BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಅರಿವು ಅಗತ್ಯ : ಗಿರಿಜಾ ಧನಿಯಕುಮಾರ್
ಇತರೆ ಸುದ್ಧಿಗಳು

ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಅರಿವು ಅಗತ್ಯ : ಗಿರಿಜಾ ಧನಿಯಕುಮಾರ್

By News Desk BenkiyabaleUpdated:July 26, 2023 4:52 pm

ತುಮಕೂರು


ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಕ್ಕಳು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮಹಾನಗರಪಾಲಿಕೆಯ ೧೫ನೇ ವಾರ್ಡಿನ ಸದಸ್ಯೆ ಶ್ರೀಮತಿ ಗಿರಿಜಾ ಧನಿಯಕುಮಾರ್ ತಿಳಿಸಿದ್ದಾರೆ.
ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಬಯಲು ರಂಗಮAದಿರದಲ್ಲಿ ಜುಲೈ ೨೮ರ ವಿಶ್ವ ಪರಿಸರ ಸಂರಕ್ಷಣಾ ದಿನ ಹಾಗೂ ಪ್ಲಾಸ್ಟಿಕ್ ಮುಕ್ತ ತುಮಕೂರು ಅಭಿಯಾನದ ಅಂಗವಾಗಿ ನಗರಪಾಲಿಕೆ,೧೫ನೇ ವಾರ್ಡಿನ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್,ಜೆ.ಡಿ.ಸ್ಕೂಲ್ ಅಫ್ ಅರ್ಟ್ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಾಲಾ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡುಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಭವಿಷ್ಯ ಪ್ರಜೆಗಳಾದ ಮಕ್ಕಳು,ತಾವು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿಕೊಳ್ಳು ವುದಲ್ಲದೆ,ಮನೆಯಲ್ಲಿ ತಮ್ಮ ತಂದೆ,ತಾಯಿಗಳಿಗೆ, ನೆರೆ, ಹೊರೆಯವರಿಗೂ ತಿಳಿಸುವ ಪರಿಸರ ರಾಯಭಾರಿಗಳಾಗಿ ಕೆಲಸ ಮಾಡಬೇಕೆಂದರು.
ಬಾಲಾಜಿ ಪುಡ್‌ವರ್ಲ್ಡ್ನ ಸಂತೋಷ್ ಮಾತನಾಡಿ,ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್ ಮತ್ತು ಶ್ರೀಮತಿ ಗಿರಿಜಾ ಧನಿಯಕುಮಾರ್ ಅವರದ್ದು ಸೃಜನ ಶೀಲ ವ್ಯಕ್ತಿತ್ವ.ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಎಲ್ಲಾ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಪರಿಸರದ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ಚಿತ್ರ ಕಲಾ ಸ್ಪರ್ಧೆ ಶ್ಲಾಘನೀಯ ಎಂದರು.
ನಗರಪಾಲಿಕೆ ಪರಿಸರ ಇಂಜಿನಿಯರ್ ಶ್ರೀಮತಿ ಪೂರ್ಣೀಮ ಮಾತನಾಡಿ,ರಾಜ್ಯದಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಿ ಇಂದಿಗೆ ಒಂದು ವರ್ಷ ತುಂಬಿದೆ.ಹಾಗಾಗಿ ಜುಲೈ ತಿಂಗಳಲ್ಲಿ ತುಮಕೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಪಾಲಿಕೆ ಮುಂದಾಗಿದೆ.ಇದಕ್ಕೆ ೧೫ನೇ ವಾರ್ಡಿನ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್ ಸಹಕಾರ ನೀಡಿದ್ದಾರೆ.ಜುಲೈ೨೮ರ ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಮಕ್ಕಳಲ್ಲಿ ಮೊದಲು ಪರಿಸರದ ಬಗ್ಗೆ ಕಾಳಜಿ ಬಂದರೆ, ಅವರಿಂದ ದೊಡ್ಡವರು ಕಲಿಯುತ್ತಾರೆ ಎಂಬುದು ನಮ್ಮ ಉದ್ದೇಶವಾಗಿದೆ.ಮನೆ ಮನೆ ಕಸ ಸಂಗ್ರಹಕ್ಕೆ ಬರುವ ವಾಹನಕ್ಕೆ ಹಸಿಕಸ,ಒಣಕಸ ವಿಂಗಡಿಸಿ ನೀಡುವುದು.ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಬ್ಯಾಗ್,ಸ್ಟೀಲ್ ಊಟದ ಡಬ್ಬಿ,ಕುಡಿಯುವ ನೀರಿನ ಬಾಟಲ್ ಉಪಯೋಗಿಸುವುದರಿಂದ ಮಾರಕ ರೋಗಗಳಿಂದ ತಮ್ಮ ಮಕ್ಕಳನ್ನು ಪೋಷಕರು ಕಾಪಾಡಬಹುದು ಎಂದು ಸಲಹೆ ನೀಡಿದರು.
ಜೆ.ಡಿ.ಸ್ಕೂಲ್ ಅಫ್ ಅರ್ಟ್ಸ್ನ ಮುಖ್ಯಸ್ಥರಾದ ಡೇವಿಡ್ ಮಾತನಾಡಿ,ಚಿತ್ರಕಲೆ ಎಂಬುದು ಒಂದು ಪ್ರಬಲ ಮಾಧ್ಯಮ.ಅದರ ಮೂಲಕ ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಇದೊಂದು ಒಳ್ಳೆಯ ಪ್ರಯತ್ನ.೧೫ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್ ಮತ್ತು ಕನ್ನಡಸೇನೆಯ ಅಧ್ಯಕ್ಷರಾದ ಧನಿಯಕುಮಾರ್ ಅವರು ತಮ್ಮ ವಾರ್ಡಿನಲ್ಲಿ ಈ ರೀತಿಯ ಒಂದಿಲೊAದು ಕಾರ್ಯಕ್ರಮ ಆಯೋಜಿಸುತ್ತಾ ಮಕ್ಕಳನ್ನು ಅದರಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ.ಇಲ್ಲಿ ಪ್ರಶಸ್ತಿ ಎಂಬುದು ಒಂದು ಸಂಕೇತವಷ್ಟೇ. ಮಕ್ಕಳು ಪರಿಸರದ ಬಗ್ಗೆ ಎಷ್ಟು ತಿಳಿದುಕೊಂಡಿದ್ದಾರೆ ಎಂಬುದಕ್ಕೆ ಈ ಚಿತ್ರಕಲಾ ಸ್ಪರ್ಧೆ ಸಾಕ್ಷಿಯಾಗಲಿದೆ ಎಂದರು.
ಪ್ಲಾಸ್ಟಿಕ್ ಮುಕ್ತ ತುಮಕೂರು ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರಾಥಮಿಕ,ಮಾಧ್ಯಮಿಕ ಹಾಗೂ ಪ್ರೌಢಶಾಲಾ ಎಂಬ ವಿಭಾಗ ಮೂರು ಹಂತದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಕ್ಕಳಿಗೆ ಪ್ರಶಂಸನಾ ಪತ್ರ ಹಾಗೂ ಪೆನ್ ನೀಡಿ ಅಭಿನಂದಿಸಲಾಯಿತು.
ಈ ವೇಳೆ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್,ಜೆ.ಡಿ.ಸ್ಕೂಲ್ ಅಫ್ ಆರ್ಟ್ಸ್ನ ಉಪನ್ಯಾಸಕರಾದ ಸಿಸಿಲಿಯ ಹಾಗೂ ಸ್ಪರ್ಧೆಗೆ ಆಗಮಿಸಿದ್ದ ಮಕ್ಕಳ ಪೋಷಕರು
ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಭರವಸೆ ಈಡೇರಿಸುತ್ತೇವೆ : ಮನವಿ ಸ್ವೀಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶ್ವಾಸನೆ
Next Article ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಲು ಮನವಿ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.