BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ
  • ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ
  • ಕೊಲೆ ಪ್ರಕರಣದ ಆರೋಪಿಗಳ ಬಂಧನ
  • ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
  • ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ
  • ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ
  • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸರಿಂದ ಸಂಕಲ್ಪ
  • ವಿದ್ಯಾರ್ಥಿ ನಿಲಯದ ಮುಂಭಾಗ ಹರಿಯುತ್ತಿರುವ ಚರಂಡಿ ನೀರು: ಕ್ರಮಕ್ಕೆ ಸಾರ್ವಜನಿಕರ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿಸಿ ಕುರುಬ ಸಂಘಟನೆಗಳ ಒತ್ತಾಯ
ಇತರೆ ಸುದ್ಧಿಗಳು

ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿಸಿ ಕುರುಬ ಸಂಘಟನೆಗಳ ಒತ್ತಾಯ

By News Desk BenkiyabaleUpdated:May 15, 2023 4:49 pm

ತುಮಕೂರು


ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೩೫ ಸ್ಥಾನಗಳ ಸ್ಪಷ್ಟ ಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ. ಅದರಲ್ಲೂ ಸಿದ್ದರಾಮಯ್ಯನವರು ಪರಿಶ್ರಮ ಜಾಸ್ತಿಯಿದ್ದು, ಈ ಬಾರಿ ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ನಗರದಲ್ಲಿ ಕುರುಬರ ಸಂಘಟನೆಗಳ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿದ್ದಾರೆ.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿ ಮುಂಭಾಗ ಜಮಾಯಿಸಿದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘ, ಜಿಲ್ಲಾ ಕುರುಬರ ಸಂಘ, ಸಂಗೊಳ್ಳಿ ರಾಯಣ್ಣನ ಸಂಘ, ಕನಕ ಪತ್ತಿನ ಸಹಕಾರ ಸಂಘ, ಕನಕ ಪತ್ತಿನ ಮಹಿಳಾ ಸಹಕಾರ ಸಂಘ, ಕವಿರತ್ನ ಕಾಳಿದಾಸ ಸಂಘ ಸೇರಿದಂತೆ ವಿವಿಧ ಕುರುಬರ ಸಂಘಟನೆಗಳ ಅಧ್ಯಕ್ಷರು, ಪದಾದಿಕಾರಿಗಳು ಹಾಗೂ ಮುಖಂಡರು ಈ ಬಾರಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು.
ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ಮಾತನಾಡಿ, ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ಅವರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷಕ್ಕೆ ೧೩೫ ಸ್ಥಾನಗಳು ಲಭಿಸುವ ಮೂಲಕ ಸ್ಪಷ್ಟಬಹುಮತ ಬಂದಿದೆ. ಇದಕ್ಕೆ ಡಿಕೆಶಿಯವರ ಪರಿಶ್ರಮವೂ ಇದೆ. ಅದರಲ್ಲೂ ಸಿದ್ದರಾಮಯ್ಯನವರ ಶ್ರಮ ಜಾಸ್ತಿ ಇದೆ. ಬಿಜೆಪಿಯ ಭ್ರಷ್ಟಾಚಾರದ ಆಡಳಿತಕ್ಕೆ ತಕ್ಕಪಾಠ ಕಲಿಸಬೇಕಾದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲೇಬೇಕು. ನಮ್ಮೆಲ್ಲರ ಅಪೇಕ್ಷೆ ಸಹ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲೇಬೇಕು ಎಂಬುದಾಗಿದೆ ಎಂದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಅವರಿಗೆ ಹೆಚ್ಚಿನ ಶಾಸಕರ ಬೆಂಬಲವೂ ಇದೆ. ಹೈಕಮಾಂಡ್ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟುಗಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಿದ್ದರಾಮಯ್ಯನವರನ್ನೆ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡದಿದ್ದರೆ ನಮ್ಮ ಹೋರಾಟ ನಿರಂತರವಾಗಿ ಸಾಗುತ್ತದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳಿಗೆ ತಕ್ಕ ಪ್ರತ್ಯುತ್ತರ ಕೊಡುವ ಶಕ್ತಿ ಸಿದ್ದರಾಮಯ್ಯನವರಿಗಿದೆ. ಸಿದ್ದರಾಮಯ್ಯನವರು ಎಂದರೆ ಶಕ್ತಿ. ಎಲ್ಲ ಜನಾಂಗದವರು ಸಹ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು ಎಂದು ಕಾಯುತ್ತಿದ್ದಾರೆ. ಹೈಕಮಾಂಡ್ ಇಂದು ಸಂಜೆಯೊಳಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕನಕ ಪತ್ತಿನ ಮಹಿಳಾ ಸಹಕಾರ ಸಂಘದ ಸುನೀತಾ ನಟರಾಜು ಮಾತನಾಡಿದರು.
ಸಿದ್ದರಾಮಯ್ಯನವರು ಎಲ್ಲ ವರ್ಗದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ೫ ವರ್ಷ ಯಾವುದೇ ಕಪುö್ಪಚುಕ್ಕೆ ಇಲ್ಲದೆ ಆಳ್ವಿಕೆ ನಡೆಸಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟದಂತೆ ಕ್ಯಾಬಿನೆಟ್ ರಚನೆ ಮಾಡಿದ್ದರು. ಈಗಾಗಲೇ ೧೩ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಸಿದ್ದರಾಮಯ್ಯನವರು ನಮ್ಮೆಲ್ಲರ ಹಿರಿಯಣ್ಣ. ಹೈಕಮಾಂಡ್‌ಗೆ ಎಷ್ಟೇ ಒತ್ತಡ ಇದ್ದರೂ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿ ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಸಿ. ಪುಟ್ಟರಾಜು, ಮೈಲಪ್ಪ, ಟಿ.ಆರ್. ಸುರೇಶ್, ಸುನೀತಾ ನಟರಾಜು, ನಿರ್ದೇಶಕರಾದ ರಘುರಾಮ್, ಶಂಕರ್, ಶೇಷಗಿರಿ, ಎಸ್. ನಾಗಣ್ಣ, ಟಿ.ಎನ್. ಮಧುಕರ್, ವಕೀಲರಾದ ವಿ.ಆರ್. ವೆಂಕಟೇಶ್, ಧನರಾಜು ಸೇರಿದಂತೆ ಕುರುಬ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.

(Visited 8 times, 1 visits today)
tumkur
Previous Articleಬಿ.ವೈ.ವಿಜಯೇಂದ್ರ ಮಠಕ್ಕೆ ಭೇಟಿ
Next Article ಸರ್ಕಾರದ ಕೆಲಸ ಎಂಬ ಬೇಜವಾಬ್ದಾರಿ ಬೇಡ : ಶಾಸಕ ಕೆಎನ್‌ಆರ್
News Desk Benkiyabale

Related Posts

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm news
ತಾಜಾ ಸುದ್ಧಿಗಳು
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm
news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm
news

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
news

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
news

ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ

July 29, 2026 4:13 pm
Our Youtube Channel
Our Picks

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

By News Desk BenkiyabaleJuly 29, 2026 4:22 pm

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯು ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಗುರಿ ಆಧಾರಿತ…

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.