BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶೇಷಚೇತನರು ಸುಲಲಿತವಾಗಿ ಮತದಾನ ಮಾಡಲು ವಾಹನ ವ್ಯವಸ್ಥೆ : ಜಿಲ್ಲಾಧಿಕಾರಿ
ಇತರೆ ಸುದ್ಧಿಗಳು

ವಿಶೇಷಚೇತನರು ಸುಲಲಿತವಾಗಿ ಮತದಾನ ಮಾಡಲು ವಾಹನ ವ್ಯವಸ್ಥೆ : ಜಿಲ್ಲಾಧಿಕಾರಿ

By News Desk BenkiyabaleUpdated:April 03, 2023 5:40 pm

ತುಮಕೂರು

ಜಿಲ್ಲೆಯಲ್ಲಿ ಸುಮಾರು 29700 ವಿಶೇಷಚೇತನ ಮತದಾರರಿದ್ದು, ಇವರೆಲ್ಲರೂ ಮೇ 10ರ ‘ಮತದಾನಹಬ್ಬ’ದ ದಿನ ಮತದಾನ ಮಾಡಲು ಅನುಕೂಲವಾಗುವಂತೆ ಅಂದು ಪ್ರತಿ ಗ್ರಾಮಪಂಚಾಯಿತಿಗೆ ಒಂದರಂತೆ ವಾಹನ ಸೌಲಭ್ಯ ಕಲ್ಪಿಸಲಿದ್ದು, ಈ ಸೌಲಭ್ಯವನ್ನು ಬಳಸಿಕೊಂಡು ವಿಶೇಷಚೇತನರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ತಪ್ಪದೆ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮನವಿ ಮಾಡಿದರು.
ವಿಕಲಚೇತನ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದಕ್ಕಾಗಿ ಮತಗಟ್ಟೆಗಳಿಗೆ ತಲುಪಲು ಪ್ರತಿ ಗ್ರಾಮ ಪಂಚಾಯಿತಿ 6-8 ಕಿಲೋ ಮೀಟರ್ ವ್ಯಾಪ್ತಿಗೆ ಒಂದು ಆಟೋವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ’ ವಿಕಲಚೇತನರ ಹಾಗೂ ತೃತೀಯ ಲಿಂಗಿ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲೆ ಮತ್ತು ಸಂಗೀತಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅತ್ಯುತ್ತಮ ಕಲಾವಿದರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ತಮ್ಮ ಸಂಗೀತ ಗಾಯನದ ಮೂಲಕ ಮತದಾರರಲ್ಲಿ ಅರಿವು ಮೂಡಿಸಬೇಕು. ತೃತೀಯ ಲಿಂಗಿ ಮತದಾರರು ತಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವುದರ ಕುರಿತು ತೃತೀಯ ಲಿಂಗಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮತದಾನದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಬೇಕು ಹಾಗೂ ಯಾವ ಮತದಾರ ಮತಗಟ್ಟೆಗೆ ಬರಲು ಸಾಧ್ಯವಿಲ್ಲವೋ ಅಂತಹ ಮತದಾರ ನಮೂನೆ 12ಡಿ ಅನ್ನು ಪಡೆದು ಅಂಚೆಮತ ಚಲಾಯಿಸಬೇಕು. ಉಳಿದವರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ:ಕೆ. ವಿದ್ಯಾಕುಮಾರಿ ಮಾತನಾಡಿ, ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.82ರಷ್ಟು ಮತದಾನವಾಗಿರುತ್ತದೆ. ಈ ಬಾರಿ ಶೇ.100ರಷ್ಟು ಮತದಾನ ಆಗಬೇಕಿದೆ. ನಗರ ಭಾಗದಲ್ಲಿ ಶೇಕಡಾ 65ರಷ್ಟು ಮತದಾನ ಪ್ರಮಾಣ ಇದ್ದು, ಇದೂ ಸಹ ಶೇ.100ಕ್ಕೆ ಹೆಚ್ಚಳವಾಗಬೇಕಿದೆ ಎಂದು ಹೇಳಿದರು.
ಯುವ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡದೆ ಮತದಾನದಿಂದ ಹೊರಗೆ ಉಳಿಯುತ್ತಿದ್ದಾರೆ. ಆದ್ದರಿಂದ ಯುವ ಮತದಾರರು ಮತ ಚಲಾವಣೆ ಮಾಡುವ ಹಾಗೇ ಅವರಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸಬೇಕು. ತೃತೀಯ ಲಿಂಗಿಗಳು ಮತಗಟ್ಟೆಗಳಿಗೆ ಬರಲು ಹಿಂದೇಟು ಹಾಕುವ ಮೂಲಕ ಮತದಾನದಿಂದ ದೂರ ಉಳಿಯುತ್ತಿದ್ದಾರೆ ಎಂದರು.
ವಿಕಲಚೇತನರು ಇಂದು ನಗರದ ಜ್ಯೂನಿಯರ್ ಕಾಲೇಜು ಮೈದಾನದಿಂದ ಜಿಲ್ಲಾ ಪಂಚಾಯತ್ ಆವರಣದವರೆಗೆ ಮೂರು ಚಕ್ರದ ಬೈಕ್ ಹಾಗೂ ಸೈಕಲ್ ಮೂಲಕ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಮೂಲಕ ಮತದಾನದ ಮಹತ್ವ ಕುರಿತು ಎಲ್ಲರಲ್ಲಿ ಅರಿವು ಮೂಡಿಸಲಾಯಿತು ಎಂದರು.
ಭಾರತದ ಸಂವಿಧಾನದಲ್ಲಿ ಎಲ್ಲರಿಗೂ ಮತ ಚಲಾಯಿಸುವ ಹಕ್ಕು ಇದೆ. ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಜಿಲ್ಲೆಯ ಮತದಾನದ ಪ್ರಮಾಣ ಶೇಕಡಾ ನೂರರಷ್ಟು ಆಗಬೇಕು ಎಂದರಲ್ಲದೇ, ಮತದಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸ್ವೀಪ್ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಚುನಾವಣಾ ರಾಯಭಾರಿ ಕಥಾಕೀರ್ತನ ಗಾಯಕರಾದ ಲಕ್ಷ್ಮಣ್ ದಾಸ್ ಮಾತನಾಡಿ, ಚುನಾವಣಾ ಆಯೋಗವು ರಾಯಭಾರಿಗಳಿಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಗಾಯಕ ಕಂಬದ ರಂಗಯ್ಯ, ಬುಡಕಟ್ಟು ಹಾಡುಗಾರರಾದ ಮೋಹನ್‍ಕುಮಾರ್, ಸಮಾಜ ಸೇವಕಿ ಲಿಲ್ಲಿ, ಹಾಡುಗಾರರಾದ ಮಂಜಮ್ಮ ಹಾಗೂ ರತ್ನಮ್ಮ ಅವರುಗಳು ಮಾತನಾಡಿ, ಮತದಾನ ಮಾಡುವಂತೆ ಕೋರುತ್ತಾ, ತಮ್ಮ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿಗಳನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ: ಕೆ. ವಿದ್ಯಾಕುಮಾರಿ ಅವರು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪೂರ್‍ವಾಡ್ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಶಾಸಕ ಎಂ.ವಿ.ವೀರಭದ್ರಯ್ಯ ವಿರುದ್ದ ಮೇಲೆ ದೂರು ದಾಖಲಿಸಲು ಲೋಕಾಯುಕ್ತಕ್ಕೆ ಮನವಿ
Next Article ಭಗವಾನ್ ಮಹಾವೀರರ ಜಯಂತಿ ಆಚರಣೆ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.