BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಮಗೆ ಆಹಾರ ಬೇಕು ತಂಬಾಕು ಬೇಡ
ಇತರೆ ಸುದ್ಧಿಗಳು

ನಮಗೆ ಆಹಾರ ಬೇಕು ತಂಬಾಕು ಬೇಡ

By News Desk BenkiyabaleUpdated:May 31, 2023 5:03 pm

ತುಮಕೂರು


ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೆÇಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಟೌನ್‍ಹಾಲ್ ವೃತ್ತದಿಂದ ಹಮ್ಮಿಕೊಂಡಿದ್ದ ಈ ಜಾಗೃತಿ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾ. ನೂರುನ್ನೀಸ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ನ್ಯಾಯಾಧೀಶರಾದ ನೂರುನ್ನೀಸ ಅವರು, ವಿಶ್ವ ತಂಬಾಕು ದಿನಾಚರಣೆಯಿಂದ ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗಿ ತಮ್ಮ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ. ಹಾಗೆಯೇ ಮಹಿಳೆಯರು ಸಹ ತಂಬಾಕಿನಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದರು.
ಈ ಕಾರ್ಯಕ್ರಮ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ ಅಕ್ಕಪಕ್ಕದವರಿಗೆ ಮತ್ತು ನೆರೆಹೊರೆಯ ಮನೆಯವರಿಗೆ ಗುಟ್ಕಾ, ಪಾನ್‍ಪರಾಗ್, ಬೀಡಿ, ಸಿಗರೇಟು ಸೇವಿಸುತ್ತಿದ್ದರೆ ಅಂತಹವರಿಗೆ ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಕೆಲಸವನ್ನು ಯುವಜನರು, ವಿದ್ಯಾರ್ಥಿಗಳು ಮಾಡಬೇಕು ಎಂದು ಸಲಹೆ ನೀಡಿದರು.
ಲಕ್ಷಾಂತರ ಮಂದಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶಗಳ ಸಮಸ್ಯೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಪ್ರತಿಯೊಬ್ಬರೂ ತಂಬಾಕು ಸೇವಿಸುವುದನ್ನು ನಿಲ್ಲಿಸಬೇಕು. ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಸರ್ವಲೆನ್ಸ್ ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಮೋಹನ್‍ದಾಸ್ ಮಾತನಾಡಿ, ಪ್ರತಿ ವರ್ಷ ಮೇ 31ಕ್ಕೆ ಒಂದೊಂದು ಘೋಷವಾಕ್ಯದೊಂದಿಗೆ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ನಮಗೆ ಆಹಾರ ಬೇಕು ತಂಬಾಕು ಬೇಡ ಎಂಬ ಧ್ಯೇಯವಾಕ್ಯದಡಿ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ತಂಬಾಕು ಸೇವನೆಯಿಂದ ದೇಹದ ಮೇಲೆ ಯಾವ ರೀತಿ ದುಷ್ಪರಿಣಾಮ ಆಗುತ್ತದೆ. ಯಾವ ರೀತಿಯ ಮಾರಕ ರೋಗಗಳಿಗೆ ತುತ್ತಾಗುತ್ತೇವೆ ಎಂಬುದನ್ನು ಈ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ತಂಬಾಕು ಬೆಳೆಯುವುದರಿಂದ ನೆಲ ಜಲ, ನೀರು ಗಾಳಿ, ಪರಿಸರಕ್ಕೆ ಹಾನಿಯಾಗುತ್ತಿದೆ. ತಂಬಾಕು ಬೆಳೆದ ನಂತರ ಅದರ ಎಲೆಗಳನ್ನು ಕಾರ್ಖಾನೆಗಳಿಗೆ ಸಾಗಿಸುವುದರಿಂದ ಹಿಡಿದು ಕಾರ್ಖಾನೆಯಲ್ಲಿ ತಯಾರಾಗುವ ತಂಬಾಕು ಉತ್ಪನ್ನದಿಂದಾಗಿ ಜಲ, ವಾಯು ಮಾಲಿನ್ಯ ಉಂಟಾಗುತ್ತದೆ. ಹೀಗಾಗಿ ಇದರಿಂದ ಸಂಪೂರ್ಣ ಪರಿಸರ ಮಾಲಿನ್ಯವಾಗುತ್ತಿದೆ ಎಂದರು.
ತಂಬಾಕು ಸೇವನೆ ಮಾಡಿದ ಸಂದರ್ಭದಲ್ಲಿ ವಾಯು ಮಾಲಿನ್ಯ, ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಂಬಾಕು ತ್ಯಜಿಸುವಂತಹ ಕಾರ್ಯ ಮಾಡಬೇಕು. ಈ ಮೂಲಕ ಪರಿಸರ ಉಳಿಸಿ ಬೆಳೆಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳಿಗೆ, ಕೆಎಸ್ಸಾರ್ಟಿಸಿ ಡಿಪೆÇೀದಲ್ಲಿ ಚಾಲಕರು ಮತ್ತು ನಿರ್ವಾಹಕರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದ್ದು, ಬಿ.ಪಿ., ಮಧುಮೇಹ, ಕಣ್ಣು ತಪಾಸಣೆ ನಡೆಸಲಾಗುತ್ತಿದೆ ಎಂದರು.
ಹದಿಹರೆಯದವರು ದುಶ್ಚಟಗಳಿಗೆ ಬಲಿಯಾಗುವುದು ಸರ್ವೆ ಸಾಮಾನ್ಯವಾಗಿದೆ. ಆದ್ದರಿಂದ ಪೆÇೀಷಕರು ಮಕ್ಕಳಿಗೆ ತಂಬಾಕು ಸಿಗದಂತೆ ನೋಡಿಕೊಳ್ಳುವ ಜತೆಗೆ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ಮಾಡಿದರು.
ಟೌನ್‍ಹಾಲ್ ವೃತ್ತದಿಂದ ಹೊರಟ ಜಾಥಾವು ಟೌನ್‍ಹಾಲ್ ಮುಖೇನ ಅಶೋಕ ರಸ್ತೆಯಲ್ಲಿ ಸಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿತು.
ಜಾಥಾದಲ್ಲಿ ಡಿಡಿಪಿಐ ಸಿ. ನಂಜಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್, ಜಿಲ್ಲಾ ಸಲಹೆಗಾರರಾದ ಎಂ.ಆರ್. ರವಿಪ್ರಕಾಶ್, ಹರೀಶ್, ರುಕ್ಮಿಣಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)
Previous Articleಸರ್ಕಾರದ ವಿರುದ್ಧ ಹೋರಾಟ : ಬಿ. ಸುರೇಶ್‍ಗೌಡ ಎಚ್ಚರಿಕೆ
Next Article ರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.