BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕ್ಷಯ ರೋಗವನ್ನು ಕೊನೆಗಾಣಿಸಬಹುದು : ಜನಜಾಗೃತಿ ಜಾಥಾ
ಇತರೆ ಸುದ್ಧಿಗಳು

ಕ್ಷಯ ರೋಗವನ್ನು ಕೊನೆಗಾಣಿಸಬಹುದು : ಜನಜಾಗೃತಿ ಜಾಥಾ

By News Desk BenkiyabaleUpdated:March 24, 2023 4:52 pm

ತುಮಕೂರು


ವಿಶ್ವ ಕ್ಷಯರೋಗ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ಜನಜಾಗೃತಿ ಜಾಥಾ ನಡೆಸಲಾಯಿತು.
ನಗರದ ಟೌನ್‍ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಮತ್ತು ಐಎಂಎ ಅಧ್ಯಕ್ಷ ಡಾ. ಚಂದ್ರಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಡಿಹೆಚ್‍ಓ ಡಾ. ಮಂಜುನಾಥ್ ಅವರು, 1882 ಮಾರ್ಚ್ 24 ರಂದು ವಿಜ್ಞಾನಿ ರಾಬರ್ಟ್ ಕಾಕ್ ಎಂಬುವರು ಕ್ಷಯ ರೋಗವನ್ನು ಕಂಡು ಹಿಡಿದರು. ಅಂದಿನಿಂದಲೂ ಪ್ರಪಂಚದಾದ್ಯಂತ ವಿಶ್ವಕ್ಷಯ ರೋಗ ದಿನವನ್ನು ಪ್ರತಿ ವರ್ಷವೂ ಒಂದೊಂದು ಘೋಷವಾಕ್ಯದಡಿ
ಆಚರಿಸಲಾಗುತ್ತಿದೆ. ಈ ಬಾರಿ “ಕ್ಷಯ ರೋಗವನ್ನು ಕೊನೆಗಾಣಿಸಬಹುದು” ಎಂಬ ಘೋಷ ವಾಕ್ಯದಡಿ ವಿಶ್ವ ಕ್ಷಯ ರೋಗ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಕ್ಷಯ ರೋಗ ನಿರ್ಮೂಲನೆ ಕಾರ್ಯಕ್ರಮದಡಿ ಇಡೀ ರಾಜ್ಯದಲ್ಲೇ ತುಮಕೂರು ಜಿಲ್ಲೆ 2ನೇ ಸ್ಥಾನದಲ್ಲಿ ಆಯ್ಕೆಯಾಗಿದ್ದು, ಈ ಬಾರಿ ಬೆಳ್ಳಿ ಪದಕವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಈ ಕ್ಷಯರೋಗವನ್ನು ಮತ್ತಷ್ಟು ತಡೆಗಟ್ಟುವ ಮೂಲಕ ಚಿನ್ನದ ಪದಕ ಪಡೆದುಕೊಳ್ಳುವತ್ತ ನಾವೆಲ್ಲಾ ಗಮನ ಹರಿಸಬೇಕಿದೆ ಎಂದರು.
ಜನರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವುದರಿಂದಲೇ ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟಬಹುದು. ಇದು ಕೇವಲ ಶ್ವಾಸಕೋಶ ಮಾತ್ರವಲ್ಲ, ಕಣ್ಣು, ಕಿವಿ ಸೇರಿದಂತೆ ದೇಹದ ಎಲ್ಲ ಭಾಗಗಳಿಗೂ ಹರಡುತ್ತದೆ. ಆದ್ದರಿಂದ ಸರಿಯಾದ ಚಿಕಿತ್ಸೆ ನೀಡುವುದರಿಂದ ಈ ಕಾಯಿಲೆಯನ್ನು ಗುಣಪಡಿಸಬಹುದಾಗಿದೆ ಎಂದರು.
ಕ್ಷಯ ರೋಗದಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶವಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದವರಲ್ಲಿ ಕ್ಷಯ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಕೊಡುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ ಎಂದರು.
