ಕುಣಿಗಲ್:


ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಪಟ್ಟಣದ ಕೆಆರ್‌ಎಸ್ ಅಗ್ರಹಾರ ಹೊಸಬಡವಣೆ, ಬಾಲಕರ ವಸತಿ ನಿಲಯ ಸಮೀಪದಲ್ಲಿ ಈ ಘಟನೆ ನಡೆದಿದೆ.
ತುಮಕೂರು ತಾಲೂಕು ಹೆಬ್ಬರು ಹೋಬಳಿ, ಜಲ್ಲಿಪಾಳ್ಯ ಗ್ರಾಮದ ಅಂದಾನಯ್ಯ ಸೇರಿದಂತೆ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.
ಅAದಾನಯ್ಯ ಬಾಲಕರ ವಸತಿ ಗೃಹ ಸಮೀಪ ಮನೆಯೊಂದನ್ನು ಬಾಡಿಗೆ ಪಡೆದು ಇಬ್ಬರು ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಪಿಐ ನವೀನ್‌ಗೌಡ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಅಂದಾನಯ್ಯ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

(Visited 1 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp