BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ
  • ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ
  • ಕೊಲೆ ಪ್ರಕರಣದ ಆರೋಪಿಗಳ ಬಂಧನ
  • ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
  • ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ
  • ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ
  • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸರಿಂದ ಸಂಕಲ್ಪ
  • ವಿದ್ಯಾರ್ಥಿ ನಿಲಯದ ಮುಂಭಾಗ ಹರಿಯುತ್ತಿರುವ ಚರಂಡಿ ನೀರು: ಕ್ರಮಕ್ಕೆ ಸಾರ್ವಜನಿಕರ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

By News Desk BenkiyabaleUpdated:September 25, 2023 5:06 pm

ತುಮಕೂರು


ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ.ಪರಮೇಶ್ವರ್ ಅವರು ತಿಳಿಸಿದರು.
ಅವರಿಂದು ‘ಗಾಜಿನ ಮನೆ ಅಮಾನಿಕೆರೆ’ ಪಾರ್ಕ್ ತುಮಕೂರು ಇಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಜನತಾ ದರ್ಶನ ಕಾರ್ಯಕ್ರಮ’ದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರವೇ ತೆರಳುವ ಕಾರ್ಯಕ್ರಮ ‘ಜನತಾ ದರ್ಶನ ಕಾರ್ಯಕ್ರಮ’ವಾಗಿದ್ದು, ಈ ಮೂಲಕ ನಮ್ಮ ಸರ್ಕಾರ ಜನಪರ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದು, ನುಡಿದಂತೆ ನಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು.
ಸಾರ್ವಜನಿಕರ ಅಹವಾಲು ಆಲಿಸುವ ಕೆಲಸ ತಾಲ್ಲೂಕು ಮಟ್ಟ/ ಹೋಬಳಿ ಮಟ್ಟ/ ಗ್ರಾಮಪಂಚಾಯತಿ ಮಟ್ಟದಲ್ಲೂ ಆಗಬೇಕಿದೆ. ಜನರ ಕೆಲಸಗಳು ಪ್ರಾಥಮಿಕವಾಗಿ ಪ್ರಾರಂಭವಾಗುವ ಸ್ಥಳ ಗ್ರಾಮಪಂಚಾಯತಿಗಳು. ಅಲ್ಲಿ ಸಮಸ್ಯೆ ಬಗೆಹರಿದಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಗಳಿಗೆ ತರುವುದಿಲ್ಲ ಎಂದರು.
ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದಂತಹ ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬAಧಪಟ್ಟದ್ದಾಗಿದೆ. ತಹಶೀಲ್ದಾರರು ಸಲ್ಲಿಕೆಯಾದಂತಹ ಅರ್ಜಿಗಳನ್ನು ಇಟ್ಟುಕೊಳ್ಳದೆ ನಿಗಧಿತ ಅವಧಿಯೊಳಗಾಗಿ ವಿಲೇವಾರಿ ಮಾಡಬೇಕು. ಮುಂದಿನ ದಿನಗಳಲ್ಲಿ ಅರ್ಜಿ ದಾಖಲಾದ ದಿನ, ವಿಲೇವಾರಿಯಾದ ದಿನಾಂಕವನ್ನೂ ಸಹ ಇಲಾಖಾವಾರು ಪರಿಶೀಲಿಸುವುದಾಗಿ ಸಚಿವರು ತಿಳಿಸಿದರು.
ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ತಾಂತ್ರಿಕತೆ ಬಳಸಿಕೊಂಡು ಜನರ ಸಮಸ್ಯೆಗಳನ್ನು ಬಗೆಹರಿಸುವಂತಹ ಕೆಲಸ ಪರಿಣಾಮಕಾರಿಯಾಗಿ ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಾಮೀಣ ಜನತೆಗೂ ಸಹ ಸರ್ಕಾರಿ ಕೆಲಸ ಕಾರ್ಯಗಳ ಮೂಲಕ ತಾಂತ್ರಿಕತೆಯನ್ನು ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಜನತಾ ದರ್ಶನದಲ್ಲಿ ಸಲ್ಲಿಸಲು ಬರುವ ಶೇ.೭೦ ರಿಂದ ೮೦ರಷ್ಟು ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬAಧಿಸಿದ್ದಾಗಿರುತ್ತದೆ. ಜನರ ಸಮಸ್ಯೆಗಳನ್ನು ಮಾನವೀಯ ಹಿನ್ನೆಲೆಯಲ್ಲಿ ಆಲಿಸಿ ಇತ್ಯರ್ಥಪಡಿಸುವುದೇ ಜನತಾ ದರ್ಶನ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ರಾಜಧಾನಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸೂಚನೆ ನೀಡಿದ ಮೇರೆಗೆ ಇಂದು ರಾಜ್ಯದ ಎಲ್ಲೆಡೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯುತ್ತಿದ್ದು, ಅದರಂತೆ ಗೃಹ ಸಚಿವರ ನೇತೃತ್ವದಲ್ಲಿ ತುಮಕೂರಿನಲ್ಲಿಯೂ ಸಹ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಐಪಿಜಿಆರ್‌ಎಸ್ ಮೂಲಕ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿರುತ್ತದೆ ಮತ್ತು ಸಲ್ಲಿಕೆಯಾದಂತಹ ಅರ್ಜಿಗಳನ್ನು ಇನ್ನು ೧೦-೧೫ ದಿನಗಳೊಳಗಾಗಿ ಇತ್ಯರ್ಥಪಡಿಸುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ವಂದನಾರ್ಪಣೆ ಸಲ್ಲಿಸುತ್ತಾ ಮಾತನಾಡಿ, ಜಿಲ್ಲೆಯ ಎಲ್ಲಾ ಕಚೇರಿಗಳಲ್ಲೂ ಸಹ ಜನರ ಸಮಸ್ಯೆಗಳನ್ನು ಆಲಿಸುವಂತಹ ಕಾರ್ಯಕ್ರಮ ಆಗಬೇಕು. ಐಪಿಜಿಆರ್‌ಎಸ್ ಮೂಲಕ ಜನರ ಸಮಸ್ಯೆಗಳಿಗೆ ತಾರ್ಕಿತ ಅಂತ್ಯವನ್ನು ಆಡಬೇಕಿದ್ದು, ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಈ ಸಂದರ್ಭ ಸಾಂಕೇತಿಕವಾಗಿ ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವೃದ್ಧಾಪ್ಯವೇತನ ಸೌಲಭ್ಯಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು ಮತ್ತು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿAದ ವಿವಿಧ ಸಹಾಯಧನವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತುಮಕೂರು ಪ್ರಾದೇಶಿಕ ಆಯುಕ್ತರಾದ ತುಳಸಿ ಮದ್ದಿನೇನಿ, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಮೇಯರ್ ಪ್ರಭಾವತಿ, ಶಾಸಕ ವೆಂಕಟೇಶ್ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ
Next Article ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಡಾ.ಜಿ.ಪರಮೇಶ್ವರ ಸೂಚನೆ
News Desk Benkiyabale

Related Posts

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm news
ತಾಜಾ ಸುದ್ಧಿಗಳು
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm
news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm
news

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
news

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
news

ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ

July 29, 2026 4:13 pm
Our Youtube Channel
Our Picks

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

By News Desk BenkiyabaleJuly 29, 2026 4:22 pm

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯು ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಗುರಿ ಆಧಾರಿತ…

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.