗಿಲ್ಲ. ಈ ಕ್ಲಿನಿಕ್‍ಗಳಿಂದಾಗಿ ಆ ಸಮಸ್ಯೆ ತಪ್ಪಲಿದೆ. ಬೇರೆ ಆಸ್ಪತ್ರೆಗಳಲ್ಲಿ ದೊಡ್ಡ ಆರೋಗ್ಯ ಸಮಸ್ಯೆಗಳ ನಿವಾರಣೆ ಕಡೆಗೆ ಹೆಚ್ಚು ಗಮನ ನೀಡಲು ಸಾಧ್ಯವಾಗಲಿದೆ. ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 9 ರಿಂದ ಸಂಜೆ 4.30ರ ತನಕ ನಮ್ಮ ಕ್ಲಿನಿಕ್ ತೆರೆದಿರುತ್ತವೆ. ಭಾನುವಾರ ರಜೆ ಇರಲಿದೆ, ಇವು ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸಲಿವೆ, ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಾ, ಸಾಂಕ್ರಾಮಿಕರೋಗ ಉಲ್ಬಣ ಪರಿಸ್ಥಿತಿಯನ್ನು ತ್ವರಿತಗತಿಯಲ್ಲಿ ದಾಖಲಿಸುವ ವ್ಯವಸ್ಥೆಯನ್ನು ಹೊಂದಿದೆ. ಇದರಿಂದ ಆರೋಗ್ಯ ಸಂವರ್ಧನೆ ಹಾಗೂ ಕ್ಷೇಮ ಚಟುವಟಿಕೆಗಳ ಮೂಲಕ ಗಂಡಾಂತರಕಾರಿ ಪರಿಸ್ಥಿಗಳನ್ನು ನಿವಾರಿಸುವುದಾಗಿದೆ ಎಂದರು.
ಮಹಾನಗರ ಪಾಲಿಕೆಯ ಮಹಾಪೌರಾದ ಪ್ರಭಾವತಿ ಸುದೀಶ್ ಮಾತನಾಡಿ ಸಾರ್ವಜನಿಕರು ನಮ್ಮ ಕ್ಲಿನಿಕ್‍ಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಮಹಾನಗರ ಪಾಲಿಕೆಯ ಉಪ ಮಹಾಪೌರಾದ ನರಸಿಂಹಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೇಶವ ರಾಜ್ ಜಿ. ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಮ್ಮ ಕ್ಲಿನಿಕ್‍ಗಳಲ್ಲಿ ಲಭ್ಯ ಸೇವೆಗಳು:
ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ, ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು ಸಾರ್ವತ್ರಿಕ ಲಸಿಕಾ ಸೇವೆಗಳು, ಕುಟುಂಬ ಕಲ್ಯಾಣ ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೈಕೆ ಕೇಂದ್ರಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರ ರೋಗಿ ಸೇವೆಗಳು, ಸಾಂಕ್ರಾಮಿಕ ಟಿ.ಬಿ., ಕುಷ್ಟ ರೋಗ ಇತ್ಯಾದಿ ಮತ್ತು ಅಸಾಂಕ್ರಾಮಿಕ ರೋಗಗಳ ಮಧುಮೇಹ ದೀರ್ಘಾವಧಿ ಶ್ವಾಸಕೋಶ ಕಾಯಿಲೆ, ಕೀಲು ನೋವು ಮತ್ತು ಸಂಧಿವಾತ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್, ಸ್ಕ್ರೀನಿಂಗ್, ತಡೆಗಟ್ಟುವಿಕೆ ಮತ್ತು ನಿರ್ವಹಣೆ, ಮೂಲಭೂತ ಬಾಯಿ ಆರೋಗ್ಯ ಸೇವೆಗಳು, ಮೂಲಭೂತ ನೇತ್ರ ಹಾಗೂ ಕಿವಿ, ಮೂಗು, ಗಂಟಲು ಆರೋಗ್ಯ ಆರೈಕೆ ಸೇವೆಗಳು, ಮಾನಸಿಕ ಆರೋಗ್ಯದ ಮೂಲಭೂತ ಸ್ಕ್ರೀನಿಂಗ್ ಸೇವೆಗಳು, ಮೂಲಭೂತ ವೃದ್ದಾಪ್ಯ ಆರೈಕೆ ಮತ್ತು ಉಪಶಮನಕಾರಿ ಆರೈಕೆ ಸೇವೆಗಳು, ಸುಟ್ಟ ಗಾಯಗಳು, ಅಪಘಾತ, ಮತ್ತಿತರ ಗಾಯಗಳು ಸೇರಿದಂತೆ ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ, ಉಚಿತ ಪ್ರಯೋಗಶಾಲಾ ಸೇವೆಗಳು ರಕ್ತ ಹೀನತೆ, ಸಕ್ಕರೆ ಕಾಯಿಲೆ, ಮೂತ್ರ ಪರೀಕ್ಷೆ, ಕ್ಷಯ ಪರೀಕ್ಷೆ, ಡೆಂಗಿ, ಮಲೇರಿಯಾದಂತಹ ಕನಿಷ್ಠ 14 ಪರೀಕ್ಷೆಗಳ ಸೇವೆಯನ್ನು ನೀಡಲಾಗುತ್ತದೆ.

(Visited 1 times, 1 visits today)
tumkur
Previous Articleಡಿ.23,24 : ಸಾಂಸ್ಕøತಿಕ ಸ್ಪರ್ಧೆಗಳು
Next Article ಅಭಾ ಯೋಜನೆಯಡಿ ಎಲ್ಲರಿಗೂ ಆರೋಗ್ಯ ಸೇವೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.