BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ವಿವಿಯಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ಜಪಾನಂದಜೀ ಚಾಲನೆ
ಇತರೆ ಸುದ್ಧಿಗಳು

ತುಮಕೂರು ವಿವಿಯಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ಜಪಾನಂದಜೀ ಚಾಲನೆ

By News Desk BenkiyabaleUpdated:May 24, 2023 4:49 pm

ತುಮಕೂರು


2023-24ನೇ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿಯೇ ಪ್ರಪ್ರಥಮವಾಗಿ ಆರಂಭಿಸಲ್ಪಟ್ಟಿರುವ ಆಹಾರ ವಿತರಣಾ ಯೋಜನೆ ಮತ್ತೆ ಪುನರಾರಂಭವಾಗಿದೆ. ಇಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಪ್ರಾಂಗಣದಲ್ಲಿ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳ ವಿದ್ಯಾರ್ಥಿ / ವಿದ್ಯಾರ್ಥಿನಿಯರು ಸಾಲು ಸಾಲಾಗಿ ನಿಂತು ಆಹಾರವನ್ನು ಪಡೆಯುತ್ತಿರುವ ದೃಶ್ಯ ಅದ್ಭುತವಾಗಿತ್ತು. ಆಹಾರ ವಿತರಣಾ ಸಮಿತಿಯ ಅಧ್ಯಕ್ಷರಾದ ಪರಮ ಪೂಜ್ಯ ಸ್ವಾಮಿ ಜಪಾನಂದಜೀ ರವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಸರಿಸುಮಾರು 1500 ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಪ್ರತಿ ದಿನ ಮಧ್ಯಾನ್ಹದ ಭೋಜನ ವ್ಯವಸ್ಥೆಯನ್ನು 6 ಮಾರ್ಚ್ 2023ರಂದು ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ನ್ಯಾ. ಶ್ರೀ ಸಂತೋಷ್ ಹೆಗ್ಡೆ, ನ್ಯಾ.ಶ್ರೀಮತಿ ರತ್ನಕಲಾ ಹಾಗೂ ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಶ್ರೀ ಶ್ರೀ ಸಿದ್ಧಗಂಗಾ ಶ್ರೀಗಳ ಸಮ್ಮುಖದಲ್ಲಿ ಆರಂಭವಾದ ಯೋಜನೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಏತನ್ಮಧ್ಯೆ ಚುನಾವಣೆಯ ನಿಮಿತ್ತ 15 ದಿನಗಳ ಕಾಲ ಸ್ಥಗಿತವಾಗಿದ್ದ ಈ ಯೋಜನೆ ಪುನರಾರಂಭವಾಗಿದೆ. ಇಂದು ಪೂಜ್ಯ ಸ್ವಾಮಿ ಜಪಾನಂದಜೀ ರವರು ತಾವೇ ಸ್ವತಃ ನಿಂತು ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಆಹಾರವನ್ನು ವಿತರಿಸುವ ಮೂಲಕ ಯೋಜನೆಗೆ ಚಾಲನೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಈ ಆಹಾರ ವಿತರಣಾ ಯೋಜನೆಗೆ ಬೇಕಾದ ಪಾತ್ರೆ ಸರಂಜಾಮುಗಳನ್ನು ಪೂಜ್ಯ ಸ್ವಾಮೀಜಿಯವರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆದ ಶ್ರೀಮತಿ ನಾಹೀದಾ ಜಮ್ ಜಮ್ ರವರು ಉಪಸ್ಥಿತರಿದ್ದರು. ಹಾಗೆಯೇ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕರಿಯಣ್ಣ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಪರಶುರಾಮ್ ಹಾಗೂ ಈ ಯೋಜನೆಯ ಸಂಯೋಜಕರಾದ ಶ್ರೀ ಗುಂಡೇಗೌಡ ರವರು, ಶ್ರೀ ನಾಗರಾಜ್ ರವರು ಉಪಸ್ಥಿತರಿದ್ದರು.
ಶುದ್ಧವಾದ, ರುಚಿಕರವಾದ ಹಾಗೂ ವಿವಿಧ ರೀತಿಯ ಆಹಾರವನ್ನು ಸಿದ್ಧಪಡಿಸಲು ಸರ್ವರೀತಿಯಲ್ಲಿ ಸಹಕಾರ ನೀಡುತ್ತಿರುವ ಶ್ರೀ ಶಿರಡಿ ಬಾಬಾ ಮಂದಿರ, ಆದರ್ಶನಗರದ ಅಧ್ಯಕ್ಷರಾದ ಶ್ರೀ ನಟರಾಜಶೆಟ್ಟಿ ಮತ್ತು ಅವರ ತಂಡ ಹಾಗೆಯೇ ಈ ಯೋಜನೆಯ ಗೌರವಾನ್ವಿತ ಸದಸ್ಯರುಗಳಾದ ಶ್ರೀ ನಾಗಣ್ಣ, ಶ್ರೀ ರಮೇಶ್ ಬಾಬು, ಶ್ರೀ ಚಂದ್ರಶೇಖರ್, ಶ್ರೀ ರಾಮಮೂರ್ತಿ ಹಾಗೂ ಶ್ರೀ ಮಹಾಬಲಭಟ್ ರವರುಗಳು ಅತ್ಯಂತ ಶ್ರದ್ಧೆ ಹಾಗೂ ಸೇವಾ ತತ್ಪರತೆಯಿಂದ ಸಹಕಾರ ನೀಡುತ್ತಿರುತ್ತಾರೆ.
ಒಟ್ಟಿನಲ್ಲಿ ಪೂಜ್ಯ ಸ್ವಾಮಿ ಜಪಾನಂದಜೀ ರವರ ಅಧ್ಯಕ್ಷತೆಯಲ್ಲಿ ಆರಂಭವಾಗಿರುವ ಈ ಮಧ್ಯಾನ್ಹ ಭೋಜನ ಯೋಜನೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿ / ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ಪದವೀದರ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಸಂಶೋಧನಾ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತಿತರರೂ ಸಹ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯು ಮುಖ್ಯವಾಗಿ ಗ್ರಾಮಾಂತರ ಪ್ರದೇಶದಿಂದ ಅಂದರೆ ದಾಬಸ್‍ಪೇಟೆ, ದೊಡ್ಡಬಳ್ಳಾಪುರ, ಚಿಕ್ಕನಾಯಕನಹಳ್ಳಿ, ಕುಣಿಗಲ್, ತುರುವೇಕೆರೆ, ವೈ.ಎನ್.ಹೊಸಕೋಟೆ, ಕೊರಟಗೆರೆ ಮುಂತಾದ ಭಾಗಗಳಿಂದ ಪ್ರತಿನಿತ್ಯ ಸಂಚಾರ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅತ್ಯಂತ ಸಹಕಾರಿಯಾಗಿದೆ. ಇಂದು ಪೂಜ್ಯ ಸ್ವಾಮಿ ಜಪಾನಂದಜೀ ರವರೇ ಆಹಾರ ವಿತರಣೆ ಮಾಡುತ್ತಾ ಮೇಲೆ ತಿಳಿಸಿದ ದೂರದೂರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.
ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಸಂತೋಷ ಹಾಗೂ ತೃಪ್ತಿಯನ್ನು ಪೂಜ್ಯ ಸ್ವಾಮೀಜಿಯವರಿಗೆ ತಿಳಿಸಿದರು. ತಾವು ಈ ಯೋಜನೆಯಿಂದ ಅತ್ಯಂತ ಶ್ರೇಷ್ಠತಮವಾದ ಪ್ರಯೋಜನವನ್ನು ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

(Visited 1 times, 1 visits today)
tumkur
Previous Articleಜಿಲ್ಲೆಯ ೭ ಕಾಂಗ್ರೆಸ್ ನಾಯಕರಲ್ಲಿ ಪರಮೇಶ್ವರ್‌ಗೆ ಮಾತ್ರ ಸಂದ ಸಚಿವ ಸ್ಥಾನ
Next Article ಕೆಎನ್‍ಆರ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.