ಕ್ಷಯರೋಗ ಅಧಿಕಾರಿ ಡಾ. ಸನತ್‍ಕುಮಾರ್ ಮಾತನಾಡಿ, 1882 ರಲ್ಲಿ ವಿಜ್ಞಾನಿ ರಾಬರ್ಟ್ ಕಾಕ್ ಅವರು ರೋಗವನ್ನು ಕಂಡು ಹಿಡಿದ ದಿನ. ಹಾಗಾಗಿ ಪ್ರತಿ ವರ್ಷವೂ ಮಾ. 24ನ್ನು ವಿಶ್ವ ಕ್ಷಯರೋಗ ದಿನವನ್ನು ಆಚರಿಸಲಾಗುತ್ತಿದೆ. ಶೇ. 45 ರಷ್ಟು ಕ್ಷಯರೋಗಿಗಳು ಇಳಿಮುಖವಾಗಿರುವುದರಿಂದ ಕೇಂದ್ರ ಸರ್ಕಾರ ಬೆಳ್ಳಿಪದಕವನ್ನು ನೀಡುತ್ತಿದೆ ಎಂದರು.
ಕ್ಷಯ ರೋಗಿಗಳಿಗೆ ಚಿಕಿತ್ಸೆ ಮತ್ತು ಪರೀಕ್ಷೆ ಸಂಪೂರ್ಣ ಉಚಿತವಾಗಿರುತ್ತದೆ. ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆದರೆ ಬಹುಬೇಗ ಗುಣಮುಖರಾಗಬಹುದು. ದೀರ್ಘಾವಧಿ, ಕೆಮ್ಮು, ಕಡಿಮೆ ತೂಕ ಇದ್ದರೆ ಹತ್ತಿರದ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ಷಯ ರೋಗಿಗಳಿಗೆ 6 ತಿಂಗಳಿನಿಂದ 12 ತಿಂಗಳವರೆಗೂ ಚಿಕಿತ್ಸೆ ಉಚಿತವಾಗಿರುತ್ತದೆ. ಕೆಮ್ಮಿದಾಗ, ಸೀನಿದಾಗ ಕರವಸ್ತ್ರ ಬಳಸಬೇಕು. ಹೀಗೆ ಮಾಡುವುದರಿಂದ ಒಬ್ಬರಿಂದ ಒಬ್ಬರಿಗೆ ಈ ರೋಗ ಹಡುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದರು.
ನಗರದ ಟೌನ್‍ಹಾಲ್ ವೃತ್ತದಿಂದ ಆರಂಭವಾದ ಕ್ಷಯ ರೋಗದ ಅರಿವು ಮೂಡಿಸುವ ಜಾಥಾವು ಅಶೋಕ ರಸ್ತೆ, ಜಿಲ್ಲಾಧಿಕಾರಗಳ ಕಚೇರಿ ಮುಖೇನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ತಲುಪಿತು.
ಜಾಥಾದಲ್ಲಿ ಕ್ಷಯರೋಗ ಅಧಿಕಾರಿ ಡಾ. ಸನತ್‍ಕುಮಾರ್, ಐಎಂಎ ಅಧ್ಯಕ್ಷರಾದ ಡಾ. ಚಂದ್ರಶೇಖರ್, ಡಾ. ರೇಖಾ, ಆರೋಗ್ಯ ಸಮಿತಿ ಸದಸ್ಯ ಎಂ. ಗೋಪಿ, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.

(Visited 1 times, 1 visits today)
tumkur Tumkur dc yspatil
Previous Articleಮಾಲಿಕರಿಂದ ವಂಚನೆ : ಉಗ್ರÀ ಹೋರಾಟದ ಎಚ್ಚರ
Next Article ಕಾಂಗ್ರೆಸ್ ಮೊದಲ ಹಂತದ 124 ಮಂದಿ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆ
News Desk Benkiyabale

Related Posts

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm news

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news
ತಾಜಾ ಸುದ್ಧಿಗಳು

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
Our Youtube Channel
Our Picks

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಿದ್ದೆಗೆ ಜಾರಿದ ಕಂದಾಯ ಇಲಾಖೆ

By News Desk BenkiyabaleJune 18, 2026 4:44 pm

ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ…

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.