BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಜಿಡಿಸಿಎಂ ಪರಮೇಶ್ವರ್ ಅಪಾರ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಕೆ
ಇತರೆ ಸುದ್ಧಿಗಳು

ಮಾಜಿಡಿಸಿಎಂ ಪರಮೇಶ್ವರ್ ಅಪಾರ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಕೆ

By News Desk BenkiyabaleUpdated:April 19, 2023 4:47 pm
ಕೊರಟಗೆರೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಪಕ್ಷ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬರಲಿದೆ ಎಂದರು.
ಪರಮೇಶ್ವರ್ ನಾಮಪತ್ರ ಸಲ್ಲಿಕೆ
ಕೊರಟಗೆರೆ : ರಾಜ್ಯದ ಜನರ ಗಮನ ಸೆಳೆದಿರುವ ಕ್ಷೇತ್ರಗಳಲ್ಲಿ ಒಂದಾದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅವರು ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸುವ ಪ್ರಯುಕ್ತ ಬೆಳಿಗ್ಗೆ
ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಬಳಿಕ ಕೊರಟಗೆರೆಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಮತ್ತು ಕಟ್ಟೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ದೇವಾಲಯಗಳ ಭೇಟಿ, ವಿಶೇಷ ಪೂಜೆ ನಂತರ ಕೊರಟಗೆರೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿವರೆಗೆ ಅಪಾರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತೆರಳಿದ ಡಾ. ಜಿ. ಪರಮೇಶ್ವರ್ ಅವರು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ನಂದಿನಿ ಪೇಡಾದ ಪ್ಯಾಕೆಟ್ ಹಾರ ಹಾಕುವ ಮೂಲಕ ರಾಜ್ಯದಲ್ಲಿ ನಂದಿನಿ ಉಳಿಸಿ ಎಂಬ ಸಂದೇಶವನ್ನು ನೀಡಿದ್ದು ವಿಶೇಷವಾಗಿತ್ತು.
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಾಮಪತ್ರ ಸಲ್ಲಿಕೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಎ.ಡಿ. ಬಲರಾಮಯ್ಯ, ಕೆಪಿಸಿಸಿ ಸದಸ್ಯ ಪ್ರಸನ್ನಕುಮಾರ್, ತುಮಕೂರು ನಗರ ಅಭ್ಯರ್ಥಿ ಇಕ್ಬಾಲ್ ಅಹಮದ್, ರಾಯಸಂದ್ರ ರವಿಕುಮಾರ್ ಮತ್ತಿತರರು ಸಾಥ್ ನೀಡಿದರು.
(Visited 1 times, 1 visits today)
tumkur Tumkur dc yspatil
Previous Articleಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ರಣಕಹಳೆ
Next Article ಎಎಪಿ ಅಭ್ಯರ್ಥಿ ದಿನೇಶ್‍ಕುಮಾರ್‍ರಿಂದ ಉಮೇದುವಾರಿಕೆ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.