BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ
  • ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ
  • ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ
  • ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸಲು ಮನವಿ
ಇತರೆ ಸುದ್ಧಿಗಳು

ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸಲು ಮನವಿ

By News Desk BenkiyabaleUpdated:July 01, 2023 4:54 pm

ತುಮಕೂರು


ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ಎಲ್.ರಮೇಶ್ ಬಾಬುರವರು ಪ್ರಸ್ತುತ ದಿನಗಳಲ್ಲಿ ವಿದ್ಯುತ್ ದರಗಳ ಹೆಚ್ಚಳದಿಂದ ಈಗಾಗಲೇ ಅಕ್ಕಿ ಗಿರಣಿದಾರರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಹೆಚ್ಚಳದಿಂದ ಗಿರಣಿಗಳನ್ನು ನಡೆಸುವುದು ಕಷ್ಟಕರವಾಗಿದ್ದು, ಅಕ್ಕಿ ಗಿರಣಿಧಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಆದಷ್ಟು ಶೀಘ್ರವಾಗಿ ವಿದ್ಯುತ್ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆAದು ಒತ್ತಾಯಿಸಿದರು. ಜೊತೆಗೆ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ನಿರ್ಧಾರದಂತೆ ಎ.ಪಿ.ಎಂ.ಸಿ. ಕಾಯ್ದೆಯನ್ನು ಪುನಃ ಹಿಂದಿನ ರೀತಿಯಂತೆ ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರದಿಂದ ಅಕ್ಕಿಗಿರಣಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಇದರಿಂದ ಅಕ್ಕಿ ಗಿರಣಿ ಉದ್ಯಮಗಳು ತೀವ್ರತರವಾದ ತೊಂದರೆಗೆ ಸಿಲುಕುತ್ತದೆಂದರು. ಅಕ್ಕಿಗಿರಣಿದಾರರು ಕೃಷಿ ಮಾರುಕಟ್ಟೆಯ ಯಾವುದೇ ಸೌಕರ್ಯದ ಬಳಕೆ ಮಾಡುತ್ತಿಲ್ಲವಾದ್ದರಿಂದ ಅಕ್ಕಿಗಿರಣಿದಾರರನ್ನು ಸದರಿ ಕಾಯ್ದೆಯ ವ್ಯಾಪ್ತಿಯಿಂದ ಹೊರತುಪಡಿಸಬೇಕೆಂದು ಒತ್ತಾಯ ಮಾಡುತ್ತಿದ್ದೇವೆಂದರು.
ಮುAದುವರೆದು ನಿಯಮಾನುಸಾರ ರೈತರು ಬೆಳೆದ ಭತ್ತವನ್ನು ರಾಜ್ಯದ ಯಾವುದೆ ಮಾರುಕಟ್ಟೆಗೆ ಕೊಂಡೊಯ್ಯಲು ಮತ್ತು ಮಾರಾಟ ಮಾಡಲು ಅನುಕೂಲವಿರುತ್ತಿತ್ತು. ಆದರೆ ಎ.ಪಿ.ಎಂ.ಸಿ. ಕಾಯ್ದೆ ಒಂದು ವೇಳೆ ಜಾರಿಯಾದಲ್ಲಿ ರೈತರು ಭತ್ತ ಸಾಗಣೆ ಮಾಡಲು ತೊಂದರೆಯಾಗುತ್ತದೆ ಆದುದರಿಂದ ಇದನ್ನು ಜಾರಿ ಮಾಡಬಾರದೆಂಬುದು ತಮ್ಮ ಒತ್ತಾಯವಾಗಿದೆಂದರು. ಹಾಗೊಂದು ವೇಳೆ ಈ ರೀತಿಯಾಗಿ ಹೊಸ ಕಾಯ್ದೆ ಮಾಡಬೇಕಾದಲ್ಲಿ ಅಕ್ಕಿ ಗಿರಣಿಗಳ ಒಕ್ಕೂಟದವರ ಸಭೆಯನ್ನು ಕರೆದು ಸಮಗ್ರ ಚರ್ಚೆ ಮಾಡಿ ತದನಂತರ ಕಾಯ್ದೆಯನ್ನು ತಿದ್ದುಪಡಿ / ರೂಪಿಸಬೇಕೆಂಬುದು ನಮ್ಮ ಒತ್ತಾಯವಾಗಿದೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದರು.
ಇನ್ನು ರಮೇಶ್ ಬಾಬುರವರು ಮಾತನಾಡುತ್ತ ಹಾಲಿ ನಮ್ಮ ರಾಜ್ಯದಲ್ಲಿ ಬೆಳೆಯುತ್ತಿರುವ ಭತ್ತದೊಂದಿಗೆ ಹೊರ ರಾಜ್ಯಗಳಿಂದಲೂ ಭತ್ತವನ್ನು ಸರ್ಕಾರವೇ ಎಂ.ಎಸ್.ಪಿ. ಬೆಂಬಲಬೆಲೆ ಯೋಜನೆ ಅಡಿಯಲ್ಲಿ ಅಧಿಕ ಪ್ರಮಾಣದ ಭತ್ತವನ್ನು ಖರೀದಿಸಿ ತಂದು ನಮ್ಮ ಗಿರಣಿಗಳಲ್ಲಿಯೇ ಸಂಸ್ಕರಿಸಿ ಅಧಿಕ ಪ್ರಮಾಣದ ಅಕ್ಕಿ ನಮ್ಮ ರಾಜ್ಯದ ಜನತೆಗೆ ಲಭ್ಯವಾಗುವಂತೆ ಮಾಡಬೇಕೆಂಬುದು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆಂದರು ಇನ್ನು ಈ ರೀತಿಯಾಗಿ ಮಾಡುವುದರಿಂದ ಸರ್ಕಾರದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಯೋಜನೆಗೂ ಸಹಕಾರಿಯಾಗುತ್ತದೆಂದು ಈ ಮೂಲಕ ಸರ್ಕಾರಕ್ಕೆ ಸಲಹೆ ನೀಡುತ್ತಿದ್ದೇವೆಂದರು.
ತಮ್ಮ ಮನವಿಯನ್ನು ಸರ್ಕಾರವು ಪುರಸ್ಕರಿಸದೇ ಇದ್ದಲ್ಲಿ ರಾಜ್ಯದ ಅಕ್ಕಿ ಗಿರಣಿಗಳ ಹಿತಾಸಕ್ತಿಗೆ ಪ್ರತಿಕೂಲವಾದ್ದಲ್ಲಿ, ಅಕ್ಕಿ ಗಿರಣಿಗಳು ಕಾರ್ಯನಿರ್ವಹಿಸದೆ ಸ್ಥಗಿತಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅಂತಹ ಸಂದಿಗ್ಧ ಪರಿಸ್ಥಿತಿಗೆ ಅವಕಾಶ ನೀಡಬಾರದೆಂದು ಸರ್ಕಾರಕ್ಕೆ ಮನವರಿಕೆ ಮಾಡುತ್ತಿದ್ದೇವೆ ಎಂದರು ಅಲ್ಲದೇ ಸರ್ಕಾರ ತಮ್ಮಗಳಿಗೆ ಪ್ರತಿಕ್ರಿಯೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಅಲ್ಲದೇ ಅಕ್ಕಿ ಗಿರಣಿಗಳು ಮುಚ್ಚಿ ಪ್ರತಿಭಟನೆ ಮಾಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಕ್ಕಿ ಗಿರಣಿ ಸಂಘದ ಎನ್.ಆರ್.ವಿಶ್ವರಾಧ್ಯ, ಆರ್.ಎಲ್.ರಮೇಶ್ ಬಾಬು, ಕೆ.ಜಿ.ಮುನಿಗಂಗಪ್ಪ, ಟಿ.ಎಸ್.ಪ್ರಿತೇಶ್, ಕೆ.ನಂಜುAಡ ಪ್ರಸಾದ್, ಎಸ್.ಆರ್.ಜಗನ್ನಾಥ್ ಶೆಟ್ಟಿ, ಕೆ.ನಟೇಶ್ ಬಾಬು ಹಾಗೂ ಇತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleರೈತರನ್ನು ಗೌರವಿಸಿ ಕೆಲಸ ಮಾಡಿಕೊಡಿ : ಡಿ.ಸಿ ಶ್ರೀನಿವಾಸ್ ಸಲಹೆ
Next Article ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ : ಶಾಸಕ ಜಿ.ಬಿ.ಜೋತಿಗಣೇಶ್
News Desk Benkiyabale

Related Posts

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm news

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm news

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm news
ತಾಜಾ ಸುದ್ಧಿಗಳು

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
news

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm
news

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm
news

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
Our Youtube Channel
Our Picks

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

By News Desk BenkiyabaleSeptember 25, 2026 6:07 pm

ತುಮಕೂರು: ಲೇಖಕಿ ವಿವೇಕ ಕೆ.ವಿ. ಅವರು ರಚಿಸಿರುವ ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕಥಾ ಸಂಕಲನವು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ…

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm

ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ

September 25, 2026 6:02 pm

ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ

September 25, 2026 6:00 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.