BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ
ಇತರೆ ಸುದ್ಧಿಗಳು

ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ

By News Desk BenkiyabaleUpdated:August 17, 2023 4:52 pm

ತುಮಕೂರು


ಪ್ರತಿ ಹೋಬಳಿಯ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಅಧಿಕಾರಿಗಳು ನಡೆಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸಬೇಕೆಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಧುಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿAದು ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನ ಐ.ಡಿ ಹಳ್ಳಿಯಲ್ಲಿ ಆಗಸ್ಟ್ ೨೩ರಂದು ಮತ್ತು ದೊಡ್ಡೆರಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ಆಗಸ್ಟ್ ೩೦ರಂದು ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಸಭೆಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಬೇಕೆಂದು ಸೂಚಿಸಿದರು.
ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಗೊಳ್ಳಬೇಕು. ಇದಕ್ಕಾಗಿ ಅಗತ್ಯ ನೆರವನ್ನು ಒದಗಿಸಲಾಗುವುದು ಎಂದ ಅವರು, ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಯನ್ನು ತೆರವುಗೊಳಿಸಲು ಕ್ರಮವಹಿಸಬೇಕು. ಮಾಯಗೊಂಡನಹಳ್ಳಿ ಗ್ರಾಮದಲ್ಲಿ ಮಕ್ಕಳು ಶಾಲೆಗೆ ಹೋಗಲು ದಾರಿ ಬಿಡದೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ದೂರು ನೀಡಿದ್ದು, ಇದನ್ನು ಕೂಡಲೇ ಬಗೆಹರಿಸಬೇಕೆಂದು ತಿಳಿಸಿದರು.
ತಾಲ್ಲೂಕು ವ್ಯಾಪ್ತಿಯ ರೈಲ್ವೆ ಯೋಜನೆಗಳು, ಎತ್ತಿನಹೊಳೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಭೂಸ್ವಾಧೀನಕ್ಕೆ ಸರ್ಕಾರದಿಂದ ಬಿಡುಗಡೆಯಾಗಿರುವ ಹಣವನ್ನು ಸಂಪೂರ್ಣವಾಗಿ ಬಳಸಿ ರೈತರಿಗೆ ತ್ವರಿತವಾಗಿ ಪಾವತಿಸಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನಲ್ಲಿ ೧೩ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ೫೬ ಉಪ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಹೊಸದಾಗಿ ಅಗತ್ಯವಿರುವ ಕಡೆ ೨೫ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕುರಿತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು.
ತಾಲ್ಲೂಕಿನಲ್ಲಿ ಅನುಷ್ಟಾನಗೊಳ್ಳುತ್ತಿರುವ ೩೭೬ ಜಲಜೀವನ್ ಮಿಷನ್ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡುವಂತೆ ಸೂಚಿಸಿದ ಸಚಿವರು, ತಾಲ್ಲೂಕಿನಲ್ಲಿ ಹೆಚ್ಚು ಕೂಲಿಕಾರ್ಮಿಕರಿದ್ದು, ಇವರನ್ನು ಸಮರ್ಪಕವಾಗಿ ನರೇಗಾ ಯೋಜನೆಯಡಿ ಬಳಸಿಕೊಂಡು ಶೇ.೧೦೦ರಷ್ಟು ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.
ಅಂತರಾಜ್ಯ ಸಂಪರ್ಕ ಕಲ್ಪಿಸುವ ಗಡಿ ಭಾಗಗಳಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಬೇಕು ಕಾನೂನುಬಾಹಿರ ಕೃತ್ಯಗಳ ಎಸಗಿದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ತಡೆಯಲು ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು
ತಾಲೂಕಿನಲ್ಲಿ ಗಾಂಜಾ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೊಲೀಸರು ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲಾ ಮಟ್ಟದ ಆಡಳಿತವು ಇಂದು ತಾಲ್ಲೂಕಿನಲ್ಲಿ ಸಭೆ ಸೇರಿದ್ದು, ಇದರ ಮಹತ್ವವನ್ನು ನಾವೆಲ್ಲಾ ಅರಿತುಕೊಂಡು ಕಾರ್ಯಪ್ರವೃತ್ತರಾಗಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸಬೇಕಿದೆ. ಸುಮಾರು ೬೦೦ ಕೋಟಿ ಹಣವನ್ನು ವಿವಿಧ ಇಲಾಖೆಗಳಿಗೆ ಹಂಚಲಾಗಿದ್ದು, ವೇತನೇತರ ವೆಚ್ಚಗಳು ಸ್ಪಷ್ಟವಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ನಿಗಧಿತ ಅವಧಿಯಲ್ಲಿ ಗುರಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿರುವ ೨೧೧ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ೩೮ ಘಟಕಗಳು ದುರಸ್ತಿಗೊಳಗಾಗಿದ್ದು, ಇದರಲ್ಲಿ ಈಗಾಗಲೇ ೩೪ ಘಟಕಗಳನ್ನು ದುರಸ್ತಿಪಡಿಸಲಾಗಿದೆ. ಉಳಿದ ೪ ಘಟಕಗಳನ್ನು ತ್ವರಿತವಾಗಿ ದುರಸ್ತಿಪಡಿಸಲು ಕ್ರಮವಹಿಸಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಶಾಸಕರಾದ ರಾಜೇಂದ್ರ ರಾಜಣ್ಣ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಉಪವಿಭಾಗಾಧಿಕಾರಿ ರಿಷಿ ಆನಂದ್, ಡಿಹೆಚ್‌ಓ ಡಾ: ಮಂಜುನಾಥ್, ಆಯುಷ್ ಇಲಾಖೆಯ ಡಾ: ಮಾರುತಿ, ಡಾ: ಪ್ರಿಯದರ್ಶಿನಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪ್ರಕಾಶ್ ರೈ ನೇತೃತ್ವದಲ್ಲಿ ೧೯ ಕ್ಕೆ `ಗಾಯಗಳು’ ನಾಟಕ ಪ್ರದರ್ಶನ
Next Article ‘ನಂಜುAಡಸ್ವಾಮಿ ಅವರ ರೈತಪರ ಚಳವಳಿ ರಾಷ್ಟçವ್ಯಾಪಿಯಾಗಿತ್ತು’
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.