BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗೈರು ಹಾಜರಾಗದೆ ಚುನಾವಣಾ ಕರ್ತವ್ಯ ನಿರ್ವಹಿಸಿ
ಇತರೆ ಸುದ್ಧಿಗಳು

ಗೈರು ಹಾಜರಾಗದೆ ಚುನಾವಣಾ ಕರ್ತವ್ಯ ನಿರ್ವಹಿಸಿ

By News Desk BenkiyabaleUpdated:March 06, 2023 5:42 pm

ತುಮಕೂರು


ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಸ್ಟ್ಯಾಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ‘ಚುನಾವಣಾ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 11 ವಿಧಾನಸಭಾ ಕ್ಷೇತ್ರಗಳ ಪೈಕಿ 2683 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ಜರುಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದಾಗ ವಾಸ್ತವಾಂಶ ಅರಿತು ಯಾರಿಗೂ ಹೆದರದೆ ಪ್ರಕರಣಗಳನ್ನು ದಾಖಲಿಸಬೇಕು. ಯಾರ ಪರವಾಗಿಯೂ/ ವಿರೋಧವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರವಾಡ್ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರಲ್ಲದೆ, ಜಿಲ್ಲೆಯು ಉತ್ತಮ ಚುನಾವಣಾ ತಂಡವನ್ನು ಹೊಂದಿದ್ದು, ಅಧಿಕಾರಿಗಳು ಸಮನ್ವಯತೆ ಹಾಗೂ ಜಾಗರೂಕತೆಯಿಂದ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಜಿಲ್ಲಾ ಚುನಾವಣಾಧಿಕಾರಿಗಳ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಪಕ್ಷದ ಅಭ್ಯರ್ಥಿಗಳು ಮತದಾರರಿಗೆ ಹಣ, ಮದ್ಯ, ಆಮಿಷಗಳನ್ನು ಒಡ್ಡುವುದು ಸೇರಿದಂತೆ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ವಿಡಿಯೋ ಚಿತ್ರೀಕರಿಸಿ ಪೊಲೀಸ್ ಇಲಾಖೆಗೆ ಪ್ರಕರಣ ದಾಖಲಿಸಲು ಅಧಿಕಾರಿಗಳು ಮಾಹಿತಿ ಒದಗಿಸಬೇಕು. ಚುನಾವಣಾ ಅಕ್ರಮಗಳ ಬಗ್ಗೆ ಪ್ರಕರಣ ದಾಖಲಿಸುವಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಂದ ಅಡ್ಡಿಯುಂಟಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ಇಲಾಖೆಯ ಯಾವುದೇ ಸಿಬ್ಬಂದಿಗಳು ರಾಜಕೀಯ ಮಾಡದೆ ಕರ್ತವ್ಯ ನಿರ್ವಹಿಸಬೇಕು. ಪೊಲೀಸ್ ಸಿಬ್ಬಂದಿಗಳು ಚುನಾವಣೆ ಆರಂಭದಿಂದ ಅಂತ್ಯಗೊಳ್ಳುವವರೆಗೆ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸೂಚಿಸಿದರಲ್ಲದೆ, ಶಾಂತಿಯುತ ಚುನಾವಣೆ ಜರುಗುವಲ್ಲಿ ಪೊಲೀಸರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಮಾರ್ಚ್ ಮಾಹೆಯ ಯಾವುದೇ ದಿನಾಂಕದಂದು ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಇದಕ್ಕಾಗಿ ಚುನಾವಣಾ ಆಯೋಗವು 2 ತಿಂಗಳ ಹಿಂದಿನಿಂದಲೇ ಪೂರ್ವ ಸಿದ್ಧತೆಯನ್ನು ಕೈಗೊಂಡಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ತಂಡಗಳ ಜವಾಬ್ದಾರಿಗಳನ್ನು ತಿಳಿಸಿದ ಅವರು, ಎಲ್ಲಾ ತಂಡಗಳು ಚುನಾವಣಾ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ತಮ್ಮ ಜವಾಬ್ದಾರಿಗಳನ್ನು ಅರಿತು ಕಾಲಕಾಲಕ್ಕೆ ಬದಲಾಗುವ ನಿಯಮ/ ಸುತ್ತೋಲೆಗಳ ಬಗ್ಗೆ ಗಮನ ಇರಬೇಕು ಎಂದರಲ್ಲದೆ, ಅಧಿಕಾರಿಗಳು ಯಾವುದೇ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದೆಂದು ಕಿವಿಮಾತು ಹೇಳಿದರು.
ಚುನಾವಣೆಯು ಪ್ರಜಾಪ್ರಭುತ್ವದ ಅಡಿಗಲ್ಲು. ಭವಿಷ್ಯದಲ್ಲಿ ಮಕ್ಕಳಿಗೆ ಉತ್ತಮ ಸಾಮಾಜಿಕ ವಾತಾವರಣ ಕಲ್ಪಿಸಲು ನಿಷ್ಪಕ್ಷಪಾತ ಚುನಾವಣೆ ಅಗತ್ಯ ಎಂದು ತಿಳಿಸಿದರಲ್ಲದೆ, ಕೋಲಾರ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಚುನಾವಣಾ ಕರ್ತವ್ಯ ನಿರ್ವಹಿಸಿದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ, ಚುನಾವಣೆ ಸಂದರ್ಭದಲ್ಲಿ ಸಾಮಾನ್ಯವಾಗಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಚಿತ್ರಣ ನೀಡಿದರು.
ಚುನಾವಣಾ ಸಂದರ್ಭದಲ್ಲಿ ವಾಹನ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಚುನಾವಣಾ ವಿಷಯಗಳನ್ನು ಗೌಪ್ಯವಾಗಿಡಬೇಕು. ಸರ್ಕಾರಿ ನೌಕರರು ಯಾವುದೇ ರಾಜಕೀಯ ಅಭ್ಯರ್ಥಿಗಳ ಪರವಾಗಿ ಮಾತನಾಡುವುದಾಗಲಿ ಅಥವಾ ಪಕ್ಷದ ನಾಯಕರ ಜೊತೆಗೆ ಗುರುತಿಸಿಕೊಳ್ಳುವುದಾಗಲಿ ಮಾಡಬಾರದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಮಾತನಾಡಿ, ಇವಿಎಂ ಯಂತ್ರ ಬಳಸುವ ವಿಧಾನದ ಬಗ್ಗೆ ಅಧಿಕಾರಿಗಳು ತಿಳಿದುಕೊಂಡಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಗೋಪಾಲ್, ರಿಜ್ವಾನ್ ಪಾಷ, ವೇದಮೂರ್ತಿ, ಹೆಚ್.ಬಿ.ಗಂಗಾಧರ್ ಅವರು ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಕಲ್ಪಶ್ರೀ, ರಿಷಿ ಆನಂದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತೀಕ್, ಎಸ್.ಎಸ್.ಟಿ. ತಂಡ, ಎಫ್.ಎಸ್.ಟಿ. ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 2 times, 1 visits today)
Previous Articleಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳ ಹಸಿವು ನೀಗಿಸುವ ಯೋಜನೆ
Next Article ಮಹಿಳೆ ಕುಂಕುಮ ಇಟ್ಟಿಲ್ಲವೆಂದು ದೌರ್ಜನ್ಯ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.