BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಾಸೋಹ ದಿನಾಚರಣೆ, ವಿಜಯ ಸಂಕಲ್ಪ ಅಭಿಯಾನ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಸಿಎಂ ಚಾಲನೆ
ಇತರೆ ಸುದ್ಧಿಗಳು

ದಾಸೋಹ ದಿನಾಚರಣೆ, ವಿಜಯ ಸಂಕಲ್ಪ ಅಭಿಯಾನ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಸಿಎಂ ಚಾಲನೆ

By News Desk BenkiyabaleUpdated:January 21, 2023 5:17 pm

ತುಮಕೂರು


ಚುನಾವಣೆಗೂ ಮುನ್ನ ರಾಜ್ಯದ ನಾಲ್ಕು ಮೂಲೆಗಳಿಂದಲೂ ಯಾತ್ರೆ ನಡೆಸಿ, ಜನಾಭಿಪ್ರಾಯ ಸಂಗ್ರಹಿಸಿ, ಆದರ ಆಧಾರದಲ್ಲಿ ಪಕ್ಷದ ಪ್ರಾಣಾಳಿಕೆ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದ ತುಮಕೂರು ವಿವಿ ಮುಂಭಾಗದ ಬಾಯರ್ಸ್ ಕಾಫಿ ಶಾಫ್ ಬಳಿ ತುಮಕೂರು ನಗರ ಬಿಜೆಪಿ ಮಂಡಲವತಿಯಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,9 ದಿನಗಳ ಈ ವಿಜಯ ಸಂಕಲ್ಪ ಅಭಿಯಾನದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಹೊಸ ಸದಸ್ಯರ ಸೇರ್ಪಡೆಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಕಾರ್ಯಕರ್ತರಿಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾರವರು ಒಂದು ಕಡೆ, ನಾನು ತುಮಕೂರಿನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ.ಮಿಸ್ ಕಾಲ್ ಕೊಡುವ ಮೂಲಕ ಜನರು ಪಕ್ಷದ ಸದಸ್ಯರಾಗಿ ನೊಂದಾವಣೆಯಾಗುವಂತೆ ಎಲ್ಲಾ ಕಾರ್ಯಕರ್ತರು ಜನರ ಮನವೊಲಿಸಬೇಕು.ಸದಸ್ಯರಾದವರ ಮನೆಗೆ ಸ್ಟಿಕರ್ ಅಂಟಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಸಂಘಟನೆಯ ಬಲದಿಂದ ಮುಂದಿನ ಚುನಾವಣೆಯನ್ನು ಎದುರಿಸಲು ಕಾರ್ಯಕರ್ತರು ಸನ್ನದ್ದರಾಗುವಂತೆ ಮುಖ್ಯಮಂತ್ರಿ ಬಸರಾಜು ಬೊಮ್ಮಾಯಿ ನುಡಿದರು.
ಜನಸಾಮಾನ್ಯರ ಕಷ್ಟ ಸುಖಃಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವ ನಮ್ಮ ಸರಕಾರ ಎಲ್ಲಾ ಮಹಿಳಾ ವರ್ಗವÀನ್ನು ಗಮನದಲ್ಲಿಟ್ಟುಕೊಂಡು ಶೌಚಾಲಯಗಳನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಿದೆ.ಬೀದಿ ಬದಿ ವ್ಯಾಪಾರಿಗಳಿಗೆ ಐದು ಲಕ್ಷ ರೂ ಸಾಲ,ಕೂಲಿ ಕಾರ್ಮಿಕರಿಗೆ ವಿಶೇಷ ಒತ್ತು ನೀಡುವುದರ ಜೊತೆಗೆ,ದಿನದಲಿತರಿಗಾಗಿ ನೂರು ಹಾಸ್ಟೆಲ್‍ಗಳು, ಅಲ್ಪಸಂಖ್ಯಾತರ ಹಾಸ್ಟೆಲ್ ನಿರ್ಮಾಣ, 5 ಲಕ್ಷ ಮಹಿಳೆಯರು,5ಲಕ್ಷ ಯುವಕರಿಗೆ ಉದ್ಯೋಗಗಳನ್ನು ಕೊಡುವ ಕೆಲಸ ವನ್ನು ಮಾಡಲು ಮುಂದಾಗಿದೆ.ಪ್ರತಿಯೊಂದು ಗ್ರಾಮದಲ್ಲಿ ಶ್ರೀಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗ ಮಾಡುವ ಅವಕಾಶ ಕಲ್ಪಿಸಲಾಗಿದೆ. ಬಡವರಿಗಾಗಿ ಐದು ಲಕ್ಷ ಮನೆ ನಿರ್ಮಾಣಕ್ಕೆ ಮುಂದಾಗಿದ್ದು,ಇದರಲ್ಲಿ ಒಂದು ಲಕ್ಷ ಮನೆಗಳನ್ನು ನಗರದಲ್ಲಿ ವಾಸವಾಗಿರುವ ಬಡವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭರವಸೆ ನೀಡಿದರು.
ತುಮಕೂರು ನಗರ ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತರಾಜು ಮಾತನಾಡಿ,ತುಮಕೂರು ನಗರದಲ್ಲಿ 26ನೇ ವಾರ್ಡಿನ 157ನೇ ಬೂತ್‍ನಲ್ಲಿ ಬೂತ್ ಸಂಪರ್ಕ ಅಭಿಯಾನಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ.9ದಿನಗಳ ಈ ಅಭಿಯಾನ ದಲ್ಲಿ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಜಾರಿ ಮಾಡಿರುವ ಕಾರ್ಯಕ್ರಮಗಳನ್ನು ತಿಳಿಸುವುದರ ಜೊತೆಗೆ,ಪಕ್ಷದ ಸದಸ್ಯರಾಗಲು ಇಚ್ಚೆಯುಳ್ಳವರ ಮೊಬೈಲ್‍ನಿಂದ ಪಕ್ಷದ ವತಿಯಿಂದ ನೀಡಿರುವ ಮೊಬೈಲ್ ನಂಬರ್‍ಗೆ ಮಿಸ್‍ಕಾಲ್ ನೀಡುವ ಮೂಲಕ ಸದಸ್ಯರನ್ನಾಗಿ ನೊಂದಾಯಿಸುವುದು. ಸದಸ್ಯರ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವುದು. ಗೋಡೆ ಬರಹ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಪಕ್ಷದ ನೀಡಿದೆ. ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟುವ ಕೆಲಸವನ್ನು ನಾವೆಲ್ಲರು ಮಾಡಲಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಹಾಲಪ್ಪ ಆಚಾರ್,ಸಂಸದ ಜಿ.ಎಸ್.ಬಸವರಾಜು,ಶಾಸಕರಾದ ರಾಜೇಶ್‍ಗೌಡ, ಮಸಾಲೆ ಜಯರಾಂ,ಜೋತಿಗಣೇಶ್,ಎಂ.ಎಲ್.ಸಿ. ಹಾಗೂ ಜಿಲ್ಲಾ ಉಸ್ತುವಾರಿ ನವೀನ್,ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್,ಉಪಾಧ್ಯಕ್ಷರಾದ ವೈ.ಹೆಚ್.ಹುಚ್ಚಯ್ಯ,ಮಾಜಿ ಎಂ.ಎಲ್.ಸಿ ಡಾ.ಹುಲಿನಾಯಕರ್,ನಗರಪಾಲಿಕೆ 26ನೇ ವಾರ್ಡಿನ ಕೌನ್ಸಿಲರ್ ಮಲ್ಲಿಕಾರ್ಜುನಯ್ಯ ,ತುಮಕೂರು ನಗರ ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 10 times, 1 visits today)
tumkur Tumkur dc yspatil
Previous Articleವಲ್ನರೆಬಲ್ ಮ್ಯಾಪಿಂಗ್ ತರಬೇತಿ
Next Article ಅಮೀಷಗಳಿಗೆ ಬಲಿಯಾಗಿ ಮತ ಚಲಾಯಿಸದಿರಿ : ನ್ಯಾ.ನೂರುನ್ನಿಸಾ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.