BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ : ಗೃಹ ಸಚಿವ
ಇತರೆ ಸುದ್ಧಿಗಳು

ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ : ಗೃಹ ಸಚಿವ

By News Desk BenkiyabaleUpdated:July 28, 2023 5:26 pm

ತುಮಕೂರು


ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಹೊಸ ಕಾನೂನು ಜಾರಿಗೆ ತರುವ ಸಂಬAಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಫೇಕ್ ನ್ಯೂಸ್‌ಗಳ ನಿಯಂತ್ರಣಕ್ಕೆ ಕಾನೂನು ತರುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರ್ಕಾರದ ಬಗ್ಗೆ, ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತವನ್ನು ಯಾರೂ ಊಹೆ ಮಾಡಿರುವುದಿಲ್ಲ ಎಂದರು.
ರಾಜಕೀಯದಲ್ಲಿ ಟೀಕೆ, ಟಿಪ್ಪಣಿ ಸರ್ವೆ ಸಾಮಾನ್ಯ. ಪತ್ರಿಕೆಗಳಲ್ಲಿ ಬರುವ ಟೀಕೆಗಳು ರಾಜಕಾರಣಿಗಳು ಮಾಡುವ ತಪ್ಪನ್ನು ಎಚ್ಚರಿಸುವಂತಿರಬೇಕು. ಆದರೆ ಆ ಟೀಕೆ ಸುಳ್ಳಾಗಬಾರದು. ಹೀಗಿದ್ದಾಗ ಮಾತ್ರ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯೋನ್ಮುರಾಗಬೇಕು ಎಂದು ಸಲಹೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ೪ನೇ ಅಂಗವಾಗಿರುವ ಪತ್ರಿಕೋದ್ಯಮಕ್ಕೆ ರಾಜಕಾರಣಿಗಳಿಗಿಂತಲೂ ಮಿಗಿಲಾದ ಜವಾಬ್ದಾರಿ ಇದೆ. ಪತ್ರಿಕೋದ್ಯಮ ಕೇವಲ ಒಂದು ವೃತ್ತಿಯಲ್ಲ, ಇದು ಸಮಾಜದ ದೊಡ್ಡ ಜವಾಬ್ದಾರಿ ಕೆಲಸ ಎಂದರು.
ಮಾಧ್ಯಮ ಕ್ಷೇತ್ರ ಎಲ್ಲದಕ್ಕಿಂತ ಹೆಚ್ಚು ಶಕ್ತಿಶಾಲಿ. ಬಂದೂಕಗಿAತಲೂ ಪೆನ್ನು ಹೆಚ್ಚು ಪವರ್‌ಫುಲ್. ಇದನ್ನು ಪತ್ರಕರ್ತರು ಸಮಾಜದ ಒಳಿತಿಗೆ, ಶೋಷಿತರು, ಅಶಕ್ತರ ಬದುಕು ಉತ್ತಮಗೊಳ್ಳುವಂತೆ ಮಾಡಲು ಬಳಸಬೇಕು ಎಂದ ಅವರು, ಪತ್ರಕರ್ತರು ಬರೆಯುವ ಲೇಖನಗಳು ಸಮಾಜಮುಖಿಯಾಗಿರಬೇಕು. ಇದು ಪ್ರತಿಯೊಬ್ಬ ಪತ್ರಕರ್ತನ ಆದ್ಯ ಕರ್ತವ್ಯ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ನೈಜ ಪತ್ರಕರ್ತರ ಸಂಖ್ಯೆ ಕಡಿಮೆಯಾಗುತ್ತಿದ್ದು, ಜೊಳ್ಳು ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಜೊಳ್ಳು (ನಕಲಿ) ಪತ್ರಕರ್ತರನ್ನು ಆಚೆ ಹಾಕುವಂತಹ ಕೆಲಸವನ್ನು ನಾವೇ ಮಾಡಬೇಕಾಗಿದೆ ಎಂದು ಹೇಳಿದರು.
ನಕಲಿ ಪತ್ರಕರ್ತರನ್ನು ನಮ್ಮ ಕ್ಷೇತ್ರದಿಂದ ಆಚೆ ಹಾಕದಿದ್ದರೆ ನೈಜ ಪತ್ರಕರ್ತರಿಗೆ ಉಳಿಗಾಲವಿಲ್ಲ. ಹಾಗಾಗಿ ನೈಜ ಪತ್ರಕರ್ತರು ಒಗ್ಗಟ್ಟಾಗಿರಬೇಕು. ಆಗ ಮಾತ್ರ ಜೊಳ್ಳು ಪತ್ರಕರ್ತರ ಹಾವಳಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.
ಪತ್ರಕರ್ತರು ಸುದ್ದಿ ಬರೆಯುವಾಗ ಪದ ಬಳಕೆ ಬಗ್ಗೆ ಪರಿಜ್ಞಾನ ಹೊಂದಿರಬೇಕು. ನಾವು ಬಳಸುವ ಪದ ಸಮಾಜಕ್ಕೆ, ವ್ಯಕ್ತಿಗೆ ಘಾಸಿ ಮಾಡುವಂತಿರಬಾರದು ಎಂದು ಅವರು ಸಲಹೆ ಮಾಡಿದರು.
ಇಂದು ನೈಜ ಪತ್ರಕರ್ತರಿಗಿಂತ ಬ್ಲಾಕ್‌ಮೇಲ್ ಪತ್ರಕರ್ತರ ಸಂಖ್ಯೆ ಹೆಚ್ಚಳವಾಗಿದೆ. ನಕಲಿ ಸುದ್ದಿ, ಪೋಸ್ಟರ್‌ಗಳನ್ನು ಟ್ರೋಲ್ ಮಾಡುವವರ ವಿರುದ್ಧ ಕೇಸ್ ಹಾಕುವಂತಹ ಕೆಲಸವನ್ನು ಸರ್ಕಾರ ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದರು.
ಆದರೆ ಪೊಲೀಸರು ಪತ್ರಕರ್ತರ ವಿರುದ್ಧ ದೂರು ಬಂದಾಗ ಒಮ್ಮೆ ಆ ದೂರು, ಘಟನೆ ಬಗ್ಗೆ ಪರಾಮರ್ಶಿಸಿ ನಂತರ ಕೇಸು ದಾಖಲಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಆ ಪತ್ರಕರ್ತ ಕೇಸುಗಳ ಮಧ್ಯೆ ಸಿಲುಕಿ ಆಚೆ ಬರಲು ಒದ್ದಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಗೃಹ ಸಚಿವ ಡಾ. ಪರಮೇಶ್ವರ್ ಅವರಿಗೆ ಮನವಿ ಮಾಡಿದರು.
ಸಿದ್ದಗಂಗಾ ಆಸ್ಪೆçಯ ಆರೋಗ್ಯ ಸಿದ್ದಿ ಉಚಿತ ಒಪಿಡಿ ನಮೂನೆ ಬಿಡುಗಡೆ ಮಾಡಿದ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಪತ್ರಕರ್ತರಿಗೆ ಸಾಮಾಜಿಕ ಭದ್ರತೆ, ಆರೋಗ್ಯ ವಿಮೆ ಒದಗಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತ ಸಂಘ ಕಾರ್ಯೋನ್ಮುಖರಾಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಗ್ರಾಮೀಣ ಪ್ರದೇಶದ ಎಲ್ಲ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು.
ನೆನೆಗುದಿಗೆ ಬಿದ್ದಿರುವ ತುಮಕೂರು ಪತ್ರಕರ್ತರಿಗೆ ನಿವೇಶನ ನೀಡುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಪತ್ರಕರ್ತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆಯೂ ಕೋರಿದರು.
ರಾಜ್ಯ ಸರ್ಕಾರ ನಿವೃತ್ತ ಪತ್ರಕರ್ತರಿಗೆ ನೀಡುವ ಮಾಸಾಶನವನ್ನು ೧೦ ಸಾವಿರದಿಂದ ೧೨ ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸಿದ್ದಗಂಗಾ ಆಸ್ಪೆçಯ ಆರೋಗ್ಯ ಸಿದ್ದಿ ಉಚಿತ ಒಪಿಡಿ ನಮೂನೆ ಬಿಡುಗಡೆ ಮಾಡಲಾಯಿತು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಜಿ.ಪಂ. ಸಿಇಓ ಜಿ. ಪ್ರಭು, ಸಿದ್ದಗಂಗಾ ಆಸ್ಪತ್ರೆಯ ಡಾ. ಎಸ್. ಪರಮೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್. ಮಮತ, ತಹಶೀಲ್ದಾರ್ ಕಮಲಮ್ಮ ಮತ್ತಿತರರು ಉಪಸ್ಥಿತರಿದ್ದರು.
ದಿಬ್ಬೂರು ಮಂಜು ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಟಿ. ರಘುರಾಮ್ ಸ್ವಾಗತಿಸಿದರು.

(Visited 1 times, 1 visits today)
tumkur
Previous Articleಪೌರ ಕಾರ್ಮಿಕರನ್ನು ಸಮಾಜ ಗೌರವಯುತವಾಗಿ ನಡೆಸಿಕೊಳ್ಳಬೇಕು : ಸಚಿವ
Next Article ಬಿಜೆಪಿ ಕಾರ್ಯಕರ್ತೆ ಬಂಧನ: ಸರಕಾರದ ಸರ್ವಾಧಿಕಾರಿ ಧೋರಣೆ – ಶಾಸಕ ಜೋತಿ ಗಣೇಶ್
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.