BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜೆಡಿಎಸ್‍ಗೆ ಸಂಪೂರ್ಣ ಬಹುಮತ ನೀಡಿ : ದೇವೇಗೌಡರು
ಇತರೆ ಸುದ್ಧಿಗಳು

ಜೆಡಿಎಸ್‍ಗೆ ಸಂಪೂರ್ಣ ಬಹುಮತ ನೀಡಿ : ದೇವೇಗೌಡರು

By News Desk BenkiyabaleUpdated:May 02, 2023 5:10 pm

ತುಮಕೂರು


ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಹೇಳಿದರು.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ. ಸುರೇಶ್‍ಬಾಬು ಪರ ಮತಯಾಚಿಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಶಕ್ತಿ ತುಂಬುತ್ತೇನೆ ಅಂತ ಹೇಳುತ್ತಾರೆ. ಆದರೆ ಅವರು ನುಡಿದಂತೆ ಮೋದಿ ನಡೆಯುವುದಿಲ್ಲ ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟವರು ನಾವು. ಈಗಾಗಲೇ ನಾನು ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡುವಂತೆ ಪತ್ರ ಬರೆದಿದ್ದೇನೆ. ಯಾವುದೇ ಒಂದು ಸಮಾಜಕ್ಕೆ ದೇವೇಗೌಡರಿಂದ ಅನ್ಯಾಯವಾಗಿಲ್ಲ ಎಂದು ಹೇಳಿದರು.
ಸ್ತ್ರೀಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‍ಗೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದರೆ ಕುಮಾರಸ್ವಾಮಿ ಅವರು ನುಡಿದಂತೆ ನಡೆಯುತ್ತಾರೆ ಎಂದರು.
ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಎಂದರೆ ಅದು ಕುಮಾರಸ್ವಾಮಿ ಎಂದ ಅವರು, ರೈತರಿಗೆ 5 ಸಾವಿರ ಮಾಸಾಶನ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆಲ್ಲ ರಾಜ್ಯದ ಜನತೆ ಅವರಿಗೆ ಶಕ್ತಿ ತುಂಬಬೇಕು ಎಂದು ಅವರು ಮನವಿ ಮಾಡಿದರು.
90ನೇ ವಯಸ್ಸಿನಲ್ಲಿ ಏಳೆಂಟು ಸಭೆ ಮಾಡುತ್ತಿದ್ದೇನೆ. ಏತಕ್ಕೆ, ಯಾರಿಗೋಸ್ಕರ ಗೊತ್ತಾ ಎಂದು ಪ್ರಶ್ನಿಸಿದ ಅವರು, ಈ ಇಳಿವಯಸ್ಸಿನಲ್ಲೂ ರಾಜ್ಯದ ಜನರಿಗೋಸ್ಕರ ನನ್ನ ಸೇವೆ ಮುಡುಪಾಗಿಟ್ಟಿದ್ದೇನೆ ಎಂದರು.
ಪ್ರತಿ ಹಳ್ಳಿಗೆ ಶುದ್ಧ ನೀರು ಒದಗಿಸುವ ಗುರಿಯನ್ನು ಜೆಡಿಎಸ್ ಪಕ್ಷ ಹೊಂದಿದೆ. ರಾಷ್ಟ್ರದಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ನದಿ, ಉಪನದಿಗಳ ಮಾಹಿತಿಯನ್ನು ಕುಮಾರಸ್ವಾಮಿ ಸಂಗ್ರಹ ಮಾಡಿದ್ದಾರೆ ಎಂದ ಅವರು,
ಮುಸ್ಲಿಂರಿಗೆ ಮೀಸಲಾತಿ ಕೊಟ್ಟಿದ್ದು ಯಾರು, ಈದ್ಗಾ ಮೈದಾನ ಸಮಸ್ಯೆ ಬಗೆಹರಿಸಿದ್ದು ಯಾರು ಎಂದು ಅವರು ಪ್ರಶ್ನಿಸಿದರು.
ಅಪಪ್ರಚಾರಕ್ಕೆ ತಾವು ಮಾರು ಹೋಗಬಾರದು. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ತಂದವರು ಯಾರು ಎಂಬ ಬಗ್ಗೆ ಸತ್ಯ ಹೇಳಬೇಕು. ಈ ಸಮುದಾಯಕ್ಕೂ ಮೀಸಲಾತಿ ನೀಡಿದ್ದು ನಾನೇ ಎಂದು ಅವರು ಹೇಳಿದರು.
ಸುರೇಶ್‍ಬಾಬು ಅವರು ತಮ್ಮ ಮನಸಿನ ನೋವನ್ನು ಹೇಳಿಕೊಂಡಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗದೆ, ದೇವೇಗೌಡರ ಪಕ್ಷದಲ್ಲಿ ಉಳಿಯುತ್ತೇನೆ ಎಂದು ಹೇಳಿದವರು ಸುರೇಶ್ ಬಾಬು. ತನೆಹೊತ್ತ ಮಹಿಳೆಯ ಗುರುತಿಗೆ ಮತ ನೀಡಿ ಅವರನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡರಾದ ಎಸ್. ಷಫಿಅಹಮದ್ ಮಾತನಾಡಿ, ನಾನು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯವಾಗಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿದ್ದೆ. ಆದರೆ ನಾನು ನನ್ನ ಅಳಿಯನಿಗೆ ಟಿಕೆಟ್ ಕೇಳಿದೆ, ಆದರೆ ನನ್ನ ಮನವಿ ಸ್ಪಂದಿಸದೆ ಸೋಲುವ ಅಭ್ಯರ್ಥಿಗೆ ಟಿಕೆಟ್ ನೀಡಿದ್ದರಿಂದ ಬೇಸರಗೊಂಡು ಜಾತ್ಯಾತೀತ ನಿಲುವುಳ್ಳ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.
ನಮ್ಮ ಪಕ್ಷದ ಅಭ್ಯರ್ಥಿ ಸುರೇಶ್‍ಬಾಬು ಅವರು ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಸದಾ ಬಡವರ ಪರವಾಗಿಯೇ ಕೆಲಸ ಮಾಡುತ್ತಾರೆ. ಇಂತಹ ಸರಳ ಸಜ್ಜನಿಕೆಯ ವ್ಯಕ್ತಿಯನ್ನು ಈ ಬಾರಿ ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆಶೀರ್ವದಿಸಬೇಕು ಎಂದರು.
ಅಭ್ಯರ್ಥಿ ಸಿ.ಬಿ. ಸುರೇಶ್‍ಬಾಬು ಮಾತನಾಡಿ, ನನ್ನ ತಂದೆ ತೀರಿ ಹೋದಾಗ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗಿದ್ದರು. ಆ ಸಂದರ್ಭದಲ್ಲಿ ನನ್ನನ್ನು ಗುರುತಿಸಿ ರಾಜಕೀಯಕ್ಕೆ ಕರೆ ತಂದರು ಎಂದರು.
ಕ್ಷೇತ್ರದ ಜನರ ಋಣ ನನ್ನ ಮೇಲಿದೆ. ಋಣವನ್ನು ತೀರಿಸಲು ಕ್ಷೇತ್ರದ ಜನತೆ ನನಗೆ ಮತ್ತೊಂದು ಬಾರಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಜಾತ್ಯಾತೀತ ಹೆಸರಿಗೆ ತಕ್ಕಂತೆ ನಮ್ಮ ಪಕ್ಷದಲ್ಲಿ ಎಲ್ಲ ಜಾತಿ, ವರ್ಗದವರು ಇದ್ದಾರೆ. ಎಲ್ಲ ವರ್ಗ, ಸಮುದಾಯದ ಏಳ್ಗೆಯನ್ನು ಜೆಡಿಎಸ್ ಪಕ್ಷ ಬಯಸುತ್ತದೆ. ಇದಕ್ಕೆ ಬದ್ಧವಾಗಿ ಸದಾ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಕಿರಣ್‍ಕುಮಾರ್ ಮನೆಯಲ್ಲಿ ಸಾವರ್ಕರ್ ಫೆÇೀಟೋ ಇದೆ. ಡಿ.ಕೆ. ಶಿವಕುಮಾರ್ ಬಂದರೆ ಅವರ ತಲೆಗೆ ಕೇಸರಿ ಪೇಟೆ ತೊಡಿಸುತ್ತಾರೆ. ಇವರು ಚುನಾವಣೆಯಾದ ಬಳಿಕ ಎಲ್ಲಿ ಇರುತ್ತಾರೆ ಎಂಬುದು ಗೊತ್ತಿಲ್ಲ. ಹಾಗಾಗಿ ಇವರ ಮಾತುಗಳಿಗೆ ಜನತೆ ಮರುಳಾಗಬಾರದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಮಹದೇವಯ್ಯ, ಜಯಪ್ರಕಾಶ್, ರಾಜಕುಮಾರ್, ರಾಮಚಂದ್ರಯ್ಯ, ಪಾವಗಡ ಶ್ರೀರಾಮ್, ಸೋಲಾರ್ ಕೃಷ್ಣಮೂರ್ತಿ, ಹರ್ಷ, ಪುಷ್ಪಾ, ನಗ್ಮಾ, ಕಲ್ಲೇಶ್ ಮತ್ತಿತರರು ಭಾಗವಹಿಸಿದ್ದರು.

(Visited 13 times, 1 visits today)
tumkur
Previous Articleಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ
Next Article ಜ್ಯೋತಿಗಣೇಶ್ ಪರ ನಳೀನ್‍ಕುಮಾರ್ ಕಟೀಲ್ ಮತಯಾಚನೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.