BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಚಿವರ ಹೇಳಿಕೆಗೆ ಖಂಡನೆ
ಇತರೆ ಸುದ್ಧಿಗಳು

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಚಿವರ ಹೇಳಿಕೆಗೆ ಖಂಡನೆ

By News Desk BenkiyabaleUpdated:February 20, 2023 3:57 pm
????????????????????????????????????

ತುಮಕೂರು

ರಾಜ್ಯದಲ್ಲಿ 2013 ರಿಂದ 2018ರವರಗೆ ಯಾವುದೇ ಕಳಂಕವಿಲ್ಲದೆ, ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ನೀಡಿ, ಸರಕಾರದ ಸವಲತ್ತುಗಳು ದೊರೆಯುವಂತೆ ಮಾಡಿದ ಸಿದ್ದರಾಮಯ್ಯ ಅವರನ್ನು ಟಿಪ್ಪುವನ್ನು ಕೊಂದ ಹಾಗೆ ಕೊಲ್ಲಬೇಕು ಎಂಬ ಹೇಳಿಕೆ ನೀಡಿರುವ ಸಚಿವ ಡಾ.ಆಶ್ವಥನಾರಾಯಣ ಅವರನ್ನು ಬಂಧಿಸದೆ, ಸಚಿವ ಸಂಪುಟದಿಂದ ವಜಾ ಮಾಡದೇ ಇರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ತುಮಕೂರು ನಗರ ಮತ್ತು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಕಾರ್ಮಿಕ ಘಟಕದ ಪದಾಧಿಕಾರಿಗಳು ಮತ್ತು ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯಪಾಲರು ನಿಜವಾಗಿಯೂ ಸಂವಿಧಾನದತ್ತವಾಗಿ ನಡೆದುಕೊಂಡಿದ್ದರೆ,ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕಾಗಿತ್ತು.ಆದರೆ ದುರ್ದೈವ,ಇಂದಿಗೂ ಅವರು ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದರು.
ಕೇಂದ್ರ ಸರಕಾರದ ಕಳೆದ 9 ವರ್ಷಗಳ ಆಡಳಿತದಲ್ಲಿ ರೈತರು,ಕಾರ್ಮಿಕರು,ಬಡವರು ಭ್ರಮ ನಿರಶನಗೊಂಡಿದ್ದಾರೆ.ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕಾರ್ಮಿಕರ ಪರವಾಗಿ ತಂದಿದ್ದ 44 ಕಾಯ್ದೆಗಳನ್ನು,4 ಸಂಹಿತೆಗಳಾಗಿ ಬದಲಾಯಿಸಿ, ಉದ್ದಿಮೆದಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಇಂದಿನ ಪ್ರಧಾನಿ ನರೇಂದ್ರಮೋದಿ.ಜಿ.ಎಸ್.ಟಿ,ನೋಟು ಅಮಾನೀಕ ರಣದ ಫಲವಾಗಿ ದೇಶದಲ್ಲಿ 14 ಕೋಟಿಯಷ್ಟು ಉದ್ಯೋಗ ನಷ್ಟವಾಗಿದ್ದು,18 ಲಕ್ಷ ಸಣ್ಣ ಸಣ್ಣ ಉದ್ದಿಮೆಗಳು ಬಾಗಿಲು ಹಾಕಿವೆ.ಇದರ ಫಲವಾಗಿ ನಿರುದ್ಯೋಗ ಹೆಚ್ಚಾಗಿ, ಜನರು ಬದುಕದಂತಹ ಸ್ಥಿತಿ ನಿರ್ಮಾಣವಾಗಿದೆ.ಅಗತ್ಯ ವಸ್ತುಗಳ ಬೆಲೆಗಳ ಹೆಚ್ಚಳದಿಂದ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಸರಕಾರ ಮಾತ್ರ ಜನರ ಹೆಸರಿನಲ್ಲಿ 100 ಲಕ್ಷ ಕೋಟಿ ಸಾಲ ಮಾಡಿ,ಜನರನ್ನು ಸಾಲದ ಶೂಲಕ್ಕೆ ತಳ್ಳಿದೆ. ಇದರಿಂದ ಜನರು ಹೊರಬರಬೇಕಾದರೆ ಕಾರ್ಮಿಕರು, ರೈತರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಅಮಿಷಗಳಿಗೆ ಬಲಿಯಾಗದೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು.ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್‍ನ ಕಾರ್ಮಿಕ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಪುಟ್ಟಸ್ವಾಮಿಗೌಡ ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ,ವೇದೋಪನಿಷತ್ ಕಾಲದಿಂದಲೂ ಶೋಷಣೆಗೆ ಒಳಗಾಗಿರುವ ಸಮುದಾಯಗಳೆಂದರೆ ಕಾರ್ಮಿಕರು,ನಮ್ಮ ಬೆವರಿನ ಶ್ರಮದಲ್ಲಿ ದೊಡ್ಡ ಉದ್ದಿಮೆಗಳನ್ನು ಸ್ಥಾಪಿಸಿ,ಶೋಷಣೆ ಮಾಡುತಿದ್ದಾರೆ.ಇಂತಹವರಿಗೆ ಬುದ್ದಿ ಕಲಿಸಬೇಕೆಂದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು.ಕಾರ್ಮಿಕರಿಲ್ಲದೆ ಯಾವುದೇ ಅಭಿವೃದ್ದಿ ಸಾಧ್ಯವಿಲ್ಲ.ಇದನ್ನು ಅರ್ಥ ಮಾಡಿಕೊಂಡು, ಪ್ರತಿಯೊಬ್ಬರು ತಮ್ಮ ವಿರೋಧಿಯಾಗಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ದ ಮತ ಚಲಾಯಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಹೆಚ್ಚಿನ ಅನುಕೂಲಗಳನ್ನು ಪಡೆಯಬಹುದೆಂದರು.
ಕಾರ್ಯಕ್ರಮದಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಗಳಾದ ಅತೀಕ್ ಅಹಮದ್, ಇಕ್ಬಾಲ್ ಅಹಮದ್, ಹೆಚ್.ಸಿ.ಹನುಮಂತಯ್ಯ,ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಟಿಕೇಟ್ ಆಕಾಂಕ್ಷಿಗಳಾದ ಸೂರ್ಯ ಮುಕುಂದರಾಜ್,ಶ್ರೀನಿವಾಸ್,ಕೆಪಿಸಿಸಿಯ ತುಮಕೂರು ನಗರ ಉಸ್ತುವಾರಿ ಕೇಶವಮೂರ್ತಿ ಅವರುಗಳು ಸಭೆಯನ್ನು ಕುರಿತು ಮಾತನಾಡಿದರು. ವೇದಿಕೆಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿಗಳಾದ ಶ್ರೀಕಾಂತ್,ರಾಜಣ್ಣ ಕಾರ್ಯದರ್ಶಿ,ಪ್ರಧಾನ ಕಾರ್ಯದರ್ಶಿಗಳಾದ ಕೆ.ಜಿ.ವೆಂಕಟೇಶ್,ಸೈಯದ್ ದಾದಾಪೀರ್,ಆನಂದ್,ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್, ತುಮಕೂರು ಜಿಲ್ಲಾಧ್ಯಕ್ಷ ಅಬ್ದುಲ್ ರಹೀಂ,ಉಪಾಧ್ಯಕ್ಷ ಮಂಜೂರು ಪಾಷ್, ಭಾಗ್ಯ, ಭವ್ಯ, ಲಕ್ಷ್ಮಿದೇವಮ್ಮ, ಹನುಮಂತು,ನಯಾಜ್, ಜಬಿವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಕಳಚಿತು ಚಂದನವನದ ಹಿರಿಯ ಕೊಂಡಿ : ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ
Next Article ನಗರದ ಅಧಿಕೃತ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್
News Desk Benkiyabale

Related Posts

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm news

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news
ತಾಜಾ ಸುದ್ಧಿಗಳು

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
Our Youtube Channel
Our Picks

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಿದ್ದೆಗೆ ಜಾರಿದ ಕಂದಾಯ ಇಲಾಖೆ

By News Desk BenkiyabaleJune 18, 2026 4:44 pm

ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ…

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